ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ – ಸಿಎಂ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಹಾಕಿದ ಬಿಜೆಪಿ ಕಾರ್ಯಕರ್ತೆ ಪೊಲೀಸ್‌ ವಶಕ್ಕೆ

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ – ಸಿಎಂ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಹಾಕಿದ ಬಿಜೆಪಿ ಕಾರ್ಯಕರ್ತೆ ಪೊಲೀಸ್‌ ವಶಕ್ಕೆ

ಬೆಂಗಳೂರು: ಉಡುಪಿಯ ಕಾಲೇಜೊಂದರ ಟಾಯ್ಲೆಟ್​ನಲ್ಲಿ 3 ಮುಸ್ಲಿಂ ಯುವತಿಯರು ಹಿಂದೂ ಯುವತಿಯ ವಿಡಿಯೋ ಮಾಡಿದ ಆರೋಪ ಇತ್ತೀಚೆಗೆ ಕೇಳಿಬಂದಿದ್ದು ಅದರ ಸುತ್ತ ನಾನಾ ಬಗೆಯ ವಿವಾದಗಳು ಹುಟ್ಟಿಕೊಳ್ಳುತ್ತಿವೆ. ಈ ನಡುವೆ ಬಿಜೆಪಿಯ ಕಾರ್ಯಕರ್ತೆಯೊಬ್ಬರು, ಸಿದ್ದರಾಮಯ್ಯ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲ ನಟರಾಜ್​ನನ್ನು ಪೊಲೀಸರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಉಡುಪಿ ವಿಚಾರವಾಗಿ ಕಾಂಗ್ರೆಸ್ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಪೋಸ್ಟ್ ಮಾಡಲಾಗಿತ್ತು. ಈ ಪೋಸ್ಟ್‌ನಲ್ಲಿ ‘ಉಡುಪಿಯ ಕಾಲೇಜಿನಲ್ಲಿ “ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ’ ಎಂದು ನಕಲಿ ಸುದ್ದಿ ಸೃಷ್ಟಿಸಿ ಕೋಮು ಪ್ರಚೋದನೆಗೆ ಮುಂದಾಗಿರುವ ಬಿಜೆಪಿ ತೀರ್ಥಹಳ್ಳಿಯಲ್ಲಿ ಹಿಂದೂ ವಿದ್ಯಾರ್ಥಿನಿಯರ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ ABVP ಅಧ್ಯಕ್ಷನ ಅಸಲಿ ಸುದ್ದಿಯ ಬಗ್ಗೆ ಮೌನ ಮುರಿಯುವುದು ಯಾವಾಗ? ವಿದ್ಯಾರ್ಥಿನಿಯರ ಮಕ,ಳಾಟವನ್ನು ರಾಜಕೀಯದ ಕಳ್ಳಾಟಕ್ಕೆ, ಬಳಸಿಕೊಳ್ಳಲು ಉಪ್ಪು ಖಾರ, ಮಸಾಲೆಗಳನ್ನು ಬೆರಸಿ ಚಪ್ಪರಿಸಲು ಹೊರಟಿದ್ದ ಬಿಜೆಪಿಗೆ ನಮ್ಮ ದಕ್ಷಪೊಲೀಸರು ತಡಮಾಡದೆ ತನಿಖೆ ಮಾಡಿ ಸತ್ಯಾಂಶ ಬಯಲಿಗೆಳೆದು ನಿರಾಸೆ ಮೂಡಿಸಿದ್ದಾರೆ” ಎಂದು ಟ್ವೀಟ್ ಮಾಡಲಾಗಿತ್ತು. ಈ ಟ್ವೀಟ್‌ಗೆ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಪ್ರತಿಕ್ರಿಯೆ ನೀಡುವಾಗ, ಕಾಂಗ್ರೆಸ್​ ಮಾಡಿದ್ದ ಟ್ವೀಟನ್ನು ಟ್ಯಾಗ್ ಮಾಡಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಹೆತ್ತ ಮಗುವನ್ನೇ ಮಾರಿ ಐಫೋನ್‌ ಖರೀದಿಸಿದ ದಂಪತಿ! – ಬೀಚ್​ಗಳಲ್ಲಿ ದಂಪತಿಯ ಹನಿಮೂನ್!

ಈ ಟ್ವೀಟ್‌ನಲ್ಲಿ “ಇದನ್ನೆ ಸಿದ್ದರಾಮಯ್ಯ ಮುಸ್ಲಿಂ ಯುವತಿಯರು ಟಾಯ್ಲೆಟ್ ನಲ್ಲಿ ಕ್ಯಾಮೆರಾ ಇಟ್ಟು ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್‌ನವರ ಪ್ರಕಾರ ಮಕ್ಕಳಾಟವಂತೆ.. ಸಿದ್ದರಾಮಯ್ಯನವರ ಸೊಸೆ ಅಥವಾ ಹೆಂಡ್ತಿ ಅವ್ರ ವಿಡಿಯೋವನ್ನು ಇದೆ ತರ ಮಾಡಿದ್ರೆ ಅದನ್ನು ಮಕ್ಕಳಾಟ ಅಂತ ಒಪ್ಪೋತೀರಾ” ಎಂದು ಸಿಎಂ ವಿರುದ್ಧ ಕಿಡಿಕಾರಿ ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದರು.

ಈ ಪ್ರಕರಣದ ಕುರಿತಂತೆ, ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಬಿಜೆಪಿ ಕಾರ್ಯಕರ್ತೆ ಶಕುಂತಳಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೊಬೈಲ್ ನಲ್ಲಿ ವಿಡಿಯೋ ಚಿತ್ರೀಕರಣ ಮಾಡಿರುವ ಮೂವರು ವಿದ್ಯಾರ್ಥಿನಿಯರನ್ನು ಬಂಧಿಸಿವಂತೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚ  ಕಾರ್ಯಕರ್ತರು ಜುಲೈ 27 ಗೃಹ ಸಚಿವ ಪರಮೇಶ್ವರ ಅವರ ಸದಾಶಿವನಗರದ ನಿವಾಸದ ಮುಂದೆ ಪ್ರತಿಭಟನೆ ಮಾಡಿದ್ದರು. ಆದ್ರೆ, ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡು ಸದಾಶಿವನಗರ ಪೊಲೀಸ್​ ಠಾಣೆಗೆ ಕರೆದುಕೊಂಡು ಹೋಗಿದ್ದರು. ಇದೀಗ 10 ಕಾರ್ಯಕರ್ತರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

suddiyaana