ಮೈಸೂರು ಅರಮನೆಗೆ ಎರಡು ದಿನ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ
ಮೈಸೂರು: ಮೈಸೂರು ಪ್ರವಾಸ ಕೈಗೊಳ್ಳುವವರಿಗೆ ಮಹತ್ವದ ಸುದ್ದಿಯೊಂದಿದೆ. ಮುಂದಿನ ಎರಡು ದಿನಗಳ ಕಾಲ ಮೈಸೂರು ಅರಮನೆಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಜಿ20 ಶೃಂಗಸಭೆ ಗಣ್ಯರು ಮೈಸೂರು ಅರಮನೆಗೆ ಭೇಟಿ ನೀಡುತ್ತಿರುವ ಹಿನ್ನೆಲೆ ಎರಡು ದಿನಗಳ ಕಾಲ ಅರಮನೆಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಆಗಸ್ಟ್ 1 ಮತ್ತು 2ರಂದು ಅರಮನೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಆಗಸ್ಟ್ 1ರಂದು ಮಧ್ಯಾಹ್ನ 2:30ರಿಂದ ನಿರ್ಬಂಧ ಆದೇಶವನ್ನು ಹೊರಡಿಸಲಾಗಿದೆ.
ಇದನ್ನೂ ಓದಿ: ತಿರುಪತಿಗೂ KMFಗೂ ಇದ್ದ ಸಂಬಂಧ ಕಡಿತ – ಇನ್ಮುಂದೆ ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ನಂದಿನಿ ತುಪ್ಪ ಇರಲ್ಲ!
ಆಗಸ್ಟ್ 2 ರಂದು ರಾತ್ರಿ 7 ರಿಂದ 8 ಗಂಟೆಯವರೆಗೆ ನಡೆಯುವ ಧ್ವನಿ ಮತ್ತು ಬೆಳಕು ಕಾರ್ಯಕ್ರಮದವರೆಗೂ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಅಲ್ಲದೇ ಭದ್ರತಾ ದೃಷ್ಟಿಯಿಂದ ಅರಮನೆಯ ಸುತ್ತಮುತ್ತ ಡ್ರೋನ್ ಹಾರಾಟವನ್ನು ಸಹ ನಿಷೇಧಿಸಲಾಗಿದೆ. ಆದ್ದರಿಂದ ಎರಡು ದಿನಗಳ ಜಾಲ ರಾಜ್ಯದ ಸಾರ್ವಜನಿಕರು ಹಾಗೂ ಪ್ರವಾಸಿಗರು ಸಹಕಾರ ನೀಡಬೇಕು ಎಂದು ಅರಮನೆ ಆಡಳಿತ ಮಂಡಳಿಯು ಮನವಿ ಮಾಡಿದೆ.