ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮದ್ರಾಸ್ ಐ ಪ್ರಕರಣ ಹೆಚ್ಚಳ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾರ್ಗಸೂಚಿ
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮದ್ರಾಸ್ ಐ, ಪಿಂಕ್ ಐ ರೋಗದ ಪ್ರಕರಣಗಳು ಹೆಚ್ಚಳ ಗೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ಮದ್ರಾಸ್ ಐ ರೋಗ ಹೆಚ್ಚಾಗಿ ಮಕ್ಕಳಲ್ಲಿ ಕಂಡು ಬರುತ್ತಿದೆ. ಈ ರೋಗ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾದ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಅಲ್ಲದೇ ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳನ್ನು ತಿಳಿಸಿದೆ.
ಇದನ್ನೂ ಓದಿ: ಚಳಿಗಾಲಕ್ಕೂ ಮುನ್ನವೇ ರಾಜ್ಯದಲ್ಲಿ `ಮದ್ರಾಸ್ ಐ’ಕಂಟಕ – ಮಕ್ಕಳೇ ಇದರ ಟಾರ್ಗೆಟ್!
ಮದ್ರಾಸ್ ಐ ಪ್ರಕರಣ ಹೆಚ್ಚಳದ ಬಗ್ಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಈಗಾಗಲೇ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ಹಾಗೂ ರೋಗ ನಿಯಂತ್ರಣಕ್ಕೆ ಕ್ರಮ ವಹಿಸುತ್ತೆವೆ ಎಂದು ಹೇಳಿದ್ದಾರೆ.
ಮದ್ರಾಸ್ ಐ ರೋಗದ ಲಕ್ಷಣಗಳು
- ಕಣ್ಣು ಕೆಂಪಾಗುವುದು, ನೀರು ಸೋರುವಿಕೆ
- ಅತಿಯಾದ ಕಣ್ಣೀರು
- ಕಣ್ಣಿನಲ್ಲಿ ತುರಿಕೆ
- ಸತತ ಕಣ್ಣು ನೋವು ಮತ್ತು ಚುಚ್ಚುವಿಕೆ
- ಬೆಳಕನ್ನು ನೋಡಲು ಸಾಧ್ಯವಾಗದೇ ಇರುವುದು
- ದೃಷ್ಟಿ ಮಂಜಾಗುವುದು
- ಕಣ್ಣಿನ ಎರಡು ರೆಪ್ಪೆಗಳು ಕೀವು ಮಿಶ್ರಿತದಿಂದ ಕೂಡಿರುವುದು
ಮದ್ರಾಸ್ ಐ ಬರದಂತೆ ತಡೆಯುವುದು ಹೇಗೆ ?
- ವೈಯಕ್ತಿಕವಾಗಿ ಸ್ವಚ್ಛತೆ ಗೆ ಆದ್ಯತೆ ಕೊಡಿ
- ಆರೋಗ್ಯವಂತ ವ್ಯಕ್ತಿಯು ಸೊಂಕು ಇರುವ ವ್ಯಕ್ತಿಯ ಕಣ್ಣಿನ ನೇರ ಸಂಪರ್ಕದಿಂದ ದೂರ ಇರುವುದು.
- ಸೊಂಕಿತ ವ್ಯಕ್ತಿ ಬಳಸಿದ ಕರವಸ್ರ್ತ ಮತ್ತು ಇತರ ವಸ್ತುಗಳನ್ನು ಬಳಸಬಾರದು.
- ಆಗಾಗ್ಗೆ ಸೋಪು ನೀರಿನಿಂದ ಕೈಗಳನ್ನ ತೊಳೆಯಬೇಕು.
- 5.ಸೊಂಕಿತ ವ್ಯಕ್ತಿಗಳಿಗೆ ಶೀತ, ಜ್ವರ, ಕೆಮ್ಮು ಇದ್ದಲ್ಲಿ ಕೂಡಲೇ ಚಿಕಿತ್ಸೆ ಪಡೆಯಬೇಕು
- 6.ತೀವ್ರ ಸೊಂಕು ಉಂಟಾದರೆ ತಕ್ಷಣವೇ ನೇತ್ರ ತಜ್ಞರನ್ನ ಭೇಟಿ ಮಾಡಬೇಕು
- ರೋಗ ಕಡಿಮೆಯಾಗಲು ಏನು ಮಾಡಬೇಕು ?
- 1.ಸ್ಪಚ್ಫವಾದ ನೀರಿನಿಂದ ಕಣ್ಣುಗಳನ್ನ ಶುಚಿಗೊಳಿಸಿ
- 2.ಸೊಂಕು ಕಂಡು ಬಂದ ತಕ್ಷಣವೇ ವೈದ್ಯರಿಂದ ಚಿಕಿತ್ಸೆ ಪಡೆಯಿರಿ.
- 3.ಸೊಂಕಿತ ವ್ಯಕ್ತಿಗಳು ಪೌಷ್ಟಿಕ ಆಹಾರ ಸೇವಿಸಿ.
- ಸೊಂಕಿತ ವ್ಯಕ್ತಿಗಳು ಶುಚಿಯಾದ ಕರವಸ್ತ್ರ ಬಳಸಿ