ಕಲುಷಿತ ನೀರು ಸೇವನೆ ಪ್ರಕರಣ – ಸಾವಿನ ಸಂಖ್ಯೆ 6ಕ್ಕೆ ಏರಿಕೆ, 16 ಮಂದಿ ಸ್ಥಿತಿ ಚಿಂತಾಜನಕ

ಕಲುಷಿತ ನೀರು ಸೇವನೆ ಪ್ರಕರಣ – ಸಾವಿನ ಸಂಖ್ಯೆ 6ಕ್ಕೆ ಏರಿಕೆ, 16 ಮಂದಿ ಸ್ಥಿತಿ ಚಿಂತಾಜನಕ

ಚಿತ್ರದುರ್ಗ: ಚಿತ್ರದುರ್ಗದ ಕವಾಡಿಗರಹಟ್ಟಿಯಲ್ಲಿನ ಕಲುಷಿತ ನೀರು ಕುಡಿದು ಇಡೀ ಗ್ರಾಮದ ಜನರು ಅಸ್ವಸ್ಥರಾಗಿದ್ದಾರೆ. ಇದೀಗ ಈ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ಕಲುಷಿತ ನೀರು ಕುಡಿದು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದವರ ಸಂಖ್ಯೆ 36 ರಿಂದ 149ಕ್ಕೆ ಏರಿಕೆಯಾಗಿದೆ. ಆಸ್ಪತ್ರೆಗೆ ದಾಖಲಾದವರ ಪೈಕಿ16 ಮಂದಿ ಸ್ಥಿತಿ ಚಿಂತಾಜನಕವಾಗಿದ್ದು, ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರಾಖಂಡದಲ್ಲಿ ಭಾರಿ ಮಳೆ, ಭೂಕುಸಿತ – 10 ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ

ಈ ದುರ್ಘಟನೆಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವೆಂದು ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಾಂತಿ ಭೇದಿಯಿಂದ ಬಳಲುತ್ತಿದ್ದ ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲಾಗಿದ್ದ ಕವಾಡಿಗರಹಟ್ಟಿಯ ರುದ್ರಪ್ಪ (50), ಹಾಗೂ ಪಾರ್ವತಮ್ಮ (60)  ಶುಕ್ರವಾರ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಜುಲೈ 31ರಂದು ಈ ದುರ್ಘಟನೆ ನಡೆದಿದ್ದು, 115 ಮಂದಿಯನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದ್ದು, 34 ಮಂದಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನೀರಿನ ಮಾದರಿಯಲ್ಲಿ ಯಾವುದೇ ವಿಷಕಾರಿ ರಾಸಾಯನಿಕ ಪತ್ತೆಯಾಗಿಲ್ಲ ಎಂದು ಎಫ್‌ಎಸ್‌ಎಲ್ ವರದಿ ದೃಢಪಡಿಸಿದೆ. ಸ್ಥಳೀಯರೊಬ್ಬರ ವಿರುದ್ಧ ಪೊಕ್ಸೊ ಪ್ರಕರಣ ದಾಖಲಾದ ಬಳಿಕ ಕಿಡಿಗೇಡಿಗಳು ನೀರಿಗೆ ವಿಷ ಬೆರೆಸಿರಬಹುದು ಎಂದು ಆರೋಪಿಸಲಾಗಿದೆ. ಆದರೆ, ನೀರು ಕಲುಷಿತಗೊಂಡಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ವರದಿ ದೃಢಪಡಿಸಿದೆ.

suddiyaana