ಸೌಜನ್ಯ ಕೊಲೆ ಪ್ರಕರಣ – ನ್ಯಾಯ ಕೇಳಲು ಸಮಾವೇಶಕ್ಕೆ ಬಂದ ಸೌಜನ್ಯ ತಾಯಿಯನ್ನು ವಾಪಸ್ ಕಳುಹಿಸಿದ ಪೊಲೀಸರು
ಬೆಳ್ತಂಗಡಿ: 2012ರಲ್ಲಿ ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ ಮತ್ತು ಮರ್ಡರ್ ಕೇಸ್ ಕಳೆದೊಂದು ತಿಂಗಳಿಂದ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡ್ತಿದೆ. ಸಂತೋಷ್ ರಾವ್ ನಿರ್ದೋಷಿ ಎಂದು ಕೋರ್ಟ್ ತೀರ್ಪು ನೀಡಿದ ಬಳಿಕ ಅಸಲಿ ಕಾಮುಕರು ಯಾರು ಅನ್ನೋ ಪ್ರಶ್ನೆ ಎದ್ದಿದೆ. ಸೌಜನ್ಯ ಸಾವಿನ ನ್ಯಾಯಕ್ಕಾಗಿ ಹೋರಾಟಗಳು ನಡೆಯುತ್ತಿವೆ. ಇದರ ನಡುವೆ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಬಗ್ಗೆ ಅವಹೇಳನ ಮಾಡಲಾಗ್ತಿದೆ ಎಂದು ಧರ್ಮಸ್ಥಳದ ಭಕ್ತರು ಶುಕ್ರವಾರ ಉಜಿರೆಯಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಸಿದ್ದಾರೆ.
ಇದನ್ನೂ ಓದಿ: ಸೆಪ್ಟೆಂಬರ್ನಲ್ಲಿ 10 ಕೆಜಿ ಅನ್ನಭಾಗ್ಯ ಅಕ್ಕಿ ವಿತರಣೆ – ಮನೆಯಲ್ಲಿ ಕಾರು ಇದ್ದರೆ ಬಿಪಿಎಲ್ ಕಾರ್ಡ್ ರದ್ದು!
ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದದಿಂದ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಸಮಾವೇಶ ನಡೆಸಲಾಗಿದೆ. ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ, ಎಂಎಲ್ಸಿ ಪ್ರತಾಪ್ ಸಿಂಹ ನಾಯಕ್, ಮಾಜಿ ಸಚಿವ ಅಭಯಚಂದ್ರ ಜೈನ್ ಸೇರಿದಂತೆ ಕ್ಷೇತ್ರದ ಪ್ರಮುಖರು ಭಾಗಿಯಾಗಿದ್ದರು.
ಇದೇ ಸಮಾವೇಶದಲ್ಲಿ ಭಾಗಿಯಾಗಲು ಮೃತ ಸೌಜನ್ಯ ತಾಯಿ ಕುಸುಮಾವತಿ ತಮ್ಮ ಮಗಳು ಹಾಗೂ ಮಗನ ಜೊತೆ ಬಂದಿದ್ದರು. ಜಸ್ಟೀಸ್ ಫಾರ್ ಸೌಜನ್ಯ ಎಂಬ ಬಿತ್ತಿ ಪತ್ರ ಹಿಡಿದ ಮಗಳ ಸಾವಿನ ನ್ಯಾಯಕ್ಕೆ ಆಗ್ರಹಿಸಿದ್ದಾರೆ. ಆದರೆ, ಮಗಳ ಸಾವಿಗೆ ನ್ಯಾಯ ಕೇಳಲು ವೇದಿಕೆ ಹತ್ತಲು ಮುಂದಾಗಿದ್ದ ಕುಸುಮಾವತಿ ಅವ್ರನ್ನ ಪೊಲೀಸರು ತಡೆದ್ದಾರೆ. ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಪರ ಪ್ರತಿಭಟನೆಯಲ್ಲಿ ಪಾಲ್ಗೊಂಡವರು ಸೌಜನ್ಯ ಕುಟುಂಬಸ್ಥರಿಗೆ ಮುತ್ತಿಗೆ ಹಾಕಿದ್ದಾರೆ. ಕುಸುಮಾವತಿ ವಿರುದ್ಧ ಘೋಷಣೆಗಳನ್ನ ಕೂಗಿದ್ದಾರೆ.