ಅನರ್ಹತೆ ವಾಪಸ್‌ ಪಡೆದ ಲೋಕಸಭೆ ಸ್ಪೀಕರ್‌ – ಕಲಾಪದಲ್ಲಿ ಭಾಗಿಯಾಗಲಿದ್ದಾರೆ ರಾಹುಲ್‌ ಗಾಂಧಿ

ಅನರ್ಹತೆ ವಾಪಸ್‌ ಪಡೆದ ಲೋಕಸಭೆ ಸ್ಪೀಕರ್‌ – ಕಲಾಪದಲ್ಲಿ ಭಾಗಿಯಾಗಲಿದ್ದಾರೆ ರಾಹುಲ್‌ ಗಾಂಧಿ

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಲೋಕಸಭೆ ಸದಸ್ಯತ್ವ ಅನರ್ಹತೆಯನ್ನು ರದ್ದುಪಡಿಸಲಾಗಿದೆ. ಈ ಬೆನ್ನಲ್ಲೇ ರಾಹುಲ್ ಗಾಂಧಿಯವರ ಸಂಸತ್ ಸದಸ್ಯತ್ವವನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಮತ್ತೆ ನೀಡಿದ್ದಾರೆ ಎಂದು ವರದಿಯಾಗಿದೆ.

ಮೋದಿ ಸರ್‌ ನೇಮ್‌ ವಿಚಾರವಾಗಿ ಹೇಳಿಕೆ ನೀಡಿದ್ದ ರಾಹುಲ್‌ ಗಾಂಧಿಗೆ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ ನ್ಯಾಯಾಲಯವು ಅವರನ್ನು ದೋಷಿ ಎಂದು ಘೋಷಿಸಿದ ನಂತರ ಮಾರ್ಚ್ 23 ರಂದು ಲೋಕಸಭೆಯ ಸಂಸದರಾಗಿ ಅನರ್ಹಗೊಳಿಸಲಾಯಿತು ಮತ್ತು ಅವರಿಗೆ ಎರಡು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿತ್ತು. ಇದೀಗ ರಾಹುಲ್‌ಗಾಂಧಿ ಅವರಿಗೆ ವಿಧಿಸಿದ್ದ 2 ವರ್ಷಗಳ ಜೈಲು ಶಿಕ್ಷೆ ಪ್ರಕರಣಕ್ಕೆ ಸುಪ್ರಿಂಕೋರ್ಟ್‌ ತಡೆಯಾಜ್ಞೆ ವಿಧಿಸಿದ ಬೆನ್ನಲ್ಲೇ, ರಾಹುಲ್ ಗಾಂಧಿಗೆ ಸಂಸತ್ ಸದಸ್ಯತ್ವವನ್ನು ಮತ್ತೆ ನೀಡಲಾಗಿದೆ.

ಇದನ್ನೂ ಓದಿ: ಬೆಳ್ಳಿ, ಬೊಮ್ಮನ್‌ ದಂಪತಿಗೆ ಸಾಕ್ಷ್ಯಚಿತ್ರ ತಂಡದಿಂದಲೇ ಮೋಸ! – 2 ಕೋಟಿ ಪ್ರತಿಫಲ ಕೋರಿ ಮಾವುತ ದಂಪತಿಯಿಂದ ಲೀಗಲ್‌ ನೋಟಿಸ್‌

ರಾಹುಲ್ ಗಾಂಧಿ ಅವರ ‘ಮೋದಿ ಉಪನಾಮ’ ಟೀಕೆಗಳಿಗಾಗಿ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ ನ್ಯಾಯಾಲಯವು ಅವರನ್ನು ದೋಷಿ ಎಂದು ಘೋಷಿಸಿದ ನಂತರ ಮಾರ್ಚ್ 23 ರಂದು ಲೋಕಸಭೆಯ ಸಂಸದರಾಗಿ ಅನರ್ಹಗೊಳಿಸಲಾಯಿತು ಮತ್ತು ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು.

ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‍ನ ಸೂರತ್ ಮ್ಯಾಜಿಸ್ಟ್ರೇಟ್ ಕೋರ್ಟ್ ವಿಧಿಸಿದ್ದ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದರು. ಆದೇಶದ ವಿರುದ್ಧ ಜು.15 ರಂದು ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ, ಪಿ.ಎಸ್ ನರಸಿಂಹ ಮತ್ತು ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಪ್ರಕರಣದ ವಿಚಾರಣೆ ನಡೆಸಿತು. ಈ ವೇಳೆ ಸೂರತ್ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿತ್ತು.

ಸುಪ್ರೀಂ ಆದೇಶ ಬೆನ್ನಲ್ಲೇ ಸೋಮವಾರ ಲೋಕಸಭೆಯ ಸ್ಪೀಕರ್‌ ಸದಸ್ಯತ್ವವನ್ನ ಮರಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಲೋಕಸಭೆ ಅಧಿವೇಶನಕ್ಕೆ ಹಾಜರಾಗಬಹುದಾಗಿದೆ.

suddiyaana