ಪೆಟ್ರೋಲ್ ಬಂಕ್‌ನಲ್ಲಿ ಭೀಕರ ಸ್ಪೋಟ – 35 ಮಂದಿ ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ
ರಷ್ಯಾದ ಗಣರಾಜ್ಯದ ಡಾಗೆಸ್ತಾನ್‌ನ ಪೆಟ್ರೋಲ್ ಬಂಕ್‌ವೊಂದರಲ್ಲಿ ಭೀಕರ ಸ್ಪೋಟ ಸಂಭವಿಸಿದ್ದು ಬರೋಬ್ಬರಿ 35 ಮಂದಿ ಸಾವನ್ನಪ್ಪಿದ್ದಾರೆ. 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಪೆಟ್ರೋಲ್ ಬಂಕ್‌ನಲ್ಲಿ ಏಕಾಏಕಿ ಸ್ಫೋಟ ಸಂಭವಿಸಿದೆ. ಕೆಲವೇ ಹೊತ್ತಲ್ಲಿ ಬೆಂಕಿ ಎಲ್ಲಾ ಕಡೆಗೆ ವ್ಯಾಪಿಸಿದೆ. ಈ ಅವಘಡದಲ್ಲಿ 35 ಮಂದಿ ಮೃತಪಟ್ಟಿದ್ದಾರೆ. 100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಎಂಬತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಹಿಮಾಚಲ ಪ್ರದೇಶ, ಉತ್ತರಾಖಂಡ್‌ನಲ್ಲಿ ಮೇಘಸ್ಫೋಟ – ಸಾವಿನ ಸಂಖ್ಯೆ 55ಕ್ಕೆ ಏರಿಕೆ
ಘಟನೆಯಲ್ಲಿ ಮೃತಪಟ್ಟವರಿಗೆ ರಷ್ಯಾ ಅಧ್ಯಕ್ಷ ಪುಟಿನ್ ಸಂತಾಪ ಸೂಚಿಸಿದ್ದು, ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ.
ಘಟನಾ ಸ್ಥಳದಲ್ಲಿ ರಕ್ಷಣಾ ತಂಡ ಕಾರ್ಯಾಚರಣೆ ನಡೆಸುತ್ತಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸ್ಫೋಟ ಹೇಗೆ ಸಂಭವಿಸಿತೆಂಬ ವಿಚಾರವಾಗಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಸ್ಥಳೀಯರ ಮಾಹಿತಿ ಪ್ರಕಾರ ಪೆಟ್ರೋಲ್ ಬಂಕ್ ಬಳಿ ವ್ಯಕ್ತಿಯೋರ್ವ ಕಾರು ನಿಲ್ಲಿಸಿದ್ದ. ಈ ವೇಳೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಬಂಕ್ ಗೆ ವ್ಯಾಪಿಸಿ ಸ್ಪೋಟಗೊಂಡಿದೆ ಎಂದು ಹೇಳಿದ್ದಾರೆ.