ಚಿರು ನಟನೆಯ ಕೊನೆ ಚಿತ್ರದ ಡಬ್ಬಿಂಗ್ ಮುಗಿಸಿದ ಧ್ರುವಸರ್ಜಾ – ಅ. 5 ರಂದು ತೆರೆಗೆ ಬರಲಿದೆ ‘ರಾಜಮಾರ್ತಾಂಡ’
ನಟ ಚಿರಂಜೀವಿ ಸರ್ಜಾ ಅವರು ನಮ್ಮೆಲ್ಲರನ್ನು ಅಗಲಿ ಮೂರು ವರ್ಷಗಳೇ ಕಳೆದಿವೆ. ಆದರೆ ಚಿರು ನಮಗಾಗಿ ಸಾಕಷ್ಟು ನೆನಪುಗಳನ್ನು ಬಿಟ್ಟು ಹೋಗಿದ್ದಾರೆ. ಹೃದಯಾಘಾತದಿಂದ ಚಿರಂಜೀವಿ ಸರ್ಜಾ ನಿಧನರಾಗುವುದಕ್ಕೂ ಮುನ್ನ ಅವರು ಕೆಲವು ಸಿನಿಮಾಗಳಲ್ಲಿ ನಟಿಸುತ್ತಿದ್ದರು. ಆ ಪೈಕಿ ‘ರಾಜಮಾರ್ತಾಂಡ’ ಸಿನಿಮಾ ಕೂಡ ಒಂದು. ಈ ಸಿನಿಮಾದ ಡಬ್ಬಿಂಗ್ ಕಾರ್ಯ ಮಾತ್ರ ಬಾಕಿ ಉಳಿದಿದೆ. ಈ ಕೆಲಸವನ್ನು ಧ್ರುವ ಸರ್ಜಾ ಹೇಳಿಕೊಂಡಿದ್ದರು. ಅಣ್ಣನ ಪಾತ್ರಕ್ಕೆ ತಾವೇ ಡಬ್ ಮಾಡುವುದಾಗಿಯೂ ತಿಳಿಸಿದ್ದರು. ಇದೀಗ ಡಬ್ಬಿಂಗ್ ಕೆಲಸವನ್ನೂ ಧ್ರುವ ಸರ್ಜಾ ಪೂರ್ಣಗೊಳಿಸಿದ್ದಾರೆ. ಇದರ ಫೋಟೋ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.
ಇದನ್ನೂ ಓದಿ: ಅಬ್ಬಬ್ಬಾ.. ಧೋನಿ ಮಗಳ ಶಾಲಾ ಶುಲ್ಕ ಇಷ್ಟೊಂದಾ? – ಝಿವಾ ಓದುತ್ತಿರುವ ಸ್ಕೂಲ್ ಯಾವುದು ಗೊತ್ತಾ?
ನಟ ಚಿರಂಜೀವಿ ಸರ್ಜಾ ಅವರು ನಟಿಸಿರುವ ‘ರಾಜಮಾರ್ತಾಂಡ’ಸಿನಿಮಾದ ಬಹುತೇಕ ಕಾರ್ಯ ಮುಗಿದಿದೆ. ಡಬ್ಬಿಂಗ್ ಕಾರ್ಯವೊಂದು ಮಾತ್ರ ಬಾಕಿ ಉಳಿದಿತ್ತು. ಇದೀಗ ಧುವ ಸರ್ಜಾ ಅವರು ಡಬ್ಬಿಂಗ್ ಕಾರ್ಯವನ್ನು ಮುಗಿಸಿದ್ದಾರೆ. ‘ರಾಜಮಾರ್ತಾಂಡ’ಚಿತ್ರ ಚಿರು ಸರ್ಜಾ ಅವರ ಪ್ರೀತಿಯ ತಮ್ಮ ಧ್ರುವ ಸರ್ಜಾ ಹುಟ್ಟುಹಬ್ಬದ ದಿನವೇ ಅಂದ್ರೆ ಅಕ್ಟೋಬರ್ 5ಕ್ಕೆ ಸಿನಿಮಾ ರಿಲೀಸ್ ಮಾಡಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ.
ಇನ್ನು ಈ ಚಿತ್ರದಲ್ಲಿ ಗೀತ ರಚನೆಕಾರರಾಗಿ ಜನಪ್ರಿಯರಾಗಿರುವ ಕೆ.ರಾಮನಾರಾಯಣ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ. ಪ್ರಣವ್ ಗೌಡ.ಎನ್, ನಿವೇದಿತಾ ಹಾಗೂ ಶಿವಕುಮಾರ್ ನಿರ್ಮಿಸಿದ್ದಾರೆ. ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಧರ್ಮವಿಶ್ ಹಿನ್ನೆಲೆ ಸಂಗೀತ, ಕೆ.ಗಣೇಶ್ ಛಾಯಾಗ್ರಹಣ, ವೆಂಕಟೇಶ್ ಯು ಡಿ ವಿ ಸಂಕಲನ, ವಿನೋದ್, ಪಳನಿರಾಜ್ ಸಾಹಸ ನಿರ್ದೇಶನ ಹಾಗೂ ಭೂಷಣ್, ಹರ್ಷ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.
ಚಿರಂಜೀವಿ ಸರ್ಜಾ ಅವರಿಗೆ ನಾಯಕಿಯರಾಗಿ ದೀಪ್ತಿ ಸಾತಿ, ಮೇಘಶ್ರೀ, ತ್ರಿವೇಣಿ (ಟಗರು) ಅಭಿನಯಿದ್ದಾರೆ. ಭಜರಂಗಿ ಲೋಕಿ, ಚಿಕ್ಕಣ್ಣ, ದೇವರಾಜ್, ಸುಮಿತ್ರ, ಶಂಕರ್ ಅಶ್ವಥ್, ವಿನೀತ್ ಕುಮಾರ್ (ಬಾಂಬೆ) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.