ಭಾರಿ ಮಳೆಗೆ ಉತ್ತರಖಾಂಡ್ನಲ್ಲಿ ಮತ್ತೆ ಭೂಕುಸಿತ – ನಾಲ್ವರು ಸಾವು
ಉತ್ತರಾಖಂಡ್ ನಲ್ಲಿ ಮಳೆ, ಭೂಕುಸಿತ ಮುಂದುವರಿದಿದೆ. ಇದೀಗ ಮತ್ತೊಮ್ಮೆ ಭೂಕುಸಿತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಕಳೆದ ಕೆಲವು ದಿನಗಳಿಂದ ಉತ್ತರಾಖಂಡ್ನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಗುಡ್ಡ ಪ್ರದೇಶಗಳಲ್ಲಿ ಭೂಕುಸಿತವಾಗುತ್ತಿದ್ದರೆ, ತಗ್ಗು ಪ್ರದೇಶಗಳಲ್ಲಿ ಪ್ರವಾಹ ಸ್ಥಿತಿ ಮುಂದುವರಿದಿದೆ. ಇದೀಗ ಮತ್ತೆ ಭೂಕುಸಿತ ಸಂಭವಿಸಿದೆ. ಇದುವರೆಗೆ ನಾಲ್ಕು ಮೃತದೇಹಗಳು ಪತ್ತೆಯಾಗಿದ್ದು, ನಾಪತ್ತೆಯಾಗಿರುವ ಮತ್ತೋರ್ವ ವ್ಯಕ್ತಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ನವನೀತ್ ಸಿಂಗ್ ಬುಲ್ಲರೈಡ್ ತಿಳಿಸಿದ್ದಾರೆ.
ಇದನ್ನೂ ಓದಿ: ಅಮೆರಿಕದಲ್ಲಿ ʼಮಾಂಸ ತಿನ್ನುವ ಬ್ಯಾಕ್ಟೀರಿಯಾʼ ಪತ್ತೆ! – ಮಹಾಮಾರಿಗೆ ಎಂಟು ಮಂದಿ ಬಲಿ
ಆಗಸ್ಟ್ 22 ರಿಂದ 24 ರವರೆಗೂ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರೀ ಮಳೆಯ ಮುನ್ಸೂಚನೆಯ ಹಿನ್ನಲೆ ಭಾರತೀಯ ಹವಾಮಾನ ಇಲಾಖೆ ಇದೀಗ ಎರಡು ರಾಜ್ಯಗಳಿಗೂ ಆರೆಂಜ್ ಅಲರ್ಟ್ ಘೋಷಿಸಿದೆ. ಪ್ರತ್ಯೇಕವಾಗಿ ಚಂಬಾ ಮತ್ತು ಮಂಡಿ ಜಿಲ್ಲೆಗಳ ಜಲಾನಯನ ಪ್ರದೇಶಗಳಲ್ಲಿ ಹಠಾತ್ ಪ್ರವಾಹದ ಮಧ್ಯಮ ಅಪಾಯದ ಬಗ್ಗೆ ಹವಾಮಾನ ಸಂಸ್ಥೆ ಎಚ್ಚರಿಕೆ ನೀಡಿದೆ.
ಮುಂದಿನ ಎರಡು ದಿನಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ 1 ರಿಂದ 12ನೇ ತರಗತಿವರೆಗಿನ ಎಲ್ಲಾ ಶಾಲೆಗಳು ಮತ್ತು ತೆಹ್ರಿ ಜಿಲ್ಲೆಯ ಭಿಲಂಗಾನ, ಚಂಬಾ, ನರೇಂದ್ರ ನಗರ ಮತ್ತು ಜೌನ್ಪುರದ ಅಂಗನವಾಡಿ ಕೇಂದ್ರ ರಜೆ ನೀಡಲು ಆದೇಶಿಸಲಾಗಿದೆ.