ಶನಿವಾರ ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮನ – ಸಂಚಾರದಲ್ಲಿ ಭಾರಿ ಬದಲಾವಣೆ
ಬೆಂಗಳೂರು: ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ -3 ಸಕ್ಸಸ್ ಕಂಡಿದೆ. ಈ ಹಿನ್ನೆಲೆ ಇಸ್ರೋ ವಿಜ್ಞಾನಿಗಳಿಗೆ ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಕಚೇರಿಗೆ ಆಗಮಿಸಲಿದ್ದಾರೆ. ಸಿಲಿಕಾನ್ ಸಿಟಿಗೆ ಮೋದಿ ಆಗಮಿಸುತ್ತಿರುವ ಹಿನ್ನೆಲೆ ಸಂಚಾರದಲ್ಲಿ ಭಾರೀ ಬದಲಾವಣೆ ಮಾಡಲಾಗಿದೆ. ಸಂಚಾರಿ ಪೊಲೀಸರು ನಗರದ ಕೆಲ ರಸ್ತೆಗಳ ಸಂಚಾರ ಮಾರ್ಗ ಬದಲಾವಣೆ ಮಾಡಿದ್ದಾರೆ.
ಆಗಸ್ಟ್ 26 ಬೆಳಗ್ಗೆ 4:30 ರಿಂದ ಬೆಳಗ್ಗೆ 9:30 ರ ವರೆಗೆ ಕೆಳಕಂಡ ರಸ್ತೆ ಮಾರ್ಗ ಬದಲಾವಣೆ ಮಾಡಲಾಗಿದೆ. ಸಾರ್ವಜನಿಕರು ಈ ರಸ್ತೆಗಳ ಬದಲಾಗಿ ಪರ್ಯಾಯ ಮಾರ್ಗ ಬಳಕೆಗೆ ಸಾರ್ವಜನಿಕರಲ್ಲಿ ಪೊಲೀಸರು ಮನವಿ ಮಾಡಿದ್ದಾರೆ. ಇನ್ನು ಭಾರೀ ಸರಕು ಸಾಗಾಣಿಕೆ ವಾಹನಗಳ ಸಂಚಾರ ನಿರ್ಬಂಧ ಮಾಡಲಾಗಿದೆ. ನಗರದೊಳಗೆ ಆಗಸ್ಟ್ 26ರ ಬೆಳಗ್ಗಿನ ಜಾವ 04.00 ಗಂಟೆಯಿಂದ ಬೆಳಗ್ಗೆ 11.00 ಗಂಟೆಯವರೆಗೆ ನಿಷೇಧ ಮಾಡಲಾಗಿದೆ. ಈ ಮೂಲಕ ಸುಗಮ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.
ಇದನ್ನೂ ಓದಿ: ಅಮೆರಿಕ ಇತಿಹಾಸದಲ್ಲಿಯೇ ಮೊದಲ ಪ್ರಕರಣ – ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅರೆಸ್ಟ್
ಪರ್ಯಾಯವಾಗಿ ವಾಹನ ಸವಾರರು ಬಳಸುವ ಮಾರ್ಗಗಳು
ಓಲ್ಡ್ ಏರ್ಪೋರ್ಟ್ ರಸ್ತೆ, ಓಲ್ಡ್ ಮದ್ರಾಸ್ ರಸ್ತೆ, ಎಂ.ಜಿ.ರಸ್ತೆ, ಕಬ್ಬನ್ ರಸ್ತೆ, ರಾಜಭವನ ರಸ್ತೆ, ಬಳ್ಳಾರಿ ರಸ್ತೆ (ಮೇಖ್ರಿ ಸರ್ಕಲ್), ಸಿವಿ ರಾಮನ್ ರಸ್ತೆ, ಯಶವಂತಪುರ ಫ್ಲೈ ಓವರ್, ತುಮಕೂರು ರಸ್ತೆ (ಯಶವಂತಪುರದಿಂದ ನಾಗಸಂದ್ರದವರೆಗೆ), ಮಾಗಡಿ ರಸ್ತೆ, ಹೊರವರ್ತುಲ ರಸ್ತೆ (ಗೊರಗುಂಟೆ ಪಾಳ್ಯ ಜಂಕ್ಷನ್‍ನಿಂದ ಸುಮನಹಳ್ಳಿ)ಗುಬ್ಬಿ ತೋಟದಪ್ಪ ರಸ್ತೆ, ಜಾಲಹಳ್ಳಿ ಕ್ರಾಸ್ ರಸ್ತೆ.
ಪ್ರಧಾನಿ ಮೋದಿಯವರ ನಾಳೆಯ ಕಾರ್ಯಕ್ರಮ ವೇಳಾಪಟ್ಟಿ ಹೀಗಿದೆ..
ಬೆಂಗಳೂರಿನ ಇಸ್ರೋ ಕೇಂದ್ರ ಕಚೇರಿಗೆ ಭೇಟಿ ನೀಡುವ ಮೋದಿ ನಾಳೆ ಬೆಳಗ್ಗೆ 5.55ಕ್ಕೆ ಹೆಚ್ ಎಎಲ್ ಏರ್‌ಪೋರ್ಟ್‌ಗೆ ಮೋದಿ ಆಗಮನ ಬೆಳಗ್ಗೆ 6.30ರವರೆಗೆ ಏರ್‌ಪೋರ್ಟ್‌ನಲ್ಲಿ ವಿಶ್ರಾಂತಿ ಬೆಳಗ್ಗೆ 7 ಗಂಟೆಗೆ ಇಸ್ರೋ ಕೇಂದ್ರ ಕಚೇರಿಗೆ ಭೇಟಿ ಬೆಳಗ್ಗೆ 8 ಗಂಟೆಯವರೆಗೆ ಇಸ್ರೋ ಕಚೇರಿಯಲ್ಲಿ ಪ್ರಧಾನಿ ಮೋದಿ ಸಭೆ ಬೆಳಗ್ಗೆ 8.35ಕ್ಕೆ ಬೆಂಗಳೂರಿನಿಂದ ದೆಹಲಿಗೆ ನಿರ್ಗಮನ
ಪ್ರಧಾನಿ ರೋಡ್ ಶೋ
ಮುಂದಿನ ಏಪ್ರಿಲ್ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಪ್ರಧಾನಿ ಆಗಮನವನ್ನು ಸದ್ವಿನಿಯೋಗ ಮಾಡಿಕೊಳ್ಳಲು ಬಿಜೆಪಿ ಯೋಜಿಸುತ್ತಿದೆ. ಅದ್ಧೂರಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಬಿಜೆಪಿ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಸ್ವಾಗತಕ್ಕೆ ಎಚ್ಎಎಲ್ ಏರ್‌ಪೋರ್ಟ್‌ನಲ್ಲಿ 5-6 ಸಾವಿರ ಜನರನ್ನು ಸೇರಿಸಲು ಉದ್ದೇಶಿಸಲಾಗಿದೆ. ಮೋದಿ ಅವರು ಏರ್‌ಪೋರ್ಟ್‌ನಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪೀಣ್ಯದಲ್ಲಿ ಮೋದಿ ಅವರು ಸುಮಾರು 1 ಕಿಲೋಮೀಟರ್ ರೋಡ್ಶೋ ನಡೆಸುವ ಸಾಧ್ಯತೆ ಹೆಚ್ಚಾಗಿದೆ. ಈ ಬಗ್ಗೆ ಸಿದ್ಧತೆ ಮಾಡಿಕೊಳ್ಳುವಂತೆ ಬೆಂಗಳೂರಿನ ಬಿಜೆಪಿ ಶಾಸಕರಿಗೆ ಕೂಡ ಸೂಚನೆ ನೀಡಲಾಗಿದೆ.