ಪುಟಿನ್‌ಗೆ ಬಂಧನದ ಭೀತಿ – ಜಿ20 ಶೃಂಗಸಭೆಗೆ ಭಾರತಕ್ಕೆ ಬರದೇ ಇರಲು ನಿರ್ಧಾರ?

ಪುಟಿನ್‌ಗೆ ಬಂಧನದ ಭೀತಿ – ಜಿ20 ಶೃಂಗಸಭೆಗೆ ಭಾರತಕ್ಕೆ ಬರದೇ ಇರಲು ನಿರ್ಧಾರ?

ಸೆಪ್ಟೆಂಬರ್ ತಿಂಗಳಲ್ಲಿ ಭಾರತದಲ್ಲಿ ನಡೆಯಲಿರುವ ಜಿ20 ಶೃಂಗಸಭೆಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗೈರಾಗುವ ಸಾಧ್ಯತೆ ಇದೆ. ಯುದ್ಧ ಅಪರಾಧಗಳ ಆರೋಪದ ಮೇಲೆ ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್‌ನಲ್ಲಿ ವಾರಂಟ್ ಹೊರಡಿಸಿರುವ ಹಿನ್ನೆಲೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾಗಿಯಾಗದಿರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಪ್ರಧಾನಿ ರೋಡ್‌ ಶೋ ಇರಲ್ಲ – ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟನೆ

ಅಂತಾರಾಷ್ಟ್ರೀಯ ಪ್ರಯಾಣದ ವೇಳೆ ಅವರ ಬಂಧನ ಸಾಧ್ಯತೆ ಹಿನ್ನೆಲೆ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ವರದಿಯಾಗಿದೆ. ಶೃಂಗಸಭೆಯು ಸೆಪ್ಟೆಂಬರ್ 8-10 ರವರೆಗೆ ನಡೆಯಲಿದ್ದು, ಅಮೆರಿಕ ಅಧ್ಯಕ್ಷ ಜೋ ಬೈಡೆನ್, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯಲ್ ಮ್ಯಾಕ್ರನ್ ಮತ್ತು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರಂತಹ ವಿಶ್ವ ನಾಯಕರು ಈ ಕಾರ್ಯಕ್ರಮಕ್ಕಾಗಿ ದೆಹಲಿಗೆ ಆಗಮಿಸುವ ನಿರೀಕ್ಷೆಯಿದೆ. ವಿವಿಧ ದೇಶಗಳ ಹೆಚ್ಚಿನ ಅತಿಥಿಗಳು ಸೆಪ್ಟೆಂಬರ್ 8 ರಂದು ಭಾರತಕ್ಕೆ ಆಗಮಿಸಲಿದ್ದಾರೆ.

suddiyaana