ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು

ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರು ಅರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹೆಚ್‌.ಡಿ ಕುಮಾರಸ್ವಾಮಿ ಅವರಿಗೆ ಏಕಾಏಕಿ ತೀವ್ರ ಕಾಣಿಸಿಕೊಂಡಿದೆ. ಹೀಗಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್​.ಡಿ  ಕುಮಾರಸ್ವಾಮಿಯವರು ಇಂದು (ಆ.30) ಕೋಲಾರ ಜಿಲ್ಲೆಯ ಶ್ರೀನಿವಾಸಪುರಕ್ಕೆ ಭೇಟಿ ನೀಡಬೇಕಿತ್ತು. ಅರಣ್ಯ ಭೂಮಿ ಒತ್ತುವರಿ ತೆರವು ವೇಳೆ ರೈತರ ಬೆಳೆ ನಾಶಪಡಿಸಿರುವ ಆರೋಪ ಕೇಳಿ ಬಂದಿತ್ತು.ಈ ಹಿನ್ನೆಲೆಯಲ್ಲಿ ಸ್ಥಳೀಯ ರೈತರು ಹಾಗೂ ಅಧಿಕಾರಿಗಳೊಂದಿಗೆ ಹೆಚ್​ಡಿ ಕುಮಾರಸ್ವಾಮಿಯವರು ಮಾತುಕತೆ ನಡೆಸಲಿದ್ದರು. ಆದರೆ, ಏಕಾಏಕಿ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಶ್ರೀನಿವಾಸಪುರ ಭೇಟಿ ರದ್ದಾಗಿದೆ.

ಇದನ್ನೂ ಓದಿ: ವಿಕ್ರಮ್​ಲ್ಯಾಂಡರ್​ ವಿನ್ಯಾಸ ಮಾಡಿದ್ದು ನಾನೇ..! – ಇಸ್ರೋ ವಿಜ್ಞಾನಿ ಎಂದು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದ ವ್ಯಕ್ಯಿಯ ಬಂಧನ

ರಾಜ್ಯ ವಿಧಾನಸಭೆ ಚುನಾವಣೆ ಸಮಯದಲ್ಲಿ ಪಕ್ಷದ ಪರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ವೇಳೆಯೂ ಆಯಾಸದಿಂದಾಗಿ ಜ್ವರ ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ವಿಶ್ರಾಂತಿ ಇಲ್ಲದೆ ಚುನಾವಣಾ ಕಾರ್ಯದಲ್ಲಿ ತೊಡಗಿದ್ದ ಅವರು ಈಗ ತೀವ್ರ ಜ್ವರದಿಂದ ಬಳಲುತ್ತಿದ್ದಾರೆ ಅವರಿಗೆ ವಿಶ್ರಾಂತಿಯ ಅಗತ್ಯವಿದೆ ಎಂದು ವೈದ್ಯರು ಹೇಳಿದ್ದರು. ಈ ವೇಳೆ ಹೆಚ್​ಡಿ ಕುಮಾರಸ್ವಾಮಿಯವರಿಗೆ ಸಣ್ಣ ಪ್ರಮಾಣದಲ್ಲಿ ಲಂಗ್ಸ್​ ಇನ್ಫೆಕ್ಷನ್ ಹಾಗೂ ಡಸ್ಟ್​ ಅಲರ್ಜಿ ಕೂಡ ಇತ್ತು. ಇದಲ್ಲದೆ ಜ್ವರ ಕೂಡಾ ಬಂದಿರುವ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದರು.

suddiyaana