ಗೃಹಬಳಕೆಯ ಬೆನ್ನಲ್ಲೇ ವಾಣಿಜ್ಯ ಬಳಕೆಯ LPG ಸಿಲಿಂಡರ್ ಬೆಲೆ ಇಳಿಕೆ!
ನವದೆಹಲಿ: ತಿಂಗಳ ಮೊದಲ ದಿನವೇ ಜನಸಾಮಾನ್ಯರಿಗೆ ತೈಲ ಕಂಪನಿಗಳು ಗುಡ್ ನ್ಯೂಸ್ ನೀಡಿವೆ. ಮೂರು ದಿನಗಳ ಹಿಂದೆಯಷ್ಟೇ ಗೃಹ ಬಳಕೆ ಸಿಲಿಂಡರ್ ಬೆಲೆಯಲ್ಲಿ ಇಳಿಕೆಯಾಗಿತ್ತು. ಇದೀಗ ವಾಣಿಜ್ಯ ಸಿಲಿಂಡರ್ ಬಳಕೆಯ ಸಿಲಿಂಡರ್ ಬೆಲೆಯಲ್ಲಿಯೂ ಇಳಿಕೆಯಾಗಿದೆ.
ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು 19-ಕೆಜಿ ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಬೆಲೆಯನ್ನು 158 ರೂ. ಕಡಿತಗೊಳಿಸಿವೆ. ಹೊಸ ಬೆಲೆಗಳು ಇಂದಿನಿಂದಲೇ ಜಾರಿಗೆ ಬರಲಿವೆ. ವಾಣಿಜ್ಯ ಮತ್ತು ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಬೆಲೆ ಪರಿಷ್ಕರಣೆಗಳು ಪ್ರತಿ ತಿಂಗಳ ಮೊದಲ ದಿನದಂದು ನಡೆಯುತ್ತವೆ. ಈ ಹಿಂದೆ ರಕ್ಷಾ ಬಂಧನದ ಮುನ್ನಾದಿನದಂದು ದೇಶದ ಮಹಿಳೆಯರಿಗೆ ಉಡುಗೊರೆಯಾಗಿ ಕೇಂದ್ರ ಸರ್ಕಾರವು ಗೃಹ ಬಳಕೆಯ ಎಲ್ಪಿಜಿಗೆ 200 ರೂ. ಸಬ್ಸಿಡಿ ಘೋಷಣೆ ಮಾಡಿತ್ತು.
ಇದನ್ನೂ ಓದಿ: ಭಾರತದಲ್ಲಿ 2 ದಿನ ಜಿ20 ಶೃಂಗಸಭೆ – ಯುವಕರಿಗೆ ಕೋತಿಯಂತೆ ವರ್ತಿಸಲು ಟ್ರೈನಿಂಗ್.. ರಸ್ತೆಗಳಲ್ಲಿ ಮುಸಿಯಾಗಳ ಕಟೌಟ್!
ಆಗಸ್ಟ್ನಲ್ಲಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ಒಎಂಸಿಗಳು 99.75 ರೂ. ರಷ್ಟು ಕಡಿತಗೊಳಿಸಿದ್ದವು. ಜುಲೈನಲ್ಲಿ ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಬೆಲೆಯನ್ನು ತಲಾ 7 ರೂ.ಗಳಷ್ಟು ಹೆಚ್ಚಿಸಲಾಗಿತ್ತು. ಈ ಏರಿಕೆಗೆ ಮೊದಲು ಈ ವರ್ಷದ ಮೇ ಮತ್ತು ಜೂನ್ನಲ್ಲಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳಿಗೆ ಸತತ ಎರಡು ಬಾರಿ ಕಡಿತ ಮಾಡಲಾಗಿತ್ತು. ಮೇ ತಿಂಗಳಲ್ಲಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ನ ಬೆಲೆ 172 ರೂ. ಕಡಿತಗೊಂಡಿದ್ದರೆ ಜೂನ್ನಲ್ಲಿ 83 ರೂ. ಕಡಿತಗೊಂಡಿದೆ. ಬೆಂಗಳೂರಿನಲ್ಲಿ 19 ಕೆಜೆ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ 1,768 ರೂ. ಇದ್ದರೆ ದೆಹಲಿಯಲ್ಲಿ 1,680 ರೂ. ಇತ್ತು.