ಉಕ್ರೇನ್‌ನನ್ನು ವಶಪಡಿಸಿಕೊಳ್ಳಲು ಹೊಂಚು ಹಾಕಿ ಕುಳಿತ ರಷ್ಯಾ – ಕ್ಷಿಪಣಿ ದಾಳಿಯಲ್ಲಿ 17 ಮಂದಿ ಸಾವು

ಉಕ್ರೇನ್‌ನನ್ನು ವಶಪಡಿಸಿಕೊಳ್ಳಲು ಹೊಂಚು ಹಾಕಿ ಕುಳಿತ ರಷ್ಯಾ – ಕ್ಷಿಪಣಿ ದಾಳಿಯಲ್ಲಿ 17 ಮಂದಿ ಸಾವು

ರಷ್ಯಾ, ಉಕ್ರೇನ್‌ ಮೇಲೆ ದಾಳಿ ಮುಂದುವರಿಸಿದ್ದು, ಪೂರ್ವ ಉಕ್ರೇನ್​ನ ಕೋಸ್ಟಿಯಾಂಟಿನಿವ್ಕಾ ನಗರದ ಮೇಲೆ ರಷ್ಯಾ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಲ್ಲಿ ಸುಮಾರು 17 ಮಂದಿ ಪ್ರಾಣಕಳೆದುಕೊಂಡಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರ ಸಲಹೆಗಾರ ಮೈಖೈಲೊ ಪೊಡೊಲ್ಯಾಕ್ ಈ ಮಾಹಿತಿಯನ್ನು ನೀಡಿದ್ದಾರೆ.

ಇದನ್ನೂ ಓದಿ: ಬಂತು ಬಂತು ನೊರೆ ಮಳೆ.. ಮಳೆಯ ಜೊತೆ ನೊರೆ ಸುರಿದಿದ್ದೆಲ್ಲಿ?

ಕಳೆದ ವರ್ಷ ಫೆಬ್ರವರಿಯಲ್ಲಿ ಮೊದಲ ಬಾರಿಗೆ ಉಕ್ರೇನ್ ಹಾಗೂ ರಷ್ಯಾ ನಡುವೆ ಯುದ್ಧ ಆರಂಭವಾಗಿತ್ತು. ಉಕ್ರೇನ್ ​ನನ್ನು ಸಂಪೂರ್ಣವಾಗಿ ವಶಪಡಿಸಿಕೊಳ್ಳಬೇಕು ಎಂದು ರಷ್ಯಾ ಯುದ್ಧ ನಡೆಸುತ್ತಲೇ ಇದೆ. ರಷ್ಯಾ ಈಗಾಗಲೇ ಸಾಕಷ್ಟು ಪ್ರದೇಶಗಳನ್ನು ರಷ್ಯಾ ವಶಪಡಿಸಿಕೊಂಡಿದೆ. ಆದರೆ ಸಂಪೂರ್ಣವಾಗಿ ವಶಪಡಿಸಿಕೊಳ್ಳುವಲ್ಲಿ ವಿಫಲವಾಗಿತ್ತು. ಇದೀಗ ಪೂರ್ವ ಉಕ್ರೇನ್​ನ ಕೋಸ್ಟಿಯಾಂಟಿನಿವ್ಕಾ ನಗರದ ಮೇಲೆ ರಷ್ಯಾ ಕ್ಷಿಪಣಿ ದಾಳಿ ನಡೆಸಿದೆ. ಉಕ್ರೇನ್‌ನ ಕೋಸ್ಟಿಯಾಂಟಿನಿವ್ಕಾ ನಗರವು ಯುದ್ಧಭೂಮಿಗೆ ಬಹಳ ಹತ್ತಿರದಲ್ಲಿದೆ. ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ದಾಳಿಯನ್ನು ಖಂಡಿಸಿದ್ದಾರೆ. ಈ ದಾಳಿಯಲ್ಲಿ 17 ಜನರು ಸಾವನ್ನಪ್ಪಿದ್ದಾರೆ ಎಂದಿದ್ದಾರೆ.

ರಷ್ಯಾದ ಕ್ಷಿಪಣಿ ದಾಳಿಯಿಂದಾಗಿ ದಾಳಿಯಿಂದಾಗಿ ನಗರದಲ್ಲಿ ಅನೇಕ ಜನರು ಗಾಯಗೊಂಡಿದ್ದಾರೆ. ಪ್ರಾಣ ಕಳೆದುಕೊಂಡವರಲ್ಲಿ ಮಕ್ಕಳೂ ಸೇರಿದ್ದಾರೆ. ರಷ್ಯಾದ ದಾಳಿಯಲ್ಲಿ ನಗರದ ಮಾರುಕಟ್ಟೆ, ಅಂಗಡಿಗಳು ಮತ್ತು ಔಷಧಿ ಅಂಗಡಿಗೆ ಹಾನಿಯಾಗಿದೆ. ಸ್ಥಳದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

suddiyaana