ಮೊರಾಕೊದಲ್ಲಿ ಪ್ರಬಲ ಭೂಕಂಪ – 300ಕ್ಕೂ ಹೆಚ್ಚು ಮಂದಿ ಸಾವು

ಮೊರಾಕೊದಲ್ಲಿ ಪ್ರಬಲ ಭೂಕಂಪ – 300ಕ್ಕೂ ಹೆಚ್ಚು ಮಂದಿ ಸಾವು

ರಬಾತ್: ಉತ್ತರ ಆಫ್ರಿಕಾದ ಮೊರಾಕೊದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಈ ಅವಘಡದಲ್ಲಿ ಸುಮಾರು 300ಕ್ಕೂ ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಶುಕ್ರವಾರ ರಾತ್ರಿ ಭೂಕಂಪ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ 6.8 ತೀವ್ರತೆ ದಾಖಲಾಗಿದೆ. ಈ ಅವಘಡದಲ್ಲಿ 300ಕ್ಕೂ ಮಂದಿ ಸಾವನ್ನಪ್ಪಿದ್ದು, ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮರ್ರಾಕೆಟ್‌ನ ನೈಋತ್ಯಕ್ಕೆ 71 ಕಿ.ಮೀಟರ್ ದೂರದಲ್ಲಿ ಭೂಮಿಯಿಂದ 18 ಕಿ,ಮೀಟರ್ ಕಂಪನದ ಕೇಂದ್ರ ಬಿಂದು ದಾಖಲಾಗಿದೆ ಎಂದು ಅಮೆರಿಕದ ಭೂವೈಜ್ಞಾನಿಕ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಮಲಗಿದ್ದ ಕಂದಮ್ಮ ಮೇಲೆ ಏಳಲೇ ಇಲ್ಲ – ಬಾಲಕನ ಪ್ರಾಣ ತೆಗೆಯಿತು ಬೆಡ್!  

ಮನೆಗಳು,ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಹಲವಾರು ಜನರು ಸಿಲುಕಿಕೊಂಡಿದ್ದು ರಕ್ಷಣಾ ಕಾರ್ಯಗಳು ಭರದಿಂದ ನಡೆಯುತ್ತಿವೆ. ಸಾವು ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿಗೆ ಎಂದು ಮೊರಾಕ್ಕೊ ಪೊಲೀಸರು ಹೇಳಿದ್ದಾರೆ.

ಮರ್ರಾಕೆಟ್‌ನ ನೈಋತ್ಯ ಭಾಗ ಭೂಕಂಪನಕ್ಕೆ ಗುರಿಯಾಗುವ ಪ್ರದೇಶವಾಗಿದೆ. 2004ರಲ್ಲಿ ಈಶಾನ್ಯ ಮೊರಾಕೊದಲ್ಲಿ ಸಂಭವಿಸಿದ ಭೂಕಂಪದಲ್ಲಿ 628 ಮಂದಿ ಮೃತಪಟ್ಟಿದ್ದರು.

ಮೊರಾಕೊದಲ್ಲಿ ಸಂಭವಿಸಿದ ಭೂಕಂಪದಲ್ಲಿ ಜೀವಹಾನಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. “ಈ ದುರಂತ ಸಮಯದಲ್ಲಿ, ನನ್ನ ಆಲೋಚನೆಗಳು ಮೊರಾಕೊದ ಜನರೊಂದಿಗೆ ಇವೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಈ ಸಮಯದಲ್ಲಿ ಮೊರಾಕೊಗೆ ಸಾಧ್ಯವಿರುವ ಎಲ್ಲ ನೆರವು ನೀಡಲು ಭಾರತ ಸಿದ್ಧವಾಗಿದೆ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

suddiyaana