ಕ್ಷಣಕ್ಷಣಕ್ಕೂ ಹೆಚ್ಚಾಗುತ್ತಿದೆ ಸಾವಿನ ಸಂಖ್ಯೆ – ಭೂಕಂಪಕ್ಕೆ ಬರೋಬ್ಬರಿ 820 ಮಂದಿ ಬಲಿ!

ಕ್ಷಣಕ್ಷಣಕ್ಕೂ ಹೆಚ್ಚಾಗುತ್ತಿದೆ ಸಾವಿನ ಸಂಖ್ಯೆ – ಭೂಕಂಪಕ್ಕೆ ಬರೋಬ್ಬರಿ 820 ಮಂದಿ ಬಲಿ!

ಮೊರಾಕೊದಲ್ಲಿ ಸಂಭವಿಸಿದ 6.8 ತೀವ್ರತೆಯ ಪ್ರಬಲ ಭೂಕಂಪದಿಂದಾಗಿ ಮೃತಪಟ್ಟವರ ಕ್ಷಣ ಕ್ಷಣಕ್ಕೆ ಏರಿಕೆಯಾಗುತ್ತಲೇ ಇದೆ. ಇದೀಗ ಸಾವಿನ ಸಂಖ್ಯೆ 820 ಕ್ಕೆ ಏರಿಕೆಯಾಗಿದ್ದು, ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ 11:11 ಗಂಟೆಗೆ ಈ ಅವಘಡ ಸಂಭವಿಸಿದ್ದು, ಭೂಕಂಪವಾದ ಪ್ರದೇಶಕ್ಕೆ ಸಮೀಪವಿರುವ ಪ್ರಾಂತ್ಯಗಳಲ್ಲಿ ಕನಿಷ್ಠ 820 ಜನರು ಸಾವನ್ನಪ್ಪಿದ್ದಾರೆ. ಅಪಾರ ಸಂಖ್ಯೆಯಲ್ಲಿ ಜನ ಗಾಯಗೊಂಡಿದ್ದಾರೆ. ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ನಗರಗಳು ಮತ್ತು ಪಟ್ಟಣಗಳ ಹೊರಗೆ ಹೆಚ್ಚಿನ ಹಾನಿ ಸಂಭವಿಸಿದೆ ಎಂದು ಮೊರಾಕೊದ ಆಂತರಿಕ ಸಚಿವಾಲಯ ಮಾಹಿತಿ ನೀಡಿದೆ.

ಇದನ್ನೂ ಓದಿ: ಮೊರಾಕೊದಲ್ಲಿ ಪ್ರಬಲ ಭೂಕಂಪ -ಸಾವಿನ ಸಂಖ್ಯೆ 632ಕ್ಕೆ ಏರಿಕೆ, ಮತ್ತಷ್ಟು ಹೆಚ್ಚಾಗುವ ಸಾಧ್ಯತೆ

ಭೂಕಂಪದಿಂದ ಮೃತಪಟ್ಟವರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿರುವ ಅವರು, “ಮೊರಾಕೊದಲ್ಲಿ ಭೂಕಂಪದಿಂದ ಆಗಿರುವ ಜೀವಹಾನಿಯಿಂದ ತೀವ್ರ ನೋವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಈ ಕಷ್ಟದ ಸಮಯದಲ್ಲಿ ಮೊರಾಕೊಗೆ ಸಾಧ್ಯವಿರುವ ಎಲ್ಲ ನೆರವು ನೀಡಲು ಭಾರತ ಸಿದ್ಧವಾಗಿದೆ” ಎಂದು ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ 11:11 ಗಂಟೆಗೆ 6.8 ತೀವ್ರತೆಯಲ್ಲಿ ಭೂಕಂಪ ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ಹೇಳಿದೆ. ಮೊರಾಕ್ಕೋದ ರಾಷ್ಟ್ರೀಯ ಭೂಕಂಪನ ಮಾನಿಟರಿಂಗ್ ಮತ್ತು ಅಲರ್ಟ್ ನೆಟ್‌ವರ್ಕ್ ಇದನ್ನು ರಿಕ್ಟರ್ ಮಾಪಕದಲ್ಲಿ 7 ತೀವ್ರತೆ ಎಂದು ಇದೆ.

suddiyaana