ಪ್ರತಿ ತಿಂಗಳು ಮಹಿಳೆಯರ ಖಾತೆಗೆ ಜಮೆಯಾಗುತ್ತೆ 1,000 ರೂಪಾಯಿ ಹಣ – ಹೊಸ ಯೋಜನೆಗೆ ಚಾಲನೆ ನೀಡಿದ ಎಂಕೆ ಸ್ಟಾಲಿನ್

ಪ್ರತಿ ತಿಂಗಳು ಮಹಿಳೆಯರ ಖಾತೆಗೆ ಜಮೆಯಾಗುತ್ತೆ 1,000 ರೂಪಾಯಿ ಹಣ – ಹೊಸ ಯೋಜನೆಗೆ ಚಾಲನೆ ನೀಡಿದ ಎಂಕೆ ಸ್ಟಾಲಿನ್

ರಾಜ್ಯದಲ್ಲಿ ಮನೆ ಯಜಮಾನಿಗೆ ಪ್ರತಿ ತಿಂಗಳು 2000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆ ಈಗಾಗಲೇ ಜಾರಿಯಾಗಿದೆ. ಇದೀಗ ಮಹಿಳೆಯರಿಗೆ ಮಾಸಿಕ ಆರ್ಥಿಕ ನೆರವು ಒದಗಿಸುವ ಯೋಜನೆ ನೆರೆಯ ತಮಿಳುನಾಡಿನಲ್ಲಿಯೂ ಚಾಲನೆ ನೀಡಲಾಗಿದೆ.

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಮಹಿಳೆಯರಿಗೆ ಮಾಸಿಕ 1,000 ರೂ. ಆರ್ಥಿಕ ನೆರವು ಒದಗಿಸುವ ಯೋಜನೆಗೆ ಶುಕ್ರವಾರ ಚಾಲನೆ ನೀಡಿದ್ದಾರೆ. ಮಹಿಳೆಯರ ಮೂಲ ಆದಾಯದ ಕಾರ್ಯಕ್ರಮವಾಗಿರುವ ಇದಕ್ಕೆ ಮಾಜಿ ಮುಖ್ಯಮಂತ್ರಿ ಎಂ ಕರುಣಾನಿಧಿ ಅವರ ಹೆಸರನ್ನು ಇಡಲಾಗಿದೆ. ಇದು ಮಹಿಳೆಯರ ಹಕ್ಕು ಎಂದು ತಮಿಳುನಾಡು ಸರ್ಕಾರ ಹೇಳಿದೆ. ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಯೋಜನೆಗೆ ಚಾಲನೆ ನೀಡಿ, ಹಲವಾರು ಫಲಾನುಭವಿಗಳಿಗೆ ಬ್ಯಾಂಕ್ ಡೆಬಿಟ್ ಕಾರ್ಡ್ ಗಳನ್ನು ಸ್ಟಾಲಿನ್ ವಿತರಿಸಿದ್ದಾರೆ. ರಾಜ್ಯ ಸಚಿವರು ತಮ್ಮ ತಮ್ಮ ಜಿಲ್ಲೆಗಳಲ್ಲಿ ಈ ಯೋಜನೆಗೆ ಚಾಲನೆ ನೀಡಿದರು.

ಇದನ್ನೂ ಓದಿ: ದೇವಾಲಯಗಳ ಸುತ್ತ ತಂಬಾಕು ಬಳಕೆ ಹಾಗೂ ಮಾರಾಟ ನಿಷೇಧ – ನಿಯಮ ಪಾಲಿಸದಿದ್ರೆ ಕಠಿಣ ಕ್ರಮ !

ಯೋಜನೆ ಅಡಿಯಲ್ಲಿ 1.06 ಕೋಟಿ ಮಹಿಳೆಯರನ್ನು (1,06,50,000) ಫಲಾನುಭವಿಗಳೆಂದು ಸರ್ಕಾರ ಗುರುತಿಸಿದೆ ಮತ್ತು 1,000 ರೂ ಆರ್ಥಿಕ ನೆರವನ್ನು ಫಲಾನುಭವಿಗಳಿಗೆ ನೇರ ಲಾಭ ವರ್ಗಾವಣೆ ಮೂಲಕ ಪಾವತಿಸಲಾಗುತ್ತದೆ ಎಂದು ತಮಿಳುನಾಡು ಸರ್ಕಾರ ಹೇಳಿದೆ.

Shwetha M