ಕಾವೇರಿ ನೀರು ಹರಿಸುವ ವಿಚಾರವಾಗಿ ಕರ್ನಾಟಕಕ್ಕೆ ಮತ್ತೆ ಶಾಕ್ – 5,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ

ಕಾವೇರಿ ನೀರು ಹರಿಸುವ ವಿಚಾರವಾಗಿ ಕರ್ನಾಟಕಕ್ಕೆ ಮತ್ತೆ ಶಾಕ್ – 5,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಕರ್ನಾಟಕಕ್ಕೆ ಮತ್ತೆ ಶಾಕ್ ನೀಡಲಾಗಿದೆ. ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲು ಕರ್ನಾಟಕಕ್ಕೆ‌ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಲಾಗಿದೆ. ಸೋಮವಾರ ನಡೆದ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಕರ್ನಾಟಕಕ್ಕೆ ಈ ಖಡಕ್ ಸೂಚನೆ ನೀಡಲಾಗಿದೆ. ಅಲ್ಲದೇ ಅಲ್ಲದೇ ಕಾವೇರಿ ನೀರು ನಿಯಂತ್ರಣ ಮಂಡಳಿ ಸಮಿತಿಯ ಆದೇಶ ಪಾಲನೆಗೆ ಸೂಚಿಸಲಾಗಿದೆ.

ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು ಬಿಡುವ ಸ್ಥಿತಿಯಲ್ಲಿ ಇಲ್ಲ! – ಸರ್ವ ಪಕ್ಷಗಳ ಸಭೆಯಲ್ಲಿ ಒಮ್ಮತದ ನಿರ್ಣಯ

ತಮಿಳುನಾಡಿಗೆ ಮತ್ತೆ 5 ಸಾವಿರ ಕ್ಯೂಸೆಕ್ ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ. ಸೆಪ್ಟೆಂಬರ್ 18ರಂದು ನವದೆಹಲಿಯ CWMA ಕಚೇರಿಯಲ್ಲಿ ನಡೆದ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.  ಸಭೆ ಆರಂಭದ ವೇಳೆ, ನೀರಿಗಾಗಿ ತಮಿಳುನಾಡು ತನ್ನ ಪಟ್ಟು ತೀವ್ರಗೊಳಿಸಿತ್ತು. ನಿತ್ಯ 12,500 ಕ್ಯೂಸೆಕ್ ನೀರು ಹರಿಸಲು ಪಟ್ಟು ಹಿಡಿದಿತ್ತು. ಆದರೆ ನೀರು ನಿರ್ವಹಣಾ ಪ್ರಾಧಿಕಾರ, ಸಿಡಬ್ಲ್ಯೂಆರ್‌ಸಿ ಆದೇಶವನ್ನು ಮುಂದುವರಿಸುವಂತೆ ಸೂಚಿಸಿದೆ. ಪ್ರಾಧಿಕಾರದ ಆದೇಶ ತಮಿಳುನಾಡಿನ ಪರ ಬಂದಿದೆ. ಈ ಆದೇಶದಿಂದ ಕರ್ನಾಟಕ ಸರ್ಕಾರಕ್ಕೆ ಹಿನ್ನಡೆಯಾಗಿದೆ.

ಪ್ರತಿ ದಿನ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡಲಾಗಿದ್ದು, ಸೆಪ್ಟೆಂಬರ್ 12ರ ಆದೇಶದಂತೆ 15 ದಿನ ನೀರು ಹರಿಸಲು ಕರ್ನಾಟಕಕ್ಕೆ ಸೂಚನೆ ನೀಡಲಾಗಿದೆ. ಅಲ್ಲದೇ ಕಾವೇರಿ ನೀರು ನಿಯಂತ್ರಣ ಮಂಡಳಿ ಸಮಿತಿಯ ಆದೇಶ ಪಾಲನೆಗೆ ಸಭೆಯಲ್ಲಿ ಖಡಕ್ ಸೂಚನೆ ನೀಡಿದ್ದು, CWRC (ಕಾವೇರಿ ನೀರು ನಿಯಂತ್ರಣ ಸಮಿತಿ)  ಆದೇಶ ಮುಂದುವರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚಿಸಲಾಗಿದೆ.

ಸೆಪ್ಟೆಂಬರ್ 12ರಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಮತ್ತೆ ತಮಿಳುನಾಡಿಗೆ  15 ದಿನ 5000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿತ್ತು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಕರ್ನಾಟಕದ ಅಧಿಕಾರಿಗಳು, ಯಾವುದೇ ಕಾರಣಕ್ಕೂ ನೀರು ಬಿಡಲು ಸಾಧ್ಯವಿಲ್ಲ ಎಂದಿದ್ದರು. ಇದೀಗ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರನೀರು ಬಿಡಲು ಆದೇಶಿಸಿದೆ. ಕಾವೇರಿ ನದಿಯಿಂದ ತಮಿಳುನಾಡಿಗೆ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಸಮಿತಿಯು ಆಗಸ್ಟ್ 29ರಂದಯ ಶಿಫಾರಸ್ಸು ಮಾಡಿತ್ತು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಆಗಸ್ಟ್ 28ರಂದಯ ನಡೆಸಿದ ಸಭೆಯಲ್ಲಿ ಸೆಪ್ಟೆಂಬರ್ 21ರ ವರೆಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಿತ್ತು. ಇದರಿಂದ ಪ್ರಾಧಿಕಾರ ನಿಗದಿಪಡಿಸಿದಷ್ಟು ನೀರನ್ನು ತಮಿಳುನಾಡಿಗೆ ಕರ್ನಾಟಕ ಬಿಡುಗಡೆ ಮಾಡಿದೆ.

ಕಾವೇರಿ ಹಾಗೂ ಕೃಷ್ಣ ಕಣವೆಯಲ್ಲಿ ಭೀಕರ ಬರದ ಸನ್ನಿವೇಶ ಕಾಣಿಸಿಕೊಂಡಿದ್ದರಿಂದ ಸೆಪ್ಟೆಂಬರ್ 12ರ ನಂತರ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ, ಸುಪ್ರೀಂಕೋರ್ಟ್‌ಗೆ ಈಗಾಗಲೇ ಅಫಿಡೆವಿಟ್ ಸಲ್ಲಿಸಿದ್ದು, ಈ ಬಗ್ಗೆ ಸೆಪ್ಟೆಂಬರ್ 21ರಂದು ಕೋರ್ಟ್ನಲ್ಲಿ ವಿಚಾರಣೆಗೆ ಬರಲಿದೆ. ಹೀಗಾಗಿ ಕೋರ್ಟ್ ಏನು ತೀರ್ಪು ನೀಡಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

Sulekha