ಚೈತ್ರ ಕುಂದಾಪುರ ಗ್ಯಾಂಗ್ ನ ಎ3 ಆರೋಪಿ ಹಾಲಶ್ರೀ ಬಂಧನ – ದೊಡ್ಡ ದೊಡ್ಡ ಕುಳಗಳಿಗೆ ಶುರುವಾಯ್ತು ಟೆನ್ಷನ್
ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎ3 ಆರೋಪಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ವಂಚಿಸಿ (Fraud case) ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ (Chaitra Kundapura) ಗ್ಯಾಂಗ್ನ ಎ3 ಆರೋಪಿ ಅಭಿನವ ಹಾಲಶ್ರೀಯನ್ನು (Halashree) ಒಡಿಸ್ಸಾದಲ್ಲಿ ಅರೆಸ್ಟ್ ಮಾಡಲಾಗಿದೆ.
ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ತಲೆಮರೆಸಿಕೊಂಡಿದ್ದ ಸ್ವಾಮೀಜಿ ಇದೀಗ ಸಿಕ್ಕಿ ಬಿದ್ದಿದ್ದು ದೊಡ್ಡ ದೊಡ್ಡ ಕುಳಗಳ ಹೆಸರು ಬಹಿರಂಗವಾಗುವ ಸಾಧ್ಯತೆ ಇದೆ. ಪ್ರಕರಣದ ಬಳಿಕ ನಾಪತ್ತೆಯಾಗಿದ್ದ ಸ್ವಾಮೀಜಿಗಾಗಿ ಸಿಸಿಬಿ ಅಧಿಕಾರಿಗಳು ತೀವ್ರ ಹುಡುಕಾಟ ನಡೆಸುತ್ತಿದ್ದರು. ಹೈದರಾಬಾದ್ನಲ್ಲಿ ಅಡಗಿದ್ದ ಮಾಹಿತಿ ಮೇರೆಗೆ ಅಲ್ಲಿಗೂ ಅಧಿಕಾರಿಗಳ ತಂಡವನ್ನು ಕಳುಹಿಸಲಾಗಿತ್ತು. ಅಲ್ಲದೇ ಸ್ವಾಮೀಜಿ ಆಪ್ತರ ತೀವ್ರ ವಿಚಾರಣೆ ಕೂಡ ನಡೆಸಲಾಗಿತ್ತು. ಇದೀಗ ಒಡಿಸ್ಸಾದಲ್ಲಿ ರೈಲಿನಲ್ಲಿ ಬಂಧಿಸಲಾಗಿದೆ.
ಇದನ್ನೂ ಓದಿ : ಮಹಿಳಾ ಸಂಘಟನೆಯಲ್ಲಿದ್ದ ಪತ್ನಿ ಮನೆಯನ್ನೇ ಸೇರುತ್ತಿರಲಿಲ್ಲ – ರೊಚ್ಚಿಗೆದ್ದ ಪತಿಯಿಂದ ಇಬ್ಬರ ಪ್ರಾಣವೇ ಹೋಯ್ತು
ಕಟಕ್ ಬಳಿ ರೈಲಿನಲ್ಲಿ ಭುವನೇಶ್ವರದಿಂದ ಬೋಧ್ಗಯಾಗೆ ತೆರಳುತ್ತಿದ್ದ ವೇಳೆ ಹಾಲಶ್ರೀಯನ್ನು ಸಿಸಿಬಿ ಪೊಲೀಸರು ಹಿಡಿದಿದ್ದಾರೆ. ಒಡಿಶಾ ಪೊಲೀಸರ ಸಹಕಾರದಿಂದ ಹಾಲಶ್ರೀಯನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದು, ಇಂದು (ಸೆಪ್ಟೆಂಬರ್ 19) ರಾತ್ರಿ ಬೆಂಗಳೂರಿಗೆ ಕರೆತರಲಿದ್ದಾರೆ. ಇನ್ನು ಚೈತ್ರಾ ಕುಂದಾಪುರ ಹೇಳಿದಂತೆ ವಿಚಾರಣೆ ವೇಳೆ ಸ್ವಾಮೀಜಿ ದೊಡ್ಡ ದೊಡ್ಡವರ ಹೆಸರು ಬಾಯ್ಬಿಡುತ್ತರಾ ಎನ್ನುವ ಕುತೂಹಲ ಮೂಡಿಸಿದೆ. ಆರೋಪಿ ಹಾಲಶ್ರೀ ಫೋನ್ ಬಳಸದೆ ಪದೇ ಪದೇ ಇರುವ ಸ್ಥಳ ಬದಲಾಯಿಸುತ್ತಿದ್ದು, ಬಂಧನಕ್ಕೆ ಸ್ವಲ್ಪ ಕಷ್ಟವಾಗಿತ್ತು. ಆದರೆ ಇದೀಗ ಆರೋಪಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿರುವುದು ಖಚಿತವಾಗಿದೆ. ಸ್ವಾಮೀಜಿಗಾಗಿ ಪ್ರತ್ಯೇಕವಾಗಿ ಎರಡು ತಂಡಗಳು ಕಾರ್ಯಚರಣೆ ನಡೆಸುತ್ತಿದ್ದವು.