ಧರ್ಮಸ್ಥಳದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿಯ ರಕ್ಷಣೆ – ಬೆಂಗಳೂರಿನಲ್ಲಿ ಅಪಾರ್ಟ್ ಮೆಂಟ್ ಮೇಲಿಂದ ಹಾರಿ ಸೂಸೈಡ್
ಶಿಕ್ಷಣದಲ್ಲಿನ ಒತ್ತಡವೋ, ಶಿಕ್ಷಕರು ಅಥವಾ ಪೋಷಕರ ಭಯವೋ ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ದುಡುಕಿನ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಬೆಂಗಳೂರಿನಲ್ಲಿ ಅಪಾರ್ಟ್ ಮೆಂಟ್ ನಿಂದ ಜಿಗಿದು ವಿದ್ಯಾರ್ಥಿನಿ ಸಾವಿಗೆ ಶರಣಾಗಿದ್ದಾಳೆ.
ಇದನ್ನೂ ಓದಿ : ಒಂದೇ ವರ್ಷದಲ್ಲಿ 45 ಕೆಜಿ ತೂಕ ಇಳಿಸಿಕೊಂಡಳು.. – ವಿಚಿತ್ರ ರೋಗಕ್ಕೆ ಮಹಿಳೆ ಬಲಿ!
ಖಿನ್ನತೆಗೆ ಒಳಗಾಗುವವರ ಸಂಖ್ಯೆ ಹೆಚ್ಚಾಗುತ್ತಿದ್ದು ಸಾವಿನ ದಾರಿ ತುಳಿಯುತ್ತಿದ್ದಾರೆ. ಈ ಹಿಂದೆ ಧರ್ಮಸ್ಥಳದಲ್ಲಿ (Dharmasthala) ನೇತ್ರಾವತಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಅಪಾರ್ಟ್ ಮೆಂಟ್ ನಿಂದ ಜಿಗಿದು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ವಿಜಯಲಕ್ಷ್ಮಿ (17) ವರ್ಷದ ಮೃತಳು. ಈ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ. ಖಿನ್ನತೆಗೊಳಗಾಗಿ ವಿದ್ಯಾರ್ಥಿನಿ ಇಲ್ಲಿನ ಬ್ರೈಡ್ ಅಪಾರ್ಟ್ ಮೆಂಟ್ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಹಿಂದೆಯೇ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಳ್ಳಲು ಧರ್ಮಸ್ಥಳಕ್ಕೆ ಹೋಗಿದ್ದಳು. ಅಲ್ಲಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ವೇಳೆ ಸ್ಥಳೀಯ ರೊಬ್ಬರು ರಕ್ಷಣೆ ಮಾಡಿ ಬುದ್ಧಿ ಹೇಳಿ ಕಳುಹಿಸಿದ್ರು. ಪೋಷಕರಿಗೆ ಫೋನ್ ಮಾಡಿ ತಿಳಿ ಹೇಳಿ ಯುವತಿ ಯನ್ನು ವಾಪಸ್ ಕಳುಹಿಸಿದ್ರು. ಧರ್ಮಸ್ಥಳದಿಂದ ಬೆಂಗಳೂರಿಗೆ ವಾಪಸ್ ಬಂದು ಅಪಾರ್ಟ್ ಮೆಂಟ್ ನ ಟೆರೇಸ್ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇತ್ತ ಪುತ್ರಿ ಕಾಣೆಯಾಗಿದ್ದ ಬಗ್ಗೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೇಂಟ್ ಕೂಡ ದಾಖಲಾಗಿತ್ತು. ಸದ್ಯ ಯುವತಿ ಆತ್ಮಹತ್ಯೆ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.