ಮದುವೆ ಹಾಲ್‌ನಲ್ಲಿ ಭೀರಕ ಅಗ್ನಿ ದುರಂತ – 100ಕ್ಕೂ ಹೆಚ್ಚು ಮಂದಿ ಸಜೀವ ದಹನ
ಬಾಗ್ದಾದ್: ಮದುವೆ ಹಾಲ್‌ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ 100ಕ್ಕೂ ಹೆಚ್ಚು ಮಂದಿ ಸಜಿವ ದಹನಗೊಂಡಿದ್ದು, 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಇರಾಕ್‍ನಲ್ಲಿ ನಡೆದಿದೆ.
ಇರಾಕ್‍ನ ನಿನೆವೆ ಪ್ರಾಂತ್ಯದ ಹಮ್ದನಿಯಾ ಪ್ರದೇಶದಲ್ಲಿರು ಹಾಲ್‌ನಲ್ಲಿ ಮದುವೆ ಸಮಾರಂಭ ನಡೆಯುತ್ತಿತ್ತು. ಈ ವೇಳೆ ಹಾಲ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಹಾಲ್‌ನಲ್ಲಿರುವ ಪರದೆಗಳಿಗೂ ಬೆಂಕಿ ಹಬ್ಬಿದ್ದು, ಇಡೀ ಸಭಾಂಗಣಕ್ಕೆ ಆವರಿಸಿಕೊಂಡಿದೆ. ಸಭಾಂಗಣದಲ್ಲಿದ್ದವರು ಗಾಬರಿಗೊಂಡು ಓಡಲು ಶುರುಮಾಡಿದ್ದಾರೆ. ಈ ವೇಳೆ ನೂಕು ನುಗ್ಗಲು ಸಂಭವಿಸಿ ಸಜೀವ ದಹನಗೊಂಡಿದ್ದಾರೆ. ಈ ಅವಘಡಲ್ಲಿ 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ನಿನೆವೆ ಪ್ರಾಂತೀಯ ಗವರ್ನರ್ ನಜೀಮ್ ಅಲ್-ಜುಬೌರಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಕೊರಗಜ್ಜನ ನುಡಿಯಿಂದ ನಡೆಯಿತು ಪವಾಡ – 8 ದಿನಗಳ ನಂತರ ಕಾಣೆಯಾದ ಮಗ ಅಚ್ಚರಿಯೆಂಬಂತೆ ಪ್ರತ್ಯಕ್ಷ..!
ನಿನೆವೆ ಪ್ರಾಂತ್ಯದ ಹಮ್ದನಿಯಾ ಪ್ರದೇಶ ಪ್ರಧಾನವಾಗಿ ಕ್ರಿಶ್ಚಿಯನ್ ಪ್ರದೇಶವಾಗಿದ್ದು, ಮೊಸುಲ್ ನಗರದ ಹೊರಗೆ ರಾಜಧಾನಿ ಬಾಗ್ದಾದ್‍ನ ವಾಯುವ್ಯಕ್ಕೆ ಸುಮಾರು 335 ಕಿಲೋಮೀಟರ್ (205 ಮೈಲುಗಳು) ದೂರದಲ್ಲಿದೆ. ಘಟನೆ ನಡೆದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಗಾಯಗೊಂಡವರಲ್ಲಿ ಕೆಲವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಹೇಳಿದ್ದಾರೆ.
ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಪಟಾಕಿಯಿಂದಾಗಿ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆಗಳಿವೆ ಎನ್ನಲಾಗಿದೆ. ಈ ಎಲ್ಲಾ ದೃಶ್ಯಗಳು ಹಾಲ್‍ನಲ್ಲಿದ್ದ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.