ಬರಿದಾದ ಕೆಆರ್ಎಸ್ ಡ್ಯಾಮ್ ನೋಡಿ ರಾಜವಂಶಸ್ಥೆ ಪ್ರಮೋದಾದೇವಿ ಬೇಸರ – ಮಳೆಗಾಗಿ ಪ್ರಾರ್ಥನೆ
ಮಳೆಗಾಲದಲ್ಲಿ ಸರಿಯಾಗಿ ಮಳೆ ಬರಲಿಲ್ಲ. ಈಗಲೂ ಬೇಕಾದಷ್ಟು ನೀರು ತುಂಬಿಲ್ಲ. ಕಾವೇರಿ ನದಿಯಲ್ಲಿ ಮಳೆಗಾಲದಿಂದ ಹಿಡಿದು ಈಗಲೂ ಕೂಡಾ ಅಷ್ಟೇನು ನೀರಿಲ್ಲ. ಹೀಗಿರುವಾಗ ತಮಿಳುನಾಡಿಗೆ ನೀರು ಹರಿಸಲಾಗುತ್ತಿದ್ದು, ಪರಿಸ್ಥಿತಿ ಹೀಗೆ ಮುಂದುವರೆದರೆ ಮುಂದಿನ ದಿನಗಳಲ್ಲಿ ನೀರಿನ ಹಾಹಾಕಾರ ಶುರುವಾಗಲಿದೆ. ಇದರ ಮಧ್ಯೆ, ಮೈಸೂರಿನ ರಾಜವಂಶಸ್ಥೆ ಪ್ರಮೋದಾದೇವಿ ಕೆಆರ್ ಎಸ್ ಡ್ಯಾಂಗೆ ಭೇಟಿ ನೀಡಿ ವೀಕ್ಷಣೆ ಮಾಡಿದ್ದಾರೆ.
ಇದನ್ನೂ ಓದಿ: ನಾಡಹಬ್ಬ ದಸರಾ ಮೇಲೆ ಬರದ ಕರಿ ನೆರಳು -ಖಾಸಗಿ ಪ್ರಾಯೋಜಕತ್ವಕ್ಕೆ ಮೊರೆ ಹೋದ ಸರ್ಕಾರ!
ಕೆಆಆರ್ಎಸ್ ಜಲಾಶಯದಿಂದ ತಮಿಳುನಾಡಿಗೆ ನಿರಂತರ ನೀರು ಹರಿಸುತ್ತಿರುವ ಬೆನ್ನಲ್ಲೇ ಮೈಸೂರಿನ ರಾಜವಂಶಸ್ಥೆ ಪ್ರಮೋದಾದೇವಿ ಕೆಆರ್ಎಸ್ ಡ್ಯಾಂಗೆ ಭೇಟಿ ನೀಡಿ ವೀಕ್ಷಣೆ ಮಾಡಿದ್ದಾರೆ. ಕೆಆರ್ಎಸ್ ಡ್ಯಾಂನಲ್ಲಿ ನೀರು ಕಡಿಮೆ ಇರುವುದರಿಂದ ತಮಿಳುನಾಡಿಗೆ ನೀರು ಹರಿಸದಂತೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇವರ ಈ ಪ್ರತಿಭಟನೆಯ ನಡುವೆಯೂ ಅ.15ರವರೆಗೆ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ನೀಡಿದೆ. ಈ ಬೆನ್ನಲ್ಲೇ ಮೈಸೂರಿನ ರಾಜಮಾತೆ ಪ್ರಮೋದಾದೇವಿ ಒಡೆಯರ್ ಮಂಡ್ಯದ ಕೆಆರ್ಎಸ್ ಡ್ಯಾಂಗೆ ಭೇಟಿ ನೀಡಿದ್ದು, ಮಳೆಗಾಲದಲ್ಲೂ ಬರಿದಾದ ಡ್ಯಾಮ್ ನೋಡಿ ಬೇಸರಗೊಂಡಿದ್ದಾರೆ. ರಾಜಮಾತೆ ಒಬ್ಬರೇ ಡ್ಯಾಮ್ ಬಳಿ ಭೇಟಿ ನೀಡಿ ವೀಕ್ಷಣೆ ನಡೆಸಿದ್ದಾರೆ. ಬರಿದಾಗಿರುವ ಡ್ಯಾಂ ನೋಡಿ ಬೇಸರಗೊಂಡ ಪ್ರಮೋದಾದೇವಿ ಮಳೆಗಾಗಿ ಪ್ರಾರ್ಥನೆ ಮಾಡಿದ್ದಾರೆ.