ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ – ಮನೆಗಳಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದ ಕಿಡಿಗೇಡಿಗಳು!

ಇಂಫಾಲ: ಜನಾಂಗೀಯ ಹಿಂಸಾಚಾರದಲ್ಲಿ ಬೆಂದು ಹೋಗಿರುವ ಮಣಿಪುರದಲ್ಲಿ ಮತ್ತೆ ಗಲಭೆ ಎದ್ದಿದೆ. ಇಂಫಾಲ ಜಿಲ್ಲೆಯಲ್ಲಿ ಮತ್ತೆ ಹಿಂಸಾಚಾರ ಮರುಕಳಿಸಿದೆ. ಕಿಡಿಗೇಡಿಗಳು ಮನೆಗಳಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ ಎಂದು ವರದಿಯಾಗಿದೆ.
ಕೀತೆಲ್ಮನಬಿ ಎನ್ನುವ ಪ್ರದೇಶದಲ್ಲಿ ಬುಧವಾರ ರಾತ್ರಿ 10 ಗಂಟೆಗೆ ಮತ್ತೆ ಗಲಭೆ ಎದ್ದಿದೆ. ಬಳಿಕ ಆ ಪ್ರದೇಶದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಕಿಡಿಗೇಡಿಗಳು ಕನಿಷ್ಠ ಎರಡು ಮನೆಗಳಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ. ಪರಿಸ್ಥಿತಿ ಬಿಗುಡಾಯಿಸುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಜತೆಗೆ ಹಲವು ಸುತ್ತು ಗುಂಡು ಹಾರಿಸಲಾಗಿದೆ ದಾಳಿಯ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಈ ಪ್ರದೇಶದಲ್ಲಿ ಉದ್ವಿಗ್ನತೆ ಉಂಟುಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಶಿವಮೊಗ್ಗ ಗಲಭೆ ಬಗ್ಗೆ ಮಾಹಿತಿ ಕಲೆ ಹಾಕಲು ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ – ಕಟೀಲ್ ನೇತೃತ್ವದಲ್ಲಿ ಪರಿಶೀಲನೆ
ದಾಳಿ ನಡೆದ ಬಳಿಕ ಸ್ಥಳದಲ್ಲಿ ಅತಂಕದ ವಾತಾವರಣ ಸೃಷ್ಟಿಯಾಗಿದೆ. ಭದ್ರತಾ ಪಡೆಗಳು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಭದ್ರತೆಗಾಗಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೇ 3 ರಂದು ಮೈತೇಯಿ ಮತ್ತು ಕುಕಿ ಜನಾಂಗಗಳ ಮಧ್ಯೆ ಆರಂಭವಾದ ಸಂಘರ್ಷದಲ್ಲಿ ಈವರೆಗೆ 180ಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ.

ನೋಡಿರಿ

