ಆಸ್ಟ್ರೇಲಿಯಾ ವಿರುದ್ಧ ಗೆಲುವಿನಲ್ಲಿ ವಿರಾಟ್ ಕೊಡುಗೆ – ಗೋಲ್ಡ್ ಮೆಡಲ್ ಧರಿಸಿ ಸಂಭ್ರಮಿಸಿದ ಕಿಂಗ್ ಕೊಹ್ಲಿ
ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಏಕದಿನ ವಿಶ್ವಕಪ್‌ನ 5ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ವಿಶ್ವಕಪ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡುವ ಆಟಗಾರನಿಗೆ ಗೋಲ್ಡ್ ಮೆಡಲ್ ನೀಡುವ ಸಂಪ್ರದಾಯವನ್ನು ಟೀಮ್ ಇಂಡಿಯಾ ಆರಂಭ ಮಾಡಿದೆ.
ಇದನ್ನೂ ಓದಿ: ಸ್ನಾನ ಮುಗಿಸಿ ರೆಸ್ಟ್ ಮಾಡಲು ಸಾಧ್ಯವಾಗಿಲ್ಲ – ಅಂದು ಕಪಿಲ್ ದೇವ್, ಇಂದು ಕನ್ನಡಿಗ ಕೆ.ಎಲ್ ರಾಹುಲ್..!
ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಟೀಮ್ ಇಂಡಿಯಾ ದಾಳಿಗೆ ತತ್ತರಿಸಿತು. ಮಿಚೆಲ್ ಮಾರ್ಷ್ ಅವರು ಹೊಡೆದ ಬಾಲ್ ನ್ನು ಕ್ಷಣಾರ್ಧದಲ್ಲೇ ಅದ್ಭುತ ಡೈವಿಂಗ್ ಕ್ಯಾಚ್ ಹಿಡಿಯುವ ಮೂಲಕ ವಿರಾಟ್ ಕೊಹ್ಲಿ ಟೀಮ್ ಇಂಡಿಯಾಗೆ ಮೊದಲ ಯಶಸ್ಸು ತಂದುಕೊಟ್ಟಿದ್ದರು. ಇದಾದ ನಂತರವೂ ವಿರಾಟ್ ಕೊಹ್ಲಿ ಅತ್ಯುತ್ತಮ ಫೀಲ್ಡಿಂಗ್ ಮಾಡಿದರು. ನಂತರ ಬ್ಯಾಟಿಂಗ್‌ನಲ್ಲೂ ವಿರಾಟ್ ಕೊಹ್ಲಿ ಮಿಂಚಿದ್ದರು. 85 ರನ್ ಗಳಿಸಿ ತಂಡದ ಗೆಲುವಿಗೂ ತಮ್ಮ ಕೊಡುಗೆ ನೀಡಿದರು. ಈ ಗೆಲುವಿನ ಬಳಿಕ ಡ್ರೆಸ್ಸಿಂಗ್ ರೂಮ್‌ನಲ್ಲಿ ನಡೆದ ಪ್ರಶಂಸಾ ಮೀಟ್‌ನಲ್ಲಿ ವಿರಾಟ್ ಕೊಹ್ಲಿಗೆ ವಿಶೇಷ ಗೌರವ ನೀಡಲಾಯಿತು. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಅದ್ಭುತ ಫೀಲ್ಡಿಂಗ್ ಮೂಲಕ ಟೀಮ್ ಇಂಡಿಯಾಗೆ ಗೆಲುವಿನಲ್ಲಿ ಎಲ್ಲಾ ರೀತಿಯಲ್ಲೂ ಕೊಡುಗೆ ನೀಡಿದ ವಿರಾಟ್ ಕೊಹ್ಲಿಗೆ ಮೊದಲ ಪದಕ ಒಲಿದಿದೆ. ಭಾರತ ತಂಡದ ಫೀಲ್ಡಿಂಗ್ ಕೋಚ್ ಟಿ ದಿಲೀಪ್ ಅವರು ಕೊಹ್ಲಿಗೆ ಪದಕ ನೀಡಿ ಗೌರವಿಸಿದರು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಟೀಮ್ ಇಂಡಿಯಾ ತನ್ನ 2ನೇ ಪಂದ್ಯವನ್ನು ಅಕ್ಟೋಬರ್ 11 ರಂದು ಆಡಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತ ತಂಡವು ಅಫ್ಘಾನಿಸ್ತಾನ್ ತಂಡವನ್ನು ಎದುರಿಸಲಿದೆ.