ಅಫ್ಘಾನಿಸ್ತಾನ ವಿರುದ್ಧ ಸೋತು ಸುಣ್ಣವಾದ ಹಾಲಿ ಚಾಂಪಿಯನ್ ಇಂಗ್ಲೆಂಡ್ –ಆಂಗ್ಲರ ಅವಮಾನಕರ ಸೋಲಿಗೆ ಸಿಕ್ಕಾಪಟ್ಟೆ ಟ್ರೋಲ್

ಹಾಲಿ ಚಾಂಪಿಯನ್ ಇಂಗ್ಲೆಂಡ್ ಈ ಬಾರಿ ವಿಶ್ವಕಪ್ನಲ್ಲಿ ಅಫ್ಘಾನಿಸ್ತಾನ ತಂಡದ ವಿರುದ್ಧ ಅವಮಾನಕರ ರೀತಿಯಲ್ಲಿ ಸೋಲು ಕಂಡಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡ 284 ರನ್ ಕಲೆಹಾಕಿತು. ಇದಕ್ಕೆ ಉತ್ತರವಾಗಿ ಹಾಲಿ ಚಾಂಪಿಯನ್ ಇಂಗ್ಲೆಂಡ್ 215 ರನ್ಗಳಿಗೆ ಆಲೌಟ್ ಆಗುವ ಮೂಲಕ ಅಫ್ಘಾನಿಸ್ತಾನ ತಂಡದ ಎದುರು ಮಂಡಿಯೂರಿತು. ಹಾಲಿ ಚಾಂಪಿಯನ್ ಇಂಗ್ಲೆಂಡ್ನ ಈ ಅವಮಾನಕರ ಸೋಲಿನ ನಂತರ ಸೋಶಿಯಲ್ ಮೀಡಿಯಾದಲ್ಲಿ ವಿಭಿನ್ನ ರೀತಿಯ ಪ್ರತಿಕ್ರಿಯೆಗಳು ಹೊರಹೊಮ್ಮುತ್ತಿವೆ.
ಹಶ್ಮತುಲ್ಲಾ ಶಾಹಿದಿ ನಾಯಕತ್ವದಲ್ಲಿ ಅಫ್ಘಾನಿಸ್ತಾನ ಕ್ರಿಕೆಟ್ ತಂಡ ಐಸಿಸಿ ಏಕದಿನ ವಿಶ್ವಕಪ್ನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿ ಇತಿಹಾಸ ನಿರ್ಮಿಸಿದೆ. 69 ರನ್ಗಳಿಂದ ಇಂಗ್ಲೆಂಡ್ ತಂಡವನ್ನು ಮಣಿಸಿದ ಅಫ್ಘಾನಿಸ್ತಾನಕ್ಕೆ ಏಕದಿನ ವಿಶ್ವಕಪ್ನಲ್ಲಿ ಇದು ಎರಡನೇ ಗೆಲುವು. ಈ ಹಿಂದೆ 2015 ರ ವಿಶ್ವಕಪ್ನಲ್ಲಿ ಸ್ಕಾಟ್ಲೆಂಡ್ ತಂಡವನ್ನು ಸೋಲಿಸುವ ಮೂಲಕ ತನ್ನ ಮೊದಲ ವಿಶ್ವಕಪ್ ಪಂದ್ಯವನ್ನು ಅಫ್ಘಾನಿಸ್ತಾನ ಗೆದ್ದುಕೊಂಡಿತ್ತು. ಇದೀಗ ಇಂಗ್ಲೆಂಡ್ ತಂಡವನ್ನು ಮಣಿಸಿರುವ ಅಫ್ಘಾನ್ ತಂಡಕ್ಕೆ ಬರೋಬ್ಬರಿ 8 ವರ್ಷಗಳ ನಂತರ ಈ ಗೆಲುವು ಲಭಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡ 284 ರನ್ ಕಲೆಹಾಕಿತು. ಇದಕ್ಕೆ ಉತ್ತರವಾಗಿ ಹಾಲಿ ಚಾಂಪಿಯನ್ ಇಂಗ್ಲೆಂಡ್ 215 ರನ್ಗಳಿಗೆ ಆಲೌಟ್ ಆಯಿತು. ಹಾಲಿ ಚಾಂಪಿಯನ್ ಇಂಗ್ಲೆಂಡ್ನ ಈ ಅವಮಾನಕರ ಸೋಲಿನ ನಂತರ ಸೋಶಿಯಲ್ ಮೀಡಿಯಾದಲ್ಲಿ ವಿಭಿನ್ನ ರೀತಿಯ ಪ್ರತಿಕ್ರಿಯೆಗಳು ಹೊರಹೊಮ್ಮುತ್ತಿವೆ.
Afganistan Players Be like : Next Time Pakistani ki mcd nay ka Time haii#ENGvAFG #AFGvsENG #ENGvsAFG #upsetpic.twitter.com/zX8rhUlc9d
— Shubham 𝕏 (@DankShubhum) October 15, 2023
ಭಾರತದ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಕೂಡ ಅಫ್ಘಾನಿಸ್ತಾನದ ಈ ದೊಡ್ಡ ಗೆಲುವಿಗೆ ಪೋಸ್ಟ್ ಮಾಡುವ ಮೂಲಕ ಅಫ್ಘಾನ್ ತಂಡವನ್ನು ಅಭಿನಂದಿಸಿದ್ದು, ‘ಅಫ್ಘಾನಿಸ್ತಾನಕ್ಕೆ ಅನೇಕ ಅಭಿನಂದನೆಗಳು. ನೀವು ಎಲ್ಲಾ ವಿಭಾಗಗಳಲ್ಲಿ ಇಂಗ್ಲೆಂಡ್ ಅನ್ನು ಸೋಲಿಸಿದ್ದೀರಿ. ಗುರ್ಬಜ್ಜಾ ನೀವು ಅದ್ಭುತ ಇನ್ನಿಂಗ್ಸ್ ಆಡಿದ್ದೀರಿ, ಮಧ್ಯಮ ಓವರ್ಗಳಲ್ಲಿ ಇಕ್ರಮ್ ಉತ್ತಮವಾಗಿ ಕಾಣುತ್ತಿದ್ದರು. ಅಫ್ಘಾನಿಸ್ತಾನದ ಬೌಲಿಂಗ್ ಉನ್ನತ ದರ್ಜೆಯದ್ದಾಗಿದೆ’ ಎಂದು ಬರೆದುಕೊಂಡಿದ್ದಾರೆ. ಇರ್ಫಾನ್ ಪಠಾಣ್ ಜೊತೆಗೆ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವಾಸಿಂ ಜಾಫರ್ ಕೂಡ ಇಂಗ್ಲೆಂಡ್ನ ಮಾಜಿ ನಾಯಕ ಮೈಕೆಲ್ ವಾನ್ ಅವರನ್ನು ಟೀಕಿಸುವ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಐಸಿಸಿ ಏಕದಿನ ವಿಶ್ವಕಪ್ 2023 ರ ಇಂಗ್ಲೆಂಡ್ ವಿರುದ್ದದ ಪಂದ್ಯದಲ್ಲಿ ಅಫ್ಘಾನಿಸ್ತಾನ್ 69 ರನ್ಗಳ ರೋಚಕ ಜಯ ಸಾಧಿಸಿ ಏಕದಿನ ವಿಶ್ವಕಪ್ ಇತಿಹಾಸದಲ್ಲಿ 2ನೇ ಗೆಲುವು ಕಂಡು ಇತಿಹಾಸ ಸೃಷ್ಟಿಸಿತು. ಅಫ್ಘಾನ್ ಗೆಲುವನ್ನು ಭಾರತೀಯ ಅಭಿಮಾನಿಗಳು ಭರ್ಜರಿ ಸಂಭ್ರಮಿಸಿದರು.
ಇಂಗ್ಲೆಂಡ್ ತಂಡ: ಜಾನಿ ಬೈರ್ಸ್ಟೋವ್, ಡೇವಿಡ್ ಮಲನ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಲಿಯಾಮ್ ಲಿವಿಂಗ್ಸ್ಟೋನ್, ಸ್ಯಾಮ್ ಕರನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್, ರೀಸ್ ಟೋಪ್ಲಿ
ಅಫ್ಘಾನಿಸ್ತಾನ್ ತಂಡ: ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಜದ್ರಾನ್, ರಹಮತ್ ಶಾ, ಹಶ್ಮತ್ ಶಾಹಿದಿ (ನಾಯಕ),ಮೊಹಮ್ಮದ್ ನಬಿ, ಅಜ್ಮತ್ ಒಮರ್ಜಾಯ್, ಇಕ್ರಮ್ ಅಲಿ ಖಿಲ್, ರಶೀದ್ ಖಾನ್, ಮುಜೀಬ್ ಉರ್ ರೆಹಮಾನ್, ನವೀನ್-ಉಲ್-ಹಕ್, ಫಜಲ್ ಫಾರೂಕಿ.