ಜೆಡಿಎಸ್ ಅಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂ ತೆರವು – ನೂತನ ರಾಜ್ಯಾಧ್ಷಕ್ಯರಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಯ್ಕೆ

ಜೆಡಿಎಸ್ ಅಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂ ತೆರವು – ನೂತನ ರಾಜ್ಯಾಧ್ಷಕ್ಯರಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಯ್ಕೆ

ಸಿಎಂ ಇಬ್ರಾಹಿಂಗೆ ಜೆಡಿಎಸ್ ಅಧ್ಯಕ್ಷ ಸ್ಥಾನವನ್ನು ತೆರವು ಮಾಡಲಾಗಿದ್ದು, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ಜೆಡಿಎಸ್ ಕಚೇರಿಯಲ್ಲಿ ನಡೆದ ಜೆಡಿಎಸ್ ಕಾರ್ಯಕಾರಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ:  ಸಿಎಂ ಸಿದ್ದರಾಮಯ್ಯ ಈ ಹಗರಣಗಳನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲಿ – ಬಿಜೆಪಿ ಆಗ್ರಹ

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ, ಚುನಾವಣೆ ಬಳಿಕ ನಡೆದ ರಾಜಕೀಯ ಘಟನೆಗಳ ಹಿನ್ನಲೆಯಲ್ಲಿ ಹಳೆ ಘಟಕ ವಿಸರ್ಜನೆ ಮಾಡಿ ಹೊಸ ಸಮಿತಿ ರಚನೆ ಮಾಡಲಾಗಿದೆ. ಪಕ್ಷದಲ್ಲಿ ಪುನಶ್ಚೇತನ ಮಾಡಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಜವಾಬ್ದಾರಿ ನಿರ್ವಹಣೆ ಮಾಡಲು ಹೇಳಿದ್ದಾರೆ. ಕೋರ್ ಕಮಿಟಿ ಹಾಗೂ 18 ಶಾಸಕರು ಸಭೆಯಲ್ಲಿ ಭಾಗಿಯಾಗಿದ್ದರು. ಎಲ್ಲರ ಸಹಮತದಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ. ಎಲ್ಲರನ್ನೂ ವಿಶ್ವಾಸ ತೆಗೆದುಕೊಳ್ಳುವ ಮೂಲಕ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ಇಂದು ನಡೆದ ಸಭೆಯಲ್ಲಿ ಜೆಡಿಎಸ್‌ನ 19 ಶಾಸಕರ ಪೈಕಿ 18 ಶಾಸಕರು ಭಾಗಿಯಾಗಿದ್ದರು. 18 ಶಾಸಕರ ಮತ್ತು ಪಕ್ಷದ ಪದಾಧಿಕಾರಿಗಳ ಅಭಿಪ್ರಾಯ ಪಡೆದಿದ್ದೇವೆ. ಪಕ್ಷ ಸಂಘಟನೆ ದೃಷ್ಟಿಯಿಂದ ದಸರಾ ನಂತರ ಹಲವಾರು ನಿರ್ಣಯ ಕೈಗೊಳ್ಳಲಾಗುವುದು. ರಾಜ್ಯದ ಎಲ್ಲಾ ಜಿಲ್ಲೆಗಳ ಅಧ್ಯಕ್ಷರು ಸಭೆಗೆ ಆಗಮಿಸಿ ಸಲಹೆ ನೀಡಿದರು. ಸರ್ವ ಸದಸ್ಯರ ಸಲಹೆ ಆಧರಿಸಿ ರಾಜ್ಯಾಧ್ಯಕ್ಷ ಸ್ಥಾನ ನಿರ್ವಹಿಸುವೆ ಎಂದು ಹೆಚ್.ಡಿ ಕುಮಾರಸ್ವಾಮಿ ಹೇಳಿದರು. ವಿಧಾನಸಭಾ ಚುನಾವಣೆಯಲ್ಲಿ ಸೋಲಿನಿಂದ ಆಘಾತಕ್ಕೊಳಗಿದ್ದೆವು. ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸಲು ನಿರ್ಧರಿಸಿದ್ದೇವೆ ಜೆಡಿಎಸ್‌ನ ನೂತನ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಇದೇ ವೇಳೆ ಹೇಳಿದರು.

Sulekha