ಕ್ಷಣ ಕ್ಷಣಕ್ಕೂ ತೀವ್ರಗೊಳ್ಳುತ್ತಿದೆ ಇಸ್ರೇಲ್ – ಹಮಾಸ್ ದಾಳಿ – ಮೂರು ಆಸ್ಪತ್ರೆಗಳ ಬಳಿ ಬಾಂಬ್ ದಾಳಿ
ಟೆಲ್ ಅವಿವ್: ಹಮಾಸ್ ಬಂಡುಕೋರರು ಹಾಗೂ ಇಸ್ರೇಲ್ ನಡುವೆ ಭೀಕರ ದಾಳಿ ನಡೆಯುತ್ತಿದೆ. ಕ್ಷಣ ಕ್ಷಣಕ್ಕೂ ಕದನ ತೀವ್ರಗೊಳ್ಳುತ್ತಿದೆ. ಸೋಮವಾರ ಮುಂಜಾನೆ ಇಸ್ರೇಲ್ ಗಾಜಾ ಪಟ್ಟಿಯಲ್ಲಿರುವ ಮೂರು ಆಸ್ಪತ್ರೆಗಳ ಸಮೀಪದಲ್ಲಿ ಇಸ್ರೇಲ್ ಬಾಂಬ್ ದಾಳಿ ನಡೆಸಿದೆ ಎಂದು ವರದಿಯಾಗಿದೆ.
ಸೋಮವಾರ ಆಸ್ಪತ್ರೆಗಳ ಸಮೀಪದಲ್ಲಿ ಇಸ್ರೇಲ್ ಬಾಂಬ್ ದಾಳಿ ನಡೆಸಿದ್ದು. ಬಾಂಬ್ ದಾಳಿಯಿಂದ ಆಸ್ಪತ್ರೆ ಹಾನಿಗೊಳಗಾಗಿದೆ ಎಂಬುದು ಸ್ಪಷ್ಟವಾಗಿಲ್ಲ. ಇಸ್ರೇಲ್ ಗಾಜಾ ನಗರದ ಶಿಫಾ ಮತ್ತು ಅಲ್-ಕುದ್ಸ್ ಆಸ್ಪತ್ರೆಗಳ ಬಳಿ ಮತ್ತು ಎನ್ಕ್ಲೇವ್ನ ಉತ್ತರದಲ್ಲಿರುವ ಇಂಡೋನೇಷಿಯನ್ ಆಸ್ಪತ್ರೆಯ ಬಳಿ ದಾಳಿ ಮಾಡಿದೆ ಎಂದು ವರದಿ ಹೇಳಿದೆ.
ಇದನ್ನೂ ಓದಿ: ನಾಡಿನೆಲ್ಲೆಡೆ ಆಯುಧ ಪೂಜೆ, ವಿಜಯ ದಶಮಿ ಸಂಭ್ರಮ- ಗಗನಕ್ಕೇರಿದ ಹೂ, ಹಣ್ಣುಗಳ ದರ
ಇದಕ್ಕೂ ಮೊದಲು, ಅಲ್-ಕುಡ್ಸ್ ಆಸ್ಪತ್ರೆಯನ್ನು ಸ್ಥಳಾಂತರಿಸಲು ಇಸ್ರೇಲ್ ಆದೇಶಿಸಿದೆ ಎಂದು ಪ್ಯಾಲೆಸ್ತೀನಿಯನ್ ರೆಡ್ ಕ್ರೆಸೆಂಟ್ ಸೊಸೈಟಿ ಹೇಳಿದೆ. ಗಾಜಾದಲ್ಲಿನ ವಸತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ ನಡೆಸಿದ ಪರಿಣಾಮ ಕನಿಷ್ಠ 30 ಪ್ಯಾಲೆಸ್ತೀನಿಯಾದವರು ಸಾವನ್ನಪ್ಪಿದ್ದಾರೆ. ಎನ್ಕ್ಲೇವ್ನಲ್ಲಿ ಕಳೆದ 24 ಗಂಟೆಗಳಲ್ಲಿ ಇಸ್ರೇಲ್ ವೈಮಾನಿಕ ದಾಳಿಯಿಂದ 117 ಮಕ್ಕಳು ಸೇರಿದಂತೆ 266 ಪ್ಯಾಲೆಸ್ತೀನಿಯಾದವರು ಸಾವನ್ನಪ್ಪಿದ್ದಾರೆ ಎಂದು ಗಾಜಾದ ಆರೋಗ್ಯ ಸಚಿವಾಲಯ ತಿಳಿಸಿದೆ.
ಹಮಾಸ್ನ ರಾಜಕೀಯ ಬ್ಯೂರೋ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಮತ್ತು ಇರಾನ್ ವಿದೇಶಾಂಗ ಸಚಿವ ಹೊಸೈನ್ ಅಮೀರ್-ಅಬ್ದುಲ್ಲಾಹಿಯಾನ್ ಅವರು ಗಾಜಾದ ಮೇಲೆ ಇಸ್ರೇಲಿ ದಾಳಿಯನ್ನು ಹೇಗೆ ನಿಲ್ಲಿಸಬೇಕು ಎಂಬುದರ ಕುರಿತು ಚರ್ಚಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.
ಅಕ್ಟೋಬರ್ 7 ರಂದು ಪ್ಯಾಲೇಸ್ತೀನಿಯನ್ ಗುಂಪು ಹಮಾಸ್ ಇಸ್ರೇಲ್ ಮೇಲೆ ಹಠಾತ್ ದಾಳಿಯನ್ನು ಪ್ರಾರಂಭಿಸಿ 1,400 ಜನರನ್ನು ಕೊಂದ ನಂತರ ಇಸ್ರೇಲ್ ತನ್ನ ದಾಳಿಯನ್ನು ಪ್ರಾರಂಭಿಸಿದೆ. ಎರಡು ವಾರಗಳ ಬಾಂಬ್ ದಾಳಿಯಲ್ಲಿ ಕನಿಷ್ಠ 4,600 ಜನರು ಸಾವನ್ನಪ್ಪಿದ್ದಾರೆ ಎಂದು ಗಾಜಾದ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.