ಹಬ್ಬ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದಾಗ ಭೀಕರ ಅಪಘಾತ – 13 ಸಾವು, ಇಬ್ಬರು ಗಂಭೀರ

ಹಬ್ಬ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದಾಗ ಭೀಕರ ಅಪಘಾತ – 13 ಸಾವು, ಇಬ್ಬರು ಗಂಭೀರ

ಚಿಕ್ಕಬಳ್ಳಾಪುರದಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ಟ್ಯಾಂಕರ್‌ ಹಾಗೂ ಕಾರು ಮಧ್ಯೆ ಕಾರು ಅಪಘಾತ ಸಂಭವಿದೆ. ಪರಿಣಾಮ 13 ಮಂದಿ ಧಾರುಣವಾಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಚಿಕ್ಕಬಳ್ಳಾಪುರದ ಚಿತ್ರಾವತಿ ಬಳಿ ಗುರುವಾರ ಮುಂಜಾನೆ 6:30ರ ವೇಳೆಗೆ ಈ ದುರ್ಘಟನೆ ಸಂಭವಿಸಿದೆ. ಟಾಟಾ ಸುಮೋದಲ್ಲಿ 14 ಜನರು ಆಂದ್ರಪ್ರದೇಶದಿಂದ ಬೆಂಗಳೂರಿನತ್ತ ಬರುತ್ತಿದ್ದರು. ಈ ವೇಳೆ ಟಾಟಾ ಸುಮೋಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: ಮುಂದಿನ 12 ಗಂಟೆಗಳ ಅವಧಿಯಲ್ಲಿ ಮತ್ತಷ್ಟು ದುರ್ಬಲಗೊಳ್ಳಲಿದೆ ಹಮೂನ್‌ ಚಂಡಮಾರುತ – ಐಎಂಡಿ

ಈ ದುರ್ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇಂದು ಬೆಳಗ್ಗೆ ಅತಿಯಾದ ಮಂಜು ಇತ್ತು. ಈ ಕಾರಣಕ್ಕೆ ಚಾಲಕನಿಗೆ ರಸ್ತೆಯ ಗುರುತು ಸಿಗದೇ ನಿಂತಿದ್ದ ಟ್ಯಾಂಕರ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿರಬಹುದು ಎಂದು ಶಂಕಿಸಲಾಗಿದೆ.

ಮೃತರು ಆಂಧ್ರದ ಗೊರೆಂಟ್ಲ ಮೂಲದವರಾಗಿದ್ದು ಬೆಂಗಳೂರಿನ ಹೊಂಗಸಂದ್ರದಲ್ಲಿ ವಾಸವಾಗಿದ್ದರು. ದಸರಾ ಹಬ್ಬಕ್ಕೆ ಗೊರೆಂಟ್ಲ ಗ್ರಾಮಕ್ಕೆ ತೆರಳಿದ್ದ ಇವರು ಹಬ್ಬ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅರುಣಾ, ನವೀನ್ ಕುಮಾರ್, ನಂಜುಂಡಪ್ಪ, ಪದ್ಮಾವತಿ, ಋತ್ವಿಕ್ ಕುಮಾರ್ ಮೃತಪಟ್ಟಿದ್ದಾರೆ. ಉಳಿದ ಹೆಸರು ಲಭ್ಯವಾಗಿಲ್ಲ.

Shwetha M