ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಮೂಡಿಗೆರೆಯ ಓಟಗಾರ್ತಿ ಮುಡಿಗೇರಿದ ಚಿನ್ನ – 73 ಪದಕ ಗೆದ್ದ ಕ್ರೀಡಾಪಟುಗಳ ಸಾಧನೆಗೆ ಪ್ರಧಾನಿ ಶ್ಲಾಘನೆ

ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಮೂಡಿಗೆರೆಯ ಓಟಗಾರ್ತಿ ಮುಡಿಗೇರಿದ ಚಿನ್ನ – 73 ಪದಕ ಗೆದ್ದ ಕ್ರೀಡಾಪಟುಗಳ ಸಾಧನೆಗೆ ಪ್ರಧಾನಿ ಶ್ಲಾಘನೆ

ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ 4ನೇ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತದ ಪದಕಗಳ ಬೇಟೆ ಮುಂದುವರಿದಿದೆ. ಕ್ರೀಡಾಕೂಟದ 4ನೇ ದಿನದಂದು ಭಾರತದ ಪ್ಯಾರಾ ಅಥ್ಲೀಟ್‌ಗಳು 16ನೇ ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಈ ಕ್ರೀಡಾಕೂಟದ ಇತಿಹಾಸದಲ್ಲಿ ಅತಿ ಹೆಚ್ಚು ಚಿನ್ನದ ಪದಕ ಗೆದ್ದ ಹೊಸ ದಾಖಲೆ ನಿರ್ಮಿಸಿದ್ದಾರೆ.

ಇದನ್ನೂ ಓದಿ: ಟೀಮ್ ಇಂಡಿಯಾ ಆಟಗಾರರ ಭಾರತ ಪರ್ಯಟನೆ – ಸ್ಟೇಡಿಯಂಗಳು ಫುಲ್ ಹೌಸ್ ಆಗಲು ಕ್ರಿಕೆಟರ್ಸ್ ಟೂರ್..!

ಏಷ್ಯನ್ ಪ್ಯಾರಾ ಗೇಮ್ಸ್‌ ನ 4 ನೇ ದಿನದಂದು ಮಹಿಳೆಯರ ಸಿಂಗಲ್ಸ್ SH6 ಬ್ಯಾಡ್ಮಿಂಟನ್ ಈವೆಂಟ್ನಲ್ಲಿ ನಿತ್ಯಾ ಶ್ರೀ ಕಂಚಿನ ಪದಕ ಗೆಲ್ಲುವ ಮೂಲಕ ಭಾರತಕ್ಕೆ 73 ನೇ ಪದಕವನ್ನು ತಂದುಕೊಟ್ಟರು. ಈ ಮೂಲಕ ಭಾರತ ಏಷ್ಯನ್ ಪ್ಯಾರಾ ಗೇಮ್ಸ್ ಇತಿಹಾಸದಲ್ಲಿ ಅತ್ಯಧಿಕ ಪದಕ ಗೆದ್ದ ತನ್ನ ಹಳೆಯ ದಾಖಲೆಯನ್ನು ಮುರಿದಿದೆ. ಇನ್ನು ಕರ್ನಾಟಕದ ಸ್ಪರ್ಧಿಯೊಬ್ಬರು ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ. ಮೂಡಿಗೆರೆಯ ಗುಡ್ನಳ್ಳಿಯ ನಿವಾಸಿ ಅಂಧ ಓಟಗಾರ್ತಿ ರಕ್ಷಿತಾ ರಾಜು ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಮಹಿಳೆಯರ ವಿಭಾಗದ 1,500 ಮೀ. ಓಟದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಯುವತಿಯ ಸಾಧನೆಗೆ ಗ್ರಾಮದ ಜನ ಸಿಹಿ ಹಂಚಿ ಸಂಭ್ರಮಿಸಿದ್ದಾರೆ. 5 ನಿಮಿಷ 21 ಸೆಕೆಂಡಿನಲ್ಲಿ 1,500 ಮೀಟರ್ ಕ್ರಮಿಸಿ ಅವರು ಚಿನ್ನ ಗೆದ್ದಿದ್ದಾರೆ. ಕೋಚ್ ರಾಹುಲ್ ಬಾಲಕೃಷ್ಣ ಅವರ ಮಾರ್ಗದರ್ಶನದಲ್ಲಿ ಅವರು ಈ ಸಾಧನೆ ಮಾಡಿದ್ದಾರೆ.

ಇನ್ನು ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಇತಿಹಾಸ ನಿರ್ಮಿಸಿರುವ ಭಾರತದ ಕ್ರೀಡಾಪಟುಗಳ ಸಾಧನೆಯನ್ನು ಪ್ರಧಾನಿ ಮೋದಿ ಹಾಡಿಹೊಗಳಿದ್ದಾರೆ. ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತ ಒಟ್ಟು 73ನೇ ಪದಕವನ್ನು ತನ್ನದಾಗಿಸಿಕೊಳ್ಳುವ ತನ್ನ ಹಳೆಯ ದಾಖಲೆಯನ್ನು ಮುರಿದಿದೆ.

Sulekha