ಕೊಹ್ಲಿ, ಗಿಲ್ ,ಸೂರ್ಯ ಬೌಲಿಂಗ್ ಪ್ರ್ಯಾಕ್ಟೀಸ್ – ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಸ್ಟಾರ್ ಬ್ಯಾಟ್ಸ್‌ಮನ್ ಗಳಿಂದ ಬೌಲಿಂಗ್ ಅಭ್ಯಾಸ
ಏಕದಿನ ವಿಶ್ವಕಪ್ 2023 ರ ಮೊದಲ ಐದು ಪಂದ್ಯಗಳನ್ನು ಗೆದ್ದಿರುವ ಟೀಮ್ ಇಂಡಿಯಾ ತನ್ನ ಆರನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಅನ್ನು ಎದುರಿಸಲಿದೆ. ಅಕ್ಟೋಬರ್ 29, ಭಾನುವಾರದಂದು ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಈ ಹೈವೋಲ್ಟೇಜ್ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಅಭ್ಯಾಸವನ್ನು ಪ್ರಾರಂಭಿಸಿದ್ದಾರೆ. ಅದರಲ್ಲೂ ಸ್ಟಾರ್ ಬ್ಯಾಟ್ಸ್‌ಮನ್ ಗಳಿಬ್ಬರು ಬೌಲಿಂಗ್ ಪ್ರಾಕ್ಟೀಸ್ ಮಾಡುತ್ತಿರುವುದು ಗಮನ ಸೆಳೆದಿದೆ.
ಇದನ್ನೂ ಓದಿ: ಐಪಿಎಲ್ ಆಟಗಾರರ ಹರಾಜಿಗೆ ಡೇಟ್ ಫಿಕ್ಸ್ – 2024 ರ ಹರಾಜಿನಲ್ಲಿ ಸ್ಟಾರ್ ಆಟಗಾರರ ದಂಡೇ ಕಾಣಿಸಿಕೊಳ್ಳುವ ಸಾಧ್ಯತೆ
ಟೀಮ್ ಇಂಡಿಯಾ ಬೌಲರ್ ಹಾರ್ದಿಕ್ ಪಾಂಡ್ಯಾ, ಬಾಂಗ್ಲಾದೇಶ ವಿರುದ್ಧ ಬೌಲಿಂಗ್ ಮಾಡುವಾಗ ಗಾಯಗೊಂಡಿದ್ದರು. ಬೌಲಿಂಗ್ ಮಾಡುವಾಗ, ಸ್ಟ್ರೈಟ್ ಡ್ರೈವ್ ಅನ್ನು ನಿಲ್ಲಿಸಲು ಪ್ರಯತ್ನಿಸುವಾಗ ಎಡಗಾಲಿನ ನೋವಿಗೆ ತುತ್ತಾದರು. ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಭಾರತೀಯ ತಂಡದ ಮ್ಯಾನೇಜ್ಮೆಂಟ್ ಕೊಹ್ಲಿ, ಗಿಲ್ ಅಥವಾ ಸೂರ್ಯ ಅವರನ್ನು ಯನ್ನು ಅರೆಕಾಲಿಕ ಬೌಲಿಂಗ್ ಆಯ್ಕೆಗಾಗಿ ಸಿದ್ಧಪಡಿಸುವಂತೆ ಕಾಣುತ್ತಿದೆ. ಹೀಗಾಗಿ ಪ್ರ್ಯಾಕ್ಟೀಸ್ ಸೆಷನ್‌ನಲ್ಲಿ ವಿರಾಟ್ ಕೊಹ್ಲಿ, ಗಿಲ್ ಹಾಗೂ ಸೂರ್ಯಕುಮಾರ್ ಬೌಲಿಂಗ್ ಅಭ್ಯಾಸ ನಡೆಸಿದರು. ವಿಶೇಷ ಎಂದರೆ, ಪ್ರ್ಯಾಕ್ಟೀಸ್ ಸೆಷನ್‌ನಲ್ಲಿ ವಿರಾಟ್ ಕೊಹ್ಲಿ ಅವರು ನಾಯಕ ರೋಹಿತ್ ಶರ್ಮಾಗೆ ಬೌಲಿಂಗ್ ಮಾಡಿದರು. ಅಲ್ಲದೆ ಬ್ಯಾಟರ್ ಶುಭಮನ್ ಗಿಲ್ ಹಾಗೂ ಸೂರ್ಯಕುಮಾರ್ ಯಾದವ್ ಕೂಡ ಬೌಲಿಂಗ್ ಅಭ್ಯಾಸ ನಡೆಸಿದರು.
ಮತ್ತೊಂದೆಡೆ ಇಂಗ್ಲೆಂಡ್ ಕ್ರಿಕೆಟ್ ತಂಡ ಬೆಂಗಳೂರಿನಿಂದ ಲಕ್ನೋಗೆ ಹೊರಟಿದೆ. ಸಂಪೂರ್ಣವಾಗಿ ಫಾರ್ಮ್ ಕಳೆದುಕೊಂಡಿರುವ ಹಾಲಿ ಚಾಂಪಿಯನ್ ರು ಭಾನುವಾರ ಉತ್ತರ ಪ್ರದೇಶದ ರಾಜಧಾನಿಯಲ್ಲಿ ಆತಿಥೇಯ ಭಾರತವನ್ನು ಎದುರಿಸಲಿದೆ. ಜೋಸ್ ಬಟ್ಲರ್ ನಾಯಕತ್ವದ ಇಂಗ್ಲೆಂಡ್ ತಂಡವು ನ್ಯೂಝಿಲೆಂಡ್, ಅಫ್ಘಾನಿಸ್ತಾನ, ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ ವಿರುದ್ಧ ಸೋಲು ಅನುಭವಿಸುವ ಮೂಲಕ 2023 ರ ಕ್ರಿಕೆಟ್ ವಿಶ್ವಕಪ್‌ನಿಂದ ಬಹುತೇಕ ಹೊರಬಿದ್ದಾಗಿದೆ.