ವರ್ಷದ ಬಳಿಕ ದರ್ಶನ ಭಾಗ್ಯ ಕರುಣಿಸಿದ ಹಾಸನಾಂಬೆ – ಶಾಸ್ತ್ರೋಕ್ತವಾಗಿ ದೇಗುಲದ ಬಾಗಿಲು ಓಪನ್
ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಹಾಸನಾಂಬೆ ದೇವಿ ಹಲವು ಪವಾಡ ಸದೃಶ ಸಂಗತಿಗಳನ್ನು ಮೈಗೂಡಿಸಿಕೊಂಡಿದ್ದಾಳೆ. ಶಕ್ತಿಮಾತೆಯ ಸ್ವರೂಪವಾಗಿಯುವ ಹಾಸನಾಂಬೆ ದೇವಿಯ ಗರ್ಭಗುಡಿ ಬಾಗಿಲು ವರ್ಷಗಳ ಬಳಿಕ ಇಂದು ಓಪನ್ ಆಗಿದೆ.
ವರ್ಷಕ್ಕೆ ಒಂದು ಬಾರಿಯಷ್ಟೇ ದರ್ಶನ ಭಾಗ್ಯ ಕರುಣಿಸಲಿರುವ ಹಾಸನದ ಅಧಿದೇವತೆ ಹಾಸನಾಂಬೆ ದೇವಿಯ ಗರ್ಭಗುಡಿ ಬಾಗಿಲು ಇಂದು ಮಧ್ಯಾಹ್ನ ಓಪನ್ ಆಗಿದೆ. ಆಶ್ವೀಜ ಮಾಸದ ಮೊದಲ ಗುರುವಾರ ಮಧ್ಯಾಹ್ನ 12.24ಕ್ಕೆ ಗೊನೆಯುಳ್ಳ ಬಾಳೆ ಕಂಬ ಕಡಿದ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಾಗಿದೆ. ಈ ಬಾರಿಯ ಜಾತ್ರಾ ಮಹೋತ್ಸವ ಇಂದಿನಿಂದ ನ.15 ರವರೆಗೆ ನಡೆಯಲಿದೆ.
ದೇಗುಲ ಇಂದು ಓಪನ್ ಆಗಿದ್ದರೂ ಕೂಡ ದೇವಿ ದರ್ಶನಕ್ಕೆ ಭಕ್ತರಿಗೆ ಇಂದು ಅವಕಾಶವಿರುವುದಿಲ್ಲ. ಭಕ್ತರಿಗೆ ನಾಳೆಯಿಂದ (ಶುಕ್ರವಾರ) ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. ಹದಿನೈದು ದಿನಗಳಲ್ಲಿ ಹದಿಮೂರು ದಿನಗಳು ಮಾತ್ರ 24*7 ಭಕ್ತರಿಗೆ ತಾಯಿ ಹಾಸನಾಂಬೆ ದರ್ಶನ ಕರುಣಿಸಲಿದ್ದಾಳೆ. ಅಂತಿಮ ದಿನ ಸಾರ್ವಜನಿಕ ದರ್ಶನ ಇರುವುದಿಲ್ಲ.
ಇದನ್ನೂ ಓದಿ: ಹಾಸನಾಂಬೆ ದೇಗುಲದ ಬಾಗಿಲು ತೆರೆಯಲು ಕ್ಷಣಗಣನೆ – ನ. 3 ರಿಂದ 14 ರವರೆಗೆ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ
ಈ ಬಾರಿ ಜಾತ್ರಾ ಮಹೋತ್ಸವ ವಿಶೇಷತೆಯಿಂದ ಕೂಡಿದ್ದು ಹೆಲಿಟೂರಿಸಂ, ಪ್ಯಾರಾ ಸೈಲಿಂಗ್, ಪ್ಯಾರಾ ಮೋಟಾರ್, ಚಾಪರ್ನಲ್ಲಿ ಹಾರಾಟ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿದೆ.
ಪ್ರತಿವರ್ಷ ಗರ್ಭಗುಡಿ ಬಾಗಿಲು ಹಾಕುವ ಸಂದರ್ಭದಲ್ಲಿ ಹಚ್ಚಿದ ಹಣತೆ, ಇಟ್ಟ ನೈವೇದ್ಯ ಹಾಗೂ ಮುಡಿಸಿದ ಹೂ ಬಾಡುವುದಿಲ್ಲ ಎಂಬ ನಂಬಿಕೆ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಜೊತೆಗೆ ಅಧಿದೇವತೆ ಬೇಡಿಕೊಂಡು ಇಷ್ಟಾರ್ಥಗಳನ್ನು ಈಡೇರಿಸುತ್ತಾರೆ ಎಂಬ ಅಚಲ ವಿಶ್ವಾಸ ಇರುವುದರಿಂದ ಜಿಲ್ಲೆ, ರಾಜ್ಯ ಮಾತ್ರವಲ್ಲದೆ ಅನೇಕ ಕಡೆಗಳಿಂದ ಲಕ್ಷಾಂತರ ಭಕ್ತರಿದ್ದಾರೆ.
ಈ ಬಾರಿ ಒಟ್ಟು ಹದಿನೈದು ದಿನಗಳಲ್ಲಿ 13 ದಿನ ಮಾತ್ರ ಸಾರ್ವಜನಿಕ ದರ್ಶನ ಹಾಗೂ ಶಕ್ತಿ ಯೋಜನೆ ಜಾರಿ ಇರುವುದರಿಂದ ಭಕ್ತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದ್ದು, ಮಳೆ ಬಂದರೆ ಭಕ್ತರು ನೆನೆಯದಂತೆ ಜರ್ಮನ್ ಟೆಂಟ್, ಫ್ಯಾನ್, ಎಸಿ ಸೇರಿ ಬರುವ ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಈ ಬಾರಿ ದೇವಾಲಯಕ್ಕೆ ಬರುವ ಎಲ್ಲಾ ಭಕ್ತರಿಗೆ ಮೂರು ಹೊತ್ತು ಕೂಡ ಪ್ರಸಾದ ವಿತರಣೆ ವ್ಯವಸ್ಥೆ ಕಲ್ಪಿಸಿದೆ.