ಕೆಲಸಕ್ಕಾಗಿ ಕಾಲು ಹಿಡಿದ ಪಾಪಿಯಿಂದಲೇ ಕೊಲೆ – ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಆರೋಪಿ ಬಂಧನ
ಮಹದೇಶ್ವರ ಬೆಟ್ಟದಲ್ಲಿ ಸೆರೆಸಿಕ್ಕ ಕೊಲೆಪಾತಕ – ಅಧಿಕಾರಿಯನ್ನು ಕ್ರೂರವಾಗಿ ಕೊಂದ ಪಾಪಿ

ಕೆಲಸಕ್ಕಾಗಿ ಕಾಲು ಹಿಡಿದ ಪಾಪಿಯಿಂದಲೇ ಕೊಲೆ –  ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಆರೋಪಿ ಬಂಧನಮಹದೇಶ್ವರ ಬೆಟ್ಟದಲ್ಲಿ ಸೆರೆಸಿಕ್ಕ ಕೊಲೆಪಾತಕ – ಅಧಿಕಾರಿಯನ್ನು ಕ್ರೂರವಾಗಿ ಕೊಂದ ಪಾಪಿ

ಬೆಂಗಳೂರಿನಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದಲ್ಲಿ ಮಹತ್ವದ ತಿರುವು ಸಿಕ್ಕಿದೆ. ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಳೇ ಡ್ರೈವರ್ ಕಿರಣ್ ಎಂಬಾತ ಪ್ರತಿಮಾ ಅವರನ್ನು ಕೊಲೆ ಮಾಡಿರುವುದನ್ನು ವಿಚಾರಣೆಯ ವೇಳೆ ತಪ್ಪೊಪ್ಪಿಕೊಂಡಿದ್ದಾನೆ.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಪತ್ತೆಯಾಗಿರುವುದು ಬಾಂಬ್‌ ಅಲ್ಲ! – ಆ ನಿಗೂಢ ವಸ್ತು ಯಾವುದು ಗೊತ್ತಾ?

ಬೆಂಗಳೂರಿನಲ್ಲಿ ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಪ್ರಕರಣಕ್ಕೆ(officer Pratima Murder Case) ಸಂಬಂಧಿಸಿದಂತೆ ಆರೋಪಿ ಸಿಕ್ಕಿಬಿದ್ದಿದ್ದಾನೆ. ಪ್ರತಿಮಾ ಅವರ ಮಾಜಿ ಕಾರು ಚಾಲಕ ಕಿರಣ್ ಎಂಬಾತನನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಕೆಲ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. 4 ವರ್ಷದಿಂದ ಕಾರು ಚಾಲಕನಾಗಿದ್ದ ಕಿರಣ್, ಬೇಜವಾಬ್ದಾರಿಯಿಂದ ಕಾರು ಓಡಿಸುತ್ತಿದ್ದನು. ಗುತ್ತಿಗೆ ಆಧಾರದಲ್ಲಿ ಚಾಲಕ ವೃತ್ತಿ ಮಾಡುತ್ತಿದ್ದ ಕಿರಣ್ ಕಳೆದ ತಿಂಗಳು ಹೊಸ ಸರ್ಕಾರಿ ಕಾರು ಅಪಘಾತ ಮಾಡಿದ್ದನು. ಅಪಘಾತದ ನಂತರ ಕಚೇರಿಯಲ್ಲೇ ಕಾರು ಬಿಟ್ಟು ತೆರಳಿದ್ದನು. ಕಿರಣ್ ನಡವಳಿಕೆಯಿಂದ ಕೋಪಗೊಂಡಿದ್ದ ಪ್ರತಿಮಾ, 10 ದಿನಗಳ ಹಿಂದೆ ಕೆಲಸದಿಂದ ತೆಗೆದು ಹಾಕಿದ್ದರು. ಈ ವೇಳೆ ಪ್ರತಿಮಾ ಕಾಲಿಗೆ ಬಿದ್ದು ಕೆಲಸಕ್ಕೆ ಸೇರಿಸಿಕೊಳ್ಳುವಂತೆ ಬೇಡಿಕೊಂಡಿದ್ದನು. ಆದರೆ ಪ್ರತಿಮಾ ಅವರು ಕಿರಣ್‌ನನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲು ನಿರಾಕರಿಸಿದ್ದರು. ಇದೇ ಕಾರಣಕ್ಕೆ ಪ್ರತಿಮಾ ಮೇಲೆ ಕಿರಣ್ ದ್ವೇಷಕಾರುತ್ತಿದ್ದನು.

ಪ್ರತಿಮಾ ರೇಡ್ ಹೋಗುವ ವಿಚಾರ ಲೀಕ್ ಮಾಡುತ್ತಿದ್ದ ಬಗ್ಗೆ ಮಾಹಿತಿ ಇತ್ತು. ಈ ಕಾರಣಕ್ಕೆ ಪ್ರತಿಮಾ ವಾರ್ನ್ ಕೂಡ ಮಾಡಿದ್ದರು. ಈ ವೇಳೆ ಬೈದಾಗ ತಪ್ಪಾಗಿದೆ ಕೆಲಸದಿಂದ ತೆಗೆಯಬೇಡಿ ಎಂದು ಕೇಳಿಕೊಂಡಿದ್ದನು. ಕೊಲೆ ದಿನವೂ ಅಂದರೆ ಶನಿವಾರ ನವೆೆಂಬರ್ 6ರಂದು ಕಿರಣ್ ಪ್ರತಿಮಾ ಮನೆಗೆ ಬಂದಿದ್ದಾನೆ. ಪ್ರತಿಮಾ ಅವರ ಕಾಲಿಗೆ ಬಿದ್ದು ಕೆಲಸಕ್ಕೆ ಸೇರಿಸಿಕೊಳ್ಳುವಂತೆ ದುಂಬಾಲು ಬಿದ್ದಿದ್ದನು. ಆದರೆ ಪ್ರತಿಮಾ ಆತನ ನಾಟಕಕ್ಕೆ ತಲೆಕೆಡಿಸಿಕೊಂಡಿರಲಿಲ್ಲ. ಆತನ ಮಾತನ್ನು ಒಪ್ಪಿಕೊಂಡಿರಲಿಲ್ಲ. ಇದರಿಂದ ಮತ್ತಷ್ಟು ಕೋಪಗೊಂಡ ಕಿರಣ್, ವೈರ್ ಮಾದರಿಯ ವಸ್ತುವಿನಿಂದ ಪ್ರತಿಮಾ ಕುತ್ತಿಗೆಗೆ ಬಿಗಿದಿದ್ದಾನೆ. ಬಳಿಕ ಪ್ರತಿಮಾ ನೆಲಕ್ಕೆ ಬಿದ್ದ ಮೇಲೆ ಚಾಕುವಿನಿಂದ ಕುತ್ತಿಗೆ ಸೀಳಿ ಕೊಲೆ ಮಾಡಿದ್ದಾನೆ. ಈ ಕೃತ್ಯ ಎಸಗಿದ ನಂತರ ಚಾಮರಾಜನಗರದತ್ತ ಪರಾರಿಯಾಗಿದ್ದಾನೆ. ಪೊಲೀಸರು ಕ್ಷಿಪ್ರ ಕಾರ್ಯಚರಣೆ ನಡೆಸಿ ಕಿರಣ್ ಫೋನ್ ಸಿಗ್ನಲ್ ಆಧರಿಸಿ ಕೊನೆಗೆ ಮಹದೇಶ್ವರಬೆಟ್ಟದಲ್ಲಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

Sulekha