ಕಲ್ಲೇಗ ಟೈಗಸ್೯ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ – 58 ಬಾರಿ ಮಚ್ಚಿನಿಂದ ಕೊಚ್ಚಿಕೊಂದ ಪಾಪಿಗಳು!
ಪುತ್ತೂರಿನ ಪ್ರಸಿದ್ಧ ನವರಾತ್ರಿ ಹುಲಿವೇಷ ತಂಡವಾದ ಕಲ್ಲೇಗ ಟೈಗಸ್೯ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಎಂಬ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸೋಮವಾರ ಮಧ್ಯರಾತ್ರಿ ಪುತ್ತೂರು ಹೊರ ವಲಯದ ನೆಹರೂ ನಗರದಲ್ಲಿ ತಲವಾರಿನಿಂದ ಕಡಿದು ಬರ್ಬರವಾಗಿ ಕೊಲೆ ಮಾಡಲಾಗಿದೆ. ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದು, ಸ್ಪೋಟಕ ಮಾಹಿತಿಗಳು ಒಂದೊಂದಾಗಿಯೇ ಹೊರಬರುತ್ತಿದೆ.
ಅಕ್ಷಯ್ ಮೃತದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದರು. ಈ ವೇಳೆ ಅಕ್ಷಯ್ ದೇಹದಲ್ಲಿರುವ ಮಚ್ಚಿನ ಏಟುಗಳನ್ನು ನೋಡಿ ವೈದ್ಯರೇ ಶಾಕ್ ಆಗಿದ್ದಾರೆ. ಯಾಕಂದ್ರರೆ ಆತನನ್ನು ಆರೋಪಿಗಳು ಮನಬಂದಂತೆ ಕೊಚ್ಚಿಕೊಂದಿದ್ದಾರೆ. ಬರೋಬ್ಬರಿ 58 ಬಾರಿ ಮಚ್ಚಿನಿಂದ ಹೊಡೆದಿದ್ದಾರೆ ಎಂಬ ಆತಂಕಕಾರಿ ವಿಚಾರ ಮರೋತ್ತರ ಪರೀಕ್ಷೆಯಲ್ಲಿ ಬಯಲಾಗಿದೆ.
ಇದನ್ನೂ ಓದಿ: ಪುತ್ತೂರಿನ ಪ್ರಖ್ಯಾತ ಹುಲಿವೇಷಧಾರಿ ಅಕ್ಷಯ್ ಕಲ್ಲೇಗ ಭೀಕರ ಹತ್ಯೆ – ಕೊಲೆ ಮಾಡಿ ಪೊಲೀಸರಿಗೆ ಶರಣಾದ ಪಾತಕಿಗಳು
ಆರೋಪಿಗಳು ಗಾಂಜಾ ಮತ್ತಿನಲ್ಲಿ ಅಕ್ಷಯ್ ಮೇಲೆ ದಾಳಿ ನಡೆಸಿ, ಮಚ್ಚಿನಿಂದ ಕೊಚ್ಚಿರಬಹುದು ಎಂಬ ಶಂಕೆ ವ್ಯಕ್ತವಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಚೇತನ್, ಮನೀಶ್, ಮಂಜ, ಕೇಶವ ಪಡೀಲು ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ಕೇಶವ ಕಾಂಗ್ರೆಸ್ ಮುಖಂಡನಾಗಿದ್ದಾನೆ ಎಂದು ವರದಿಯಾಗಿದೆ.
ಏನಿದು ಪ್ರಕರಣ?
ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನೆಹರು ನಗರ ಜಂಕ್ಷನ್ನಲ್ಲಿ ಪುತ್ತೂರಿನ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ (26) ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ದ್ವಿಚಕ್ರ ವಾಹನ ಮತ್ತು ಬಸ್ ನಡುವೆ ನಡೆದ ಅಪಘಾತ ವಿಚಾರದಲ್ಲಿ ಎರಡು ಸಾವಿರ ನೀಡುವ ಬಗ್ಗೆ ಮಾತುಕತೆ ನಡೆದಿತ್ತು.
ಈ ವೇಳೆ ಬಸ್ ಚಾಲಕ ಚೇತು ಎಂಬಾತನ ಬೆಂಬಲಿಗ ಹಾಗೂ ಅಕ್ಷಯ್ ನಡುವೆ ತೀವ್ರ ವಾಗ್ವಾದ ನಡೆದಿತ್ತು. ಹೀಗೆ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿತ್ತು. ಕೊನೆಗೆ ಮೂರಕ್ಕೂ ಅಧಿಕ ಮಂದಿಯ ತಂಡವು ಮಾಣಿ ಮೈಸೂರು ಹೆದ್ದಾರಿಯ ನೆಹರು ನಗರ ಜಂಕ್ಷನ್ನಲ್ಲಿ ಅಕ್ಷಯ್ನನ್ನ ಅಟ್ಟಾಡಿಸಿ ತಲವಾರಿನಿಂದ ಕೊಚ್ಚಿ ಕೊಲೆ ಮಾಡಿದ್ದರು.