ಭ್ರಷ್ಟಾಚಾರ ಆರೋಪ – ಪೋರ್ಚುಗಲ್‌ ಪ್ರಧಾನಿ ಆಂಟೋನಿಯೊ ಕೋಸ್ಟಾ ರಾಜೀನಾಮೆ

ಭ್ರಷ್ಟಾಚಾರ ಆರೋಪ – ಪೋರ್ಚುಗಲ್‌ ಪ್ರಧಾನಿ ಆಂಟೋನಿಯೊ ಕೋಸ್ಟಾ ರಾಜೀನಾಮೆ

ಪೋರ್ಚುಗಲ್‌ ಪ್ರಧಾನಿ ಆಂಟೋನಿಯೊ ಕೋಸ್ಟಾ ತಮ್ಮ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ. ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪ್ರಧಾನಿ ಆಂಟೋನಿಯೊ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.

ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ತನಿಖೆಯ ಭಾಗವಾಗಿ ಪ್ರಧಾನಿ ಕೋಸ್ಟಾ ಅವರ ಅಧಿಕೃತ ನಿವಾಸದ ಮೇಳೆ ದಾಳಿ ಮಾಡಲಾಗಿತ್ತು. ದಾಳಿ ವೇಳೆ ಪ್ರಧಾನಿ ಕೋಸ್ಟಾ ಅವರ ಉನ್ನತ ಸಹಾಯಕರನ್ನು ಅಧಿಕಾರಿಗಳು ಬಂಧಿಸಿದ್ದರು. ಈ ಬೆನ್ನಲ್ಲೇ ಪ್ರಧಾನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ -ಗುಂಡಿನ ದಾಳಿಯಲ್ಲಿ 10 ಮಂದಿಗೆ ಗಾಯ

ರಾಷ್ಟ್ರೀಯ ದೂರದರ್ಶನದ ಭಾಷಣ ವೇಳೆ ತಾವು ತಮ್ಮ ರಾಜೀನಾಮೆ ಪತ್ರವನ್ನು ಅಧ್ಯಕ್ಷರಿಗೆ ಸಲ್ಲಿಸಿದ್ದೇನೆ. ನಾನು ನ್ಯಾಯಾಂಗ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಂಬುತ್ತೇನೆ. ನನ್ನ ಆತ್ಮಸಾಕ್ಷಿಯು ಯಾವುದೇ ಕಾನೂನುಬಾಹಿರ ಅಥವಾ ಖಂಡನೆಗೆ ಒಳಗಾದ ಕೃತ್ಯದಿಂದ ಸ್ಪಷ್ಟವಾಗಿದೆ. ಪೋರ್ಚುಗೀಸ್ ಜನರ ಕಣ್ಣಲ್ಲಿ ಕಣ್ಣಿಟ್ಟು ಹೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಇನ್ನು ಪೋರ್ಚುಗೀಸ್ ಅಧ್ಯಕ್ಷ ಮಾರ್ಸೆಲೊ ರೆಬೆಲೊ ಡಿ ಸೌಸಾ, ಕೋಸ್ಟಾ ಅವರ ರಾಜೀನಾಮೆಯನ್ನು ಅಂಗೀಕರಿಸುವ ನಿರೀಕ್ಷೆಯಿದೆ. ನ್ಯಾಯಾಧೀಶರು ಕೋಸ್ಟಾ ಅವರ ಸಿಬ್ಬಂದಿ ಮುಖ್ಯಸ್ಥ ವಿಟರ್ ಎಸ್ಕೇರಿಯಾ, ಸೈನ್ಸ್ ಪಟ್ಟಣದ ಮೇಯರ್ ಮತ್ತು ಇತರ ಮೂವರ ವಿರುದ್ಧ ಬಂಧನ ವಾರಂಟ್‌ ಜಾರಿ ಮಾಡಿದ್ದರು.

Shwetha M