ಮಹಿಳೆಗೆ ನಾಯಿ ಕಚ್ಚಿದ ಪ್ರಕರಣ – ಪೊಲೀಸರ ಮುಂದೆ ಹೇಳಿಕೆ ಕೊಟ್ಟ ನಟ ದರ್ಶನ್
ಸಾಕು ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಬುಧವಾರ ಪೊಲೀಸ್ ಠಾಣೆಯಲ್ಲಿ ಹೇಳಿಕೆ ನೀಡಿದರು. ಎರಡು ಬಾರಿ ನೋಟಿಸ್ ನೀಡಿದ ನಂತರ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಗೆ ನಟ ದರ್ಶನ್ ಆಗಮಿಸಿ ಹೇಳಿಕೆ ನೀಡಿದರು. ಅಮಿತಾ ಜಿಂದಾಲ್ ಎಂಬ ಮಹಿಳೆಗೆ ನಟ ದರ್ಶನ್ ಮನೆಯ ನಾಯಿ ಕಚ್ಚಿದ ಬಳಿಕ ಐಪಿಸಿ ಸೆಕ್ಷನ್ 289ರ ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಎ2 ಆಗಿರುವ ದರ್ಶನ್ ಅವರು ವಿಚಾರಣೆಯಲ್ಲಿ ಭಾಗಿ ಆದರು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಆರ್ಆರ್ ನಗರ ಪೊಲೀಸ್ ಠಾಣೆಗೆ ಆಗಮಿಸಿ ವಿಚಾರಣೆಗೆ ಹಾಜರಾದರು. ಕೆಲ ದಿನಗಳ ಹಿಂದೆ ಮಹಿಳೆ ಮೇಲೆ ನಾಯಿ ದಾಳಿ ಮಾಡಿದ ಪ್ರಕರಣದಲ್ಲಿ ದರ್ಶನ್ ವಿರುದ್ಧವೂ ದೂರು ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ದರ್ಶನ್ಗೆ ಪೊಲೀಸರು ನೋಟಿಸ್ ನೀಡಿದ್ದರು. ಪ್ರಕರಣದಲ್ಲಿ ಎ2 ಆಗಿರುವ ಅವರು ಬುಧವಾರ ಪೊಲೀಸ್ ಠಾಣೆಗೆ ಬಂದು ವಿಚಾರಣೆಯಲ್ಲಿ ಭಾಗಿ ಆದರು. ದರ್ಶನ್ ಅವರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡರು. ನಮ್ಮ ಮನೆಯ ಸಾಕು ನಾಯಿ ಘಟನೆ ನಡೆದಾಗ ನಾನು ಗುಜರಾತ್ನಲ್ಲಿ ಸಿನಿಮಾ ಶೂಟಿಂಗ್ನಲ್ಲಿದ್ದೆನು. ಆಗ ಸಿಸಿಟಿವಿ ವರ್ಕ್ ಆಗುತ್ತಿರಲಿಲ್ಲ. ಆದ್ದರಿಂದ ಸಿಸಿಟಿವಿ ಫೂಟೇಜ್ ನಮ್ಮಬಳಿಯಿಲ್ಲ. ಘಟನೆ ನಡೆದ ನಂತರ ಸಿಸಿಟಿವಿ ಅಳವಡಿಕೆ ಮಾಡಲಾಗಿದೆ ಎಂದು ನಟ ದರ್ಶನ್ ಪೊಲೀಸರ ಮುಂದೆ ಹೇಳಿಕೆ ದಾಖಲಿಸಿದ್ದಾರೆ.
ಆಗ ನಾನು ಗುಜರಾತಿನನ್ನು ಸಿನಿಮಾ ಶೂಟಿಂಗ್ನಲ್ಲಿದ್ದೆನು. ನಮ್ಮ ಹುಡುಗರಿಗೆ ಹೇಳಿದ್ದೆನು. ಸರಿಯಾಗಿ ಮೆಂಟೈನ್ ಮಾಡಿ ಅಂತ ಅವರು ಸರಿಯಾಗಿ ಮೆಂಟೈನ್ ಮಾಡಿಲ್ಲ. ಆದರೆ, ಗಾಯಾಳುಗೆ ಚಿಕಿತ್ಸೆ ಕೊಡಿಸಿ ಅಂತ ಅವರಿಗೆ ಹೇಳಿದ್ದೇನೆ ಎಂದು ತನಿಖಾಧಿಕಾರಿ ಪೊಲೀಸ್ ಇನ್ಸ್ಪೆಕ್ಟರ್ ಶಿವಕುಮಾರ್ ಮುಂದೆ ಹೇಳಿಕೆ ದಾಖಲಿಸಿದ್ದಾರೆ. ಪೊಲೀಸರು ಘಟನೆಯ ದಿನದ ಸಿಸಿಟಿವಿ ಪುಟೇಜ್ ಸಹ ಕೇಳಿದ್ದರು. ಆದರೆ, ಘಟನೆಯಾದ ದಿನ ಸಿಸಿಟಿವಿ ವರ್ಕಿಂಗ್ ಇರಲಿಲ್ಲ. ಆರ್. ಆರ್. ನಗರ ನಿವಾಸದಲ್ಲಿ ಹೆಚ್ಚಾಗಿ ನಾನು ಇರೋದಿಲ್ಲ. ಬರ್ತಡೆಯ ಸಂದರ್ಭದಲ್ಲಿ ಮಾತ್ರ ಸಿಸಿಟಿವಿ ಹಾಕಿಸಿರ್ತೀವಿ. ಆದರೆ, ಈಗ ನಾಯಿ ಕಚ್ಚಿದ ಘಟನೆ ನಡೆದ ನಂತರ ಸಿಸಿಟಿವಿ ಅಳವಡಿಸಿದ್ದೇವೆ. ಈ ರೀತಿಯ ಘಟನೆ ಮತ್ತೆ ಮರುಕಳಿಸದಂತೆ ಎಚ್ಚರ ವಹಿಸುತ್ತೇನೆ ಎಂದು ನಟ ದರ್ಶನ್ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ. ಕೇವಲ 15 ನಿಮಿಷದಲ್ಲಿ ಹೇಳಿಕೆಯನ್ನು ದಾಖಲಿಸಿದರು.
ಅಮಿತಾ ಜಿಂದಾಲ್ ಎಂಬುವವರಿಗೆ ನಟ ದರ್ಶನ್ ಅವರ ಮನೆಯ ನಾಯಿ ಕಚ್ಚಿತ್ತು. ಇದಾದ ಬಳಿಕ ಮಹಿಳೆ ಕೊಟ್ಟ ದೂರಿನ ಅನ್ವಯ ಐಪಿಸಿ ಸೆಕ್ಷನ್ 289ರ ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಆ ಪ್ರಕರಣದ ವಿಚಾರಣೆ ಚುರುಕುಗೊಂಡಿದೆ. ತನಿಖಾಧಿಕಾರಿ ಇನ್ಸ್ಪೆಕ್ಟರ್ ಶಿವಕುಮಾರ್ ಅವರ ಮುಂದೆ ದರ್ಶನ್ ವಿಚಾರಣೆಗೆ ಹಾಜರಾಗಿದ್ದಾರೆ. ಕೇವಲ 15 ನಿಮಿಷ ಮಾತ್ರ ಅವರು ಪೊಲೀಸ್ ಠಾಣೆಯಲ್ಲಿ ಇದ್ದರು. ಅಷ್ಟರಲ್ಲೇ ಹೇಳಿಕೆ ನೀಡಿ ಅವರು ವಾಪಸ್ ತೆರಳಿದ್ದಾರೆ. ಮಹಿಳೆ ದೂರು ನೀಡಿದ ಬಳಿಕ ಪೊಲೀಸರು ಇತ್ತೀಚೆಗೆ ಸ್ಥಳಕ್ಕೆ ಬಂದು ಮಹಜರು ಮಾಡಿದ್ದರು.
ದರ್ಶನ್ ಅವರಿಗೆ ಪೊಲೀಸರು ನೋಟಿಸ್ ನೀಡಿದ್ದರು. ಕಡೆಗೂ ನಟ ದರ್ಶನ್ ವಿಚಾರಣೆಗೆ ಹಾಜರಾದರು. ಆರ್ಆರ್ ನಗರ ಪೊಲೀಸ್ ಠಾಣೆಗೆ ಬಂದ ದರ್ಶನ್ ಅವರನ್ನು ನೋಡಲು ಅಪಾರ ಸಂಖ್ಯೆ ಅಭಿಮಾನಿಗಳು ಜಮಾಯಿಸಿದ್ದರು. ಸ್ವತಃ ದರ್ಶನ್ ಅವರೇ ಕಾರು ಚಲಾಯಿಸಿಕೊಂಡು ಬಂದಿದ್ದರು. ಅವರು ಕಾರು ಇಳಿಯುತ್ತಿದ್ದಂತಯೇ ಅಭಿಮಾನಿಗಳು ಜೈಕಾರ ಕೂಗಿದರು. ಪೊಲೀಸ್ ಠಾಣೆಯಿಂದ ವಾಪಸ್ ಹೊರಡುವಾಗ ದರ್ಶನ್ ಅವರು ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಇತ್ತೀಚೆಗೆ ಹುಲಿ ಉಗುರು ಹೊಂದಿದ ಆರೋಪದಲ್ಲೂ ದರ್ಶನ್ ಅವರಿಗೆ ಸಂಕಷ್ಟ ಎದುರಾಗಿತ್ತು. ಹುಲಿ ಉಗುರಿನ ಲಾಕೆಟ್ ಧರಿಸಿ ಕಾಣಿಸಿಕೊಂಡಿದ್ದ ಅವರ ಹಳೆಯ ಫೋಟೋ ವೈರಲ್ ಆಗಿತ್ತು. ಆ ಬಳಿಕ ಅವರ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ಅರಣ್ಯಾಧಿಕಾರಿಗಳು ದರ್ಶನ್ ನಿವಾಸಕ್ಕೆ ತೆರಳಿ ತಪಾಸಣೆ ನಡೆಸಿದ್ದರು.