ಜಾಮೀನು ಮೂಲಕ ಹೊರ ಬಂದ ನಾಲ್ಕೇ ದಿನಕ್ಕೆ ಮುರುಘಾಶ್ರೀ ಮತ್ತೆ ಅರೆಸ್ಟ್!
ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೂಲಕ ಜೈಲಿನಿಂದ ಬಿಡುಗಡೆಯಾಗಿದ್ದ ನಾಲ್ಕೇ ದಿನಕ್ಕೆ ಮುರುಘಾಶ್ರೀ ಮತ್ತೆ ಅರೆಸ್ಟ್ ಆಗಿದ್ದಾರೆ.
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಲಾಗಿತ್ತು. ಮುರುಘಾ ಶ್ರೀ ವಿರುದ್ಧ ಎರಡು ಪೋಕ್ಸೋ ಪ್ರಕರಣ ದಾಖಲಾಗಿತ್ತು. ಕಳೆದ 13 ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು. ನ.16 ರಂದು ಮೊದಲನೇ ಪೋಕ್ಸೋ ಪ್ರಕರಣದಲ್ಲಿ ಜಾಮೀನು ಮೂಲಕ ಹೊರ ಬಂದಿದ್ದರು. ಜಾಮೀನು ಮೂಲಕ ಹೊರ ಬಂದ ನಾಲ್ಕೇ ದಿನಕ್ಕೆ ಮತ್ತೆ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರ ಬಂಧನವಾಗಿದೆ.
ಇದನ್ನೂ ಓದಿ; ಮುರುಘಾಶ್ರೀಗೆ ಮತ್ತೆ ಬಂಧನದ ಭೀತಿ! – ಎರಡನೇ ಪ್ರಕರಣದಲ್ಲಿ ವಾರೆಂಟ್ ಜಾರಿ ಮಾಡಿದ ಕೋರ್ಟ್!
ಎರಡನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ನ್ಯಾಯಾಲಯ ಜಾರಿ ಮಾಡಿದ ಅರೆಸ್ಟ್ ವಾರೆಂಟ್ ಮೇರೆಗೆ ಮುರುಘಾಶ್ರಿಯನ್ನು ಬಂಧಿಸಿದ್ದಾರೆ. ನವೆಂಬರ್ 20 ಕೋರ್ಟ್ ಅರೆಸ್ಟ್ ವಾರೆಂಟ್ ಆದೇಶದ ಪ್ರತಿಪಡೆದುಕೊಂಡ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ನೇರವಾಗಿ ದಾವಣಗೆರೆಯ ವಿರಕ್ತ ಮಠಕ್ಕೆ ತೆರಳಿ ಮುರುಘಾಶ್ರೀಗಳನ್ನು ಬಂಧಿಸಿದ್ದಾರೆ.
2022 ಅಕ್ಟೋಬರ್ 13ರಂದು ಮುರುಘಾಶ್ರೀ ವಿರುದ್ಧ ಮೈಸೂರಿನ ನಜರ್ಬಾದ್ ಪೊಲೀಸ್ ಠಾಣೆಯಲ್ಲಿ ಎರಡನೇ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಬಳಿಕ ಈ ಪ್ರಕರವನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿತ್ತು. ಇದೀಗ 2ನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮುರುಘಾ ಶರಣರ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರಂಟ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ 1ನೇ ಪೋಕ್ಸೋ ಪ್ರಕರಣದಲ್ಲಿ ಒಂದು ವರ್ಷಕ್ಕಿಂತ ಹೆಚ್ಚು ಕಾಲ ಜೈಲಿನಲ್ಲಿದ್ದು, ಆಚೆ ಬಂದಿರುವ ಚಿತ್ರದುರ್ಗದ ಮುರುಘಾಶ್ರೀ ಬಂಧನವಾಗಿದೆ.