ಗಾಂಧಿ ಕುಟುಂಬಕ್ಕೆ ಇಡಿ ಶಾಕ್.. – 752 ಕೋಟಿ ಮೌಲ್ಯದ ಆಸ್ತಿ ಜಪ್ತಿ!
ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ, ಜಾರಿ ನಿರ್ದೇಶನಾಲಯವು ನಿರಂತರವಾಗಿ ತನಿಖೆ ನಡೆಸುತ್ತಲೇ ಇದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ, ಜಾರಿ ನಿರ್ದೇಶನಾಲಯವು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರಿಗೆ ಸಂಬಂಧಿಸಿದ ಕಂಪನಿಯ 752 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ ಎಂದು ವರದಿಯಾಗಿದೆ.
2014 ರಲ್ಲಿ ದೂರಿನ ನಂತರ ನ್ಯಾಯಾಲಯದ ಆದೇಶದ ಆಧಾರದ ಮೇಲೆ ಜಾರಿ ನಿರ್ದೇಶನಾಲಯ ಮನಿ ಲಾಂಡರಿಂಗ್ ತನಿಖೆಯನ್ನು ಪ್ರಾರಂಭಿಸಿತ್ತು. ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಇಡಿ ತನಿಖೆ ನಡೆಸುತ್ತಿದೆ. ಅಸೋಸಿಯೇಟೆಡ್ ಜರ್ನಲ್ಸ್ಗೆ ಸೇರಿದ ಆಸ್ತಿಯನ್ನು ವಶಪಡಿಸಿಕೊಂಡ ಒಟ್ಟು ಮೌಲ್ಯ 752 ಕೋಟಿ ರೂ. ಆಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ನಲ್ಲಿ ತೃತೀಯ ಲಿಂಗಿಗಳಿಗೆ ನಿಷೇಧ – ಕಾರಣವೇನು ಗೊತ್ತಾ?
ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರಿಗೆ ಸಂಬಂಧಿಸಿದ ಆಸ್ತಿಗಳಲ್ಲಿ ದೆಹಲಿ ಮತ್ತು ಮುಂಬೈನಲ್ಲಿರುವ ನ್ಯಾಷನಲ್ ಹೆರಾಲ್ಡ್ ಹೌಸ್ ಮತ್ತು ಲಕ್ನೋದ ನೆಹರು ಭವನವನ್ನು ಜಪ್ತಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
ನ್ಯಾಷನಲ್ ಹೆರಾಲ್ಡ್ ಕೇಸ್ನಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಗಾಂಧಿ ಕುಟುಂಬಕ್ಕೆ ಸೇರಿದ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ದೆಹಲಿ, ಮುಂಬೈ , ಲಖನೌ ಸೇರಿದಂತೆ ಕೆಲ ನಗರದಲ್ಲಿರುವ ಸ್ಥಿರ ಆಸ್ತಿ ರೂಪದ ಆದಾಯ 661.69 ಕೋಟಿ ರೂಪಾಯಿ ಹಾಗೂ ಯಂಗ್ ಇಂಡಿಯಾ ಸಂಸ್ಥೆಯ ಈಕ್ವಿಟಿ ಷೇರುಗಳಲ್ಲಿ ಹೂಡಿಕೆ ಮಾಡಿರುವ 90.21 ಕೋಟಿ ರೂಪಾಯಿಯನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಯಂಗ್ ಇಂಡಿಯನ್ ಮೂಲಕ ಎಜೆಎಲ್ ನ ನೂರಾರು ಕೋಟಿ ಮೌಲ್ಯದ ಆಸ್ತಿ ಪಡೆಯುವ ಸಂಚು ನಡೆದಿರುವುದು ಪತ್ತೆಯಾಗಿದೆ. ಪತ್ರಿಕೆಗಳನ್ನು ಪ್ರಕಟಿಸಲು ರಿಯಾಯಿತಿ ದರದಲ್ಲಿ ಭೂಮಿಯನ್ನು ಪಡೆದ AJL, 2008 ರಲ್ಲಿ ತನ್ನ ಕಾರ್ಯಾಚರಣೆಯನ್ನು ಮುಚ್ಚಿತು ಮತ್ತು ಆಸ್ತಿಗಳನ್ನು ವಾಣಿಜ್ಯ ಉದ್ದೇಶಗಳಿಗಾಗಿ ಬಳಸಿತ್ತು ಎಂದು ಹೇಳಲಾಗುತ್ತಿದೆ. .