ಶನಿವಾರದಿಂದ ಬೆಂಗಳೂರು ಕಂಬಳ – ಕಂಬಳ ಕೆರೆಗೆ ಅಶ್ವಿನಿ ಪುನೀತ್​ ರಾಜಕುಮಾರ್ ಚಾಲನೆ!

ಶನಿವಾರದಿಂದ ಬೆಂಗಳೂರು ಕಂಬಳ – ಕಂಬಳ ಕೆರೆಗೆ ಅಶ್ವಿನಿ ಪುನೀತ್​ ರಾಜಕುಮಾರ್ ಚಾಲನೆ!

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಕಂಬಳ ನಡೆಯಲಿದೆ. ಈ ಐತಿಹಾಸಿಕ ಕ್ಷಣಕ್ಕೆ ಕ್ಷಣಗಣನೆ ಆರಂಭವಾಗಿದೆ. ಎರಡು ದಿನಗಳ ಕಾಲ ಅರಮನೆ ಮೈದಾನದಲ್ಲಿ ಕಂಬಳ ನಡೆಯಲಿದ್ದು, ಈಗಾಗಲೇ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಕಂಬಳ ಕೆರೆಗೆ  ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ಪತ್ನಿ ಅಶ್ವಿನಿ ಪುನಿತ್​ ರಾಜಕುಮಾರ್ ಅವರು ಚಾಲನೆ ನೀಡಲಿದ್ದಾರೆ ಎಂದು ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷ ಹಾಗೂ ​ಶಾಸಕ ಅಶೋಕ್ ರೈ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಕಂಬಳಕ್ಕೆ ಕೌಂಟ್‌ಡೌನ್!‌ – ರಾಜ್ಯ ರಾಜಧಾನಿಯಲ್ಲಿ ಮೂರು ದಿನ ಟ್ರಾಫಿಕ್‌ ಜಾಮ್‌!

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶನಿವಾರ (ನ.25)ರ ಬೆಳಿಗ್ಗೆ 10.30 ಕ್ಕೆ ಕಾರ್ಯಕ್ರಮ ಆರಂಭವಾಗುತ್ತದೆ. ಪವರ್​ ಸ್ಟಾರ್​ ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಪುನಿತ್​ ರಾಜಕುಮಾರ್ ಅವರು ಕಂಬಳ ಕೆರೆಗೆ​ ಚಾಲನೆ ನೀಡಲಿದ್ದಾರೆ. ಸಂಜೆ 5.30 ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಂಪುಟ ಸಚಿವರು ಬರುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.

ಕರಾವಳಿ ಭಾಗದ ಎಲ್ಲಾ ಸಂಘ-ಸಂಸ್ಥೆ, ಜಾತಿಯವರ ಜೊತೆ ಸಮಾಲೋಚನೆ ನಡೆಸಿ ಒಗ್ಗಟ್ಟಿನಿಂದ ಬೆಂಗಳೂರಿನಲ್ಲಿ ಕಂಬಳ ನಡೆಸಬೇಕು ಎಂಬ ತೀರ್ಮಾನ ಮಾಡಿದ್ದೇವೆ. ಇದು ನಮ್ಮ ಸಂಕಲ್ಪವೂ ಆಗಿದೆ. ಶನಿವಾರ ಬೆಳಗ್ಗೆ ಕಾರ್ಯಕ್ರಮ ಆರಂಭವಾಗಿ ಸಾಯಂಕಾಲ ಸಭಾ ಕಾರ್ಯಕ್ರಮ ನಡೆಯುತ್ತೆ. ಶನಿವಾರ ಬೆಳಿಗ್ಗೆ 11 ಗಂಟೆ ಬಳಿಕ ನಟ ನಟಿಯರು ಭಾಗಿಯಾಗುತ್ತಾರೆ. ರವಿವಾರ (ನ.26) ರಂದು ಸಂಜೆ 5.30ಕ್ಕೆ ಕಂಬಳ ಕಾರ್ಯಕ್ರಮ ಮುಗಿಯುತ್ತೆ ಎಂದು ತಿಳಿಸಿದರು.

ಕಂಬಳ 6 ಸೆಗ್ಮೆಂಟ್​ನಲ್ಲಿ ನಡೆಯುತ್ತೆ. ಕಂಬಳ ಇತಿಹಾಸದಲ್ಲಿ ತೃತೀಯ ಬಹುಮಾನ ಇರಲಿಲ್ಲ. ಈ ಸಲ ಮೂರನೇ ಸ್ಥಾನಕ್ಕೂ ಕೂಡ 4 ಗ್ರಾಂ ಚಿನ್ನ 25 ಸಾವಿರ ಬಹುಮಾನ ನೀಡಲು ನಿರ್ಧರಿಸಿದ್ದೇವೆ. ಮೊದಲನೇ ಬಹುಮಾನ 16 ಗ್ರಾಂ ಚಿನ್ನ 1 ಲಕ್ಷ ನಗದು ನೀಡಲಾಗುತ್ತೆ. ಎರಡನೇ ಬಹುಮಾನ 8 ಗ್ರಾಂ ಚಿನ್ನ 50 ಸಾವಿರ ನಗದನ್ನ ನೀಡಲಾಗುತ್ತೆ. ಕೋಣ ಓಡಿಸಿ ವಿಜಯಶಾಲಿ ಆದವರಿಗೆ ಕೂಡ ಬಹುಮಾನ ಇದೆ ತಿಳಿಸಿದರು.

Shwetha M