ತೆಲಂಗಾಣ ವಿಧಾನಸಭೆ ಚುನಾವಣೆ – ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ವೋಟ್ ಮಾಡಿದ ಸ್ಟಾರ್ಸ್
ತೆಲಂಗಾಣ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದೆ. 119 ವಿಧಾನಸಭಾ ಸ್ಥಾನಗಳಿಗೆ ಮತದಾನ ಬೆಳಗ್ಗೆ 7 ಗಂಟೆಯಿಂದ ಮತದಾನ ನಡೆಯುತ್ತಿದೆ. ಜನರು ತಮ್ಮ ಹಕ್ಕು ಚಲಾಯಿಸಲು ಮತಗಟ್ಟೆಗೆ ಆಗಮಿಸಿ ಮತದಾನ ಮಾಡುತ್ತಿದ್ದಾರೆ.
ತಮ್ಮ ಹಕ್ಕು ಚಲಾಯಿಸಲು ಸೆಲೆಬ್ರಿಗಳು ಕೂಡ ಮತಗಟ್ಟೆಗೆ ಆಗಮಿಸಿ ಮತದಾನ ಮಾಡುತ್ತಿದ್ದಾರೆ. ತೆಲುಗು ಚಿತ್ರರಂಗದ ಖ್ಯಾತ ನಟರಾದ ಅಲ್ಲು ಅರ್ಜುನ್, ಜೂನಿಯರ್ ಎನ್ಟಿಆರ್ ಹಾಗೂ ಚಿರಂಜೀವಿ ಹೈದರಾಬಾದ್ನಲ್ಲಿ ತಮ್ಮ ಕುಟುಂಬಗಳೊಂದಿಗೆ ಬಂದು ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಬೆಳ್ಳಂ ಬೆಳಗ್ಗೆಯೇ ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ವೋಟ್ ಮಾಡಿದ್ದಾರೆ. ಸ್ಟಾರ್ಸ್ಗಳು ವೋಟ್ ಮಾಡಿರುವ ಫೋಟೋ ವೀಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ.
ಇದನ್ನೂ ಓದಿ: ಸಿಮ್ ಖರೀದಿ ನಿಯಮದಲ್ಲಿ ಭಾರಿ ಬದಲಾವಣೆ – ಡಿಸೆಂಬರ್ 1 ರಿಂದಲೇ ಹೊಸ ರೂಲ್ಸ್ ಜಾರಿ!
ಅಲ್ಲು ಅರ್ಜುನ್ ತಾವೊಬ್ಬರೇ ಮತಗಟ್ಟೆಗೆ ಬಂದು ವೋಟ್ ಮಾಡಿದರು. ಜೂನಿಯರ್ ಎನ್ಟಿಆರ್ ಲಕ್ಷ್ಮಿ ಪ್ರಣತಿ, ತಾಯಿ ಶಾಲಿನಿ ನಂದಮೂರಿ ಅವರೊಂದಿಗೆ ಬಂದು ವೋಟ್ ಹಾಕಿದ್ದಾರೆ. ಇನ್ನೂ ಮೆಗಾಸ್ಟಾರ್ ಚಿರಂಜೀವಿ ಸಹ ತಮ್ಮ ಕುಟುಂಬ ಸಮೇತರಾಗಿ ಬಂದು ವೋಟ್ ಮಾಡಿ ತನ್ಮ ಹಕ್ಕು ಚಲಾಯಿಸಿದರು. ಜೊತೆಗೆ ಪ್ರತಿಯೊಬ್ಬರು ಬಂದು ವೋಟ್ ಮಾಡುವಂತೆ ಮನವಿ ಮಾಡಿದರು.
ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸಗಡ, ಮಿಜೋರಾಂಗಳಲ್ಲಿ ಈಗಾಗಲೇ ನ.7ರಿಂದ ನವೆಂಬರ್ 25ರ ಒಳಗೆ ಮತದಾನ ಮುಕ್ತಾಯವಾಗಿದೆ. ತೆಲಂಗಾಣದಲ್ಲಿಂದು (ನ.30) 119 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ತೆಲಂಗಾಣದ ಆಡಳಿತಾರೂಢ ಬಿಆರ್ಎಸ್ ಎಲ್ಲಾ 119 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಸೀಟು ಹಂಚಿಕೆ ಒಪ್ಪಂದದ ಪ್ರಕಾರ, ಬಿಜೆಪಿ ಮತ್ತು ನಟ ಪವನ್ ಕಲ್ಯಾಣ್ ನೇತೃತ್ವದ ಜನಸೇನೆ ಕ್ರಮವಾಗಿ 111 ಮತ್ತು 8 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದರೆ, ಕಾಂಗ್ರೆಸ್ ತನ್ನ ಮಿತ್ರ ಪಕ್ಷವಾದ ಸಿಪಿಐಗೆ ಒಂದು ಸ್ಥಾನವನ್ನು ನೀಡಿ 118 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ.