ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಪ್ರಕಟ–ಮೂರು ಮಾದರಿಯ ಕ್ರಿಕೆಟ್‌ಗೆ ಮೂವರು ನಾಯಕರು
ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿರುವ ಭಾರತ ತಂಡ ಪ್ರಕಟಗೊಂಡಿದೆ. ಮೂರು ಮಾದರಿಯ ಕ್ರಿಕೆಟಿಗೆ ಮೂವರು ನಾಯಕರನ್ನು ಆಯ್ಕೆ ಮಾಡಿದೆ. ಟೆಸ್ಟ್ ತಂಡಕ್ಕೆ ರೋಹಿತ್ ಶರ್ಮಾ, ಏಕದಿನಕ್ಕೆ ಕೆಎಲ್ ರಾಹುಲ್, ಟಿ20ಗೆ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕರನ್ನಾಗಿ ನೇಮಿಸಿದೆ. ಭಾರತ ತಂಡ ಡಿಸೆಂಬರ್ 10ರಿಂದ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದ್ದು, 3 ಟಿ20, 3 ಏಕದಿನ ಹಾಗೂ 2 ಟೆಸ್ಟ್ ಪಂದ್ಯಗಳನ್ನಾಡಲಿದೆ.
ಇದನ್ನೂ ಓದಿ:ಟಿ-20 & ODI ಸೀರಿಸ್ ಆಡಲ್ಲ ವಿರಾಟ್ ಕೊಹ್ಲಿ – ರೋಹಿತ್ ಶರ್ಮಾ ಮುಂದಿನ ಟಿ-20 ವರ್ಲ್ಡ್‌ಕಪ್ ಆಡೋದು ಡೌಟ್.. !
ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಭಾರತ ತಂಡವನ್ನು ಪ್ರಕಟಿಸಿದೆ. ಸ್ಟಾರ್ ಬ್ಯಾಟರ್‌ಗಳಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ಕನ್ನಡಿಗ ಕೆಎಲ್ ರಾಹುಲ್ ಅವರಿಗೆ ಏಕದಿನ ತಂಡದ ನಾಯಕನ ಪಟ್ಟ ನೀಡಿದೆ. ಟಿ20ಯಲ್ಲಿ ಸೂರ್ಯಕುಮಾರ್ ಯಾದವ್‌ಗೆ ನಾಯಕತ್ವ ವಹಿಸಲಾಗಿದೆ. ರೋಹಿತ್ ಶರ್ಮಾ ಅವರು ಟೆಸ್ಟ್ ಸರಣಿಯಲ್ಲಿ ಮಾತ್ರ ತಂಡವನ್ನು ಮುನ್ನಡೆಸಲಿದ್ದಾರೆ. ರೋಹಿತ್ ಹಾಗೂ ಕೊಹ್ಲಿ ಏಕದಿನ ಹಾಗೂ ಟಿ20ಗೆ ತಮ್ಮನ್ನು ಪರಿಗಣಿಸದಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ಮನವಿ ಮಾಡಿದ್ದರು ಎನ್ನಲಾಗಿದೆ. ಇಬ್ಬರೂ ಆಟಗಾರರು ಟೆಸ್ಟ್ ಸರಣಿಗೆ ತಂಡವನ್ನು ಸೇರಿಕೊಳ್ಳಲಿದ್ದಾರೆ. ಟೆಸ್ಟ್ ತಂಡದ ಉಪನಾಯಕರನ್ನಾಗಿ ಜಸ್ಪ್ರೀತ್ ಬೂಮ್ರಾ ಅವರನ್ನು ನೇಮಿಸಲಾಗಿದೆ. ಈ ಸರಣಿಯಿಂದಲೇ ಬೂಮ್ರಾ ಟೆಸ್ಟ್‌ಗೆ ಮರಳಲಿದ್ದಾರೆ. ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್ ಕೂಡ ಈ ತಂಡಕ್ಕೆ ಮರಳಿದ್ದು, ಪ್ರಸಿದ್ಧ್ ಕೃಷ್ಣ ಕೂಡ ಆಯ್ಕೆಯಾಗಿದ್ದಾರೆ. ಟೀಂ ಇಂಡಿಯಾ ಏಕದಿನ ಸ್ಕ್ವಾಡ್ ಹೀಗಿದೆ
ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ರಜತ್ ಪಾಟಿದಾರ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ ಹಾಗೂ ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಯುಜುವೇಂದ್ರ ಚಾಹಲ್, ಮುಖೇಶ್ ಕುಮಾರ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ದೀಪಕ್ ಚಾಹರ್.
ಟೀಂ ಇಂಡಿಯಾ ಟಿ20 ಸ್ಕ್ವಾಡ್
ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪ ನಾಯಕ), ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಮೊಹಮ್ಮದ್. ಸಿರಾಜ್, ಮುಖೇಶ್ ಕುಮಾರ್, ದೀಪಕ್ ಚಾಹರ್.
ಟೀಂ ಇಂಡಿಯಾ ಟೆಸ್ಟ್ ಸ್ಕ್ವಾಡ್
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್. ಸಿರಾಜ್, ಮುಖೇಶ್ ಕುಮಾರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬೂಮ್ರಾ (ಉಪ ನಾಯಕ), ಪ್ರಸಿದ್ಧ್ ಕೃಷ್ಣ.