ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲೇ ಅತೀ ಹೆಚ್ಚು ಆ್ಯಸಿಡ್ ದಾಳಿ! – ಅಮಾನವೀಯ ಕೃತ್ಯಕ್ಕೆ ಕಡಿವಾಣ ಯಾವಾಗ?

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲೇ ಅತೀ ಹೆಚ್ಚು ಆ್ಯಸಿಡ್ ದಾಳಿ! – ಅಮಾನವೀಯ ಕೃತ್ಯಕ್ಕೆ ಕಡಿವಾಣ ಯಾವಾಗ?

ಮಹಿಳೆಯ ಮೇಲೆ ದೌರ್ಜನ ನಿರಂತವಾಗಿ ನಡೆಯುತ್ತಲೇ ಇದೆ. ಸಾರ್ವಜನಿಕರ ಸ್ಥಳಗಳಲ್ಲಿ ಅಮಾಯಕರ ಮೇಲೆ ಆ್ಯಸಿಡ್ ದಾಳಿ ನಡೆಯುತ್ತಲೇ ಇದೆ. ಹಲವರು ಅಮಾಯಕರ ಬದುಕನ್ನು ನರಕವನ್ನಾಗಿಸಿದ ಆ್ಯಸಿಡ್ ದಾಳಿಯಲ್ಲಿ ಕೊನೆ ಇಲ್ಲ ಎಂಬಂತೆ ಒಂದರ ನಂತರ ಒಂದು ಘಟನೆಗಳು ನಡೆಯುತ್ತಲೇ ಇವೆ. ಸ್ತ್ರೀಯರ ಮೇಲೆ ಆ್ಯಸಿಡ್ ದಾಳಿಯಲ್ಲಿ ಮಹಾನಗರಗಳ ಪೈಕಿ ಬೆಂಗಳೂರು ಮೊದಲನೇ ಸ್ಥಾನವನ್ನು ಪಡೆದಿದೆ ಎಂಬ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ.

ಇದನ್ನೂ ಓದಿ: ಟಿಬೆಟ್‌ ಹೆಸರನ್ನೇ ಬದಲಾಯಿಸಿದ ಚೀನಾ – ಡ್ರ್ಯಾಗನ್‌ ರಾಷ್ಟ್ರದ ಹೊಸ ಪ್ಲ್ಯಾನ್‌ ಏನು?

ಹೌದು, ಸಿಲಿಕಾನ್‌ ಸಿಟಿ ಬೆಂಗಳೂರು ಆ್ಯಸಿಡ್ ದಾಳಿಯಲ್ಲಿ ಮೊದಲನೇಯ ಸ್ಥಾನ ಪಡೆದುಕೊಂಡಿದೆ. ರಾಷ್ಟ್ರರಾಜಧಾನಿ ನವದೆಹಲಿ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದು, ಅಹಮದಾಬಾದ್ ಮೂರನೇ ಸ್ಥಾನವನ್ನು ಪಡೆದಿದೆ. 2022ರಲ್ಲಿ ಬೆಂಗಳೂರಿನಲ್ಲಿ ಒಟ್ಟು 8 ಆ್ಯಸಿಡ್ ದಾಳಿ ನಡೆದಿತ್ತು. ರಾಷ್ಟ್ರೀಯ ಅಪರಾಧಗಳ ದಾಖಲೆಗಳ ಬ್ಯೂರೋ ವರದಿಯಲ್ಲಿ ಆತಂಕಕಾರಿ ವಿಚಾರ ಬಯಲಾಗಿದೆ.

ಎನ್‌ಸಿಆರ್‌ಬಿ ಬಿಡುಗಡೆ ಮಾಡಿದ ವರದಿ ಅನ್ವಯ ದೇಶದ 19 ಮಹಾನಗರಗಳ ಪೈಕಿ 2022ರಲ್ಲಿ ಬೆಂಗಳೂರಿನಲ್ಲಿ ಮಹಿಳೆಯರ ಮೇಲಿನ 8 ಆ್ಯಸಿಡ್ ದಾಳಿ ಪ್ರಕರಣಗಳು ದಾಖಲಾಗಿದ್ದು, ಇದು ಆ ವರ್ಷದಲ್ಲಿ ದೇಶದಲ್ಲೇ ಅತಿ ಹೆಚ್ಚು ಪ್ರಕರಣವಾಗಿದೆ. 7 ಆ್ಯಸಿಡ್ ದಾಳಿ ಪ್ರಕರಣಗಳನ್ನು ದಾಖಲಿಸಿರುವ ದೆಹಲಿ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. 5 ಪ್ರಕರಣಗಳೊಂದಿಗೆ ಗುಜರಾತ್‌ನ ಅಹಮದಾಬಾದ್ 3ನೇ ಸ್ಥಾನದಲ್ಲಿದೆ. ಹೈದರಾಬಾದ್‌ನಲ್ಲಿ 2 ಆ್ಯಸಿಡ್ ದಾಳಿ ಯತ್ನ ಪ್ರಕರಣ ದಾಖಲಾಗಿತ್ತು. ಕಳೆದ ವರ್ಷ ಬೆಂಗಳೂರಿನಲ್ಲಿ ಯುವತಿಯ ಮೇಲಿನ ಆ್ಯಸಿಡ್ ದಾಳಿ ಭಾರೀ ಸುದ್ದಿಯಾಗಿತ್ತು.

Shwetha M