ಹಾಸ್ಟೆಲ್ ಕೊಠಡಿಯಲ್ಲೇ ಬಾಂಬ್ ತಯಾರಿಸುತ್ತಿದ್ದಾಗ ಸ್ಫೋಟ – ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು

ಹಾಸ್ಟೆಲ್ ಕೊಠಡಿಯಲ್ಲೇ ಬಾಂಬ್ ತಯಾರಿಸುತ್ತಿದ್ದಾಗ ಸ್ಫೋಟ – ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು

ಶಾಲೆ, ಕಾಲೇಜಿಗೆ ಹೋಗಿ ಓದುವ ಮಕ್ಕಳು ಇಂದು ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿರುವ ಪ್ರಕರಣಗಳು ಪದೇ ಪದೆ ವರದಿಯಾಗುತ್ತಲೇ ಇದೆ. ಇದೀಗ ಇಲ್ಲೊಬ್ಬ ವಿದ್ಯಾರ್ಥಿ ಹಾಸ್ಟೇಲ್‌ನಲ್ಲಿ ಬಾಂಬ್‌ ತಯಾರಿಸುತ್ತಿರುವಾಗ ಸ್ಪೋಟಗೊಂಡಿರುವ ಘಟನೆ ನಡೆದಿದೆ.

ಅಲಹಾಬಾದ್ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿಯೊಬ್ಬ ತನ್ನ ಹಾಸ್ಟೆಲ್ ಕೊಠಡಿಯಲ್ಲಿ ಬಾಂಬ್   ತಯಾರಿಸುತ್ತಿದ್ದಾಗ ಬಾಂಬ್‌ ಸ್ಫೋಟಗೊಂಡಿದೆ. ಈ ವೇಳೆ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಸಂಸತ್ ಭವನದಲ್ಲಿ ಭಾರಿ ಭದ್ರತಾ ಲೋಪ – 6 ಆರೋಪಿಗಳ ಪೈಕಿ ಐವರನ್ನು ಬಂಧಿಸಿದ ಪೊಲೀಸರು

ಅಲಹಾಬಾದ್ ವಿವಿಯ ಎಂಎ ವಿದ್ಯಾರ್ಥಿಯಾಗಿರುವ ಪ್ರಭಾತ್ ಯಾದವ್ ಪಿಸಿ ಬ್ಯಾನರ್ಜಿ ಗಾಯಗೊಂಡಿರುವ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ಹಾಸ್ಟೆಲ್‌ನಲ್ಲಿರುವ ತನ್ನ ಕೊಠಡಿಯಲ್ಲಿ ಬಾಂಬ್ ತಯಾರಿಸುತ್ತಿದ್ದ. ಈ ಸಂದರ್ಭ ಅದು ಆತನ ಕೈಯಲ್ಲೇ ಸ್ಫೋಟಗೊಂಡಿದೆ. ಈ ಹಿನ್ನೆಲೆ ಆತನ ಬಲಗೈಗೆ ತೀವ್ರ ಗಾಯಗಳಾಗಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ ರಾಜೇಶ್ ಕುಮಾರ್ ಯಾದವ್ ಹೇಳಿದ್ದಾರೆ.

ವಿದ್ಯಾರ್ಥಿ ಏಕೆ ಬಾಂಬ್ ತಯಾರಿಸುತ್ತಿದ್ದ ಎಂಬುದು ತಿಳಿದುಬಂದಿಲ್ಲ. ವಿದ್ಯಾರ್ಥಿಯ ಸ್ಥಿತಿ ಚಿಂತಾಜನಕವಾಗಿದ್ದು ಆತನನ್ನು ಎಸ್‌ಆರ್‌ಎನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ ಮತ್ತೊಬ್ಬ ವಿದ್ಯಾರ್ಥಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಭಾತ್ ಯಾದವ್ ವಿರುದ್ಧ ಶೀಘ್ರದಲ್ಲೇ ಪ್ರಕರಣ ದಾಖಲಿಸಲಾಗುವುದು ಎಂದು ರಾಜೇಶ್‌ ಕುಮಾರ್‌ ತಿಳಿಸಿದ್ದಾರೆ.

Shwetha M