ಸಿದ್ದರಾಮಯ್ಯ ಸಾಹೇಬರು ಯತೀಂದ್ರ ಗೆ ಟಿಪ್ಪು ಎಂದು ನಾಮಕರಣ ಮಾಡಿದರೂ ಅಚ್ಚರಿ ಇಲ್ಲ! – ಬಿಜೆಪಿ ಟೀಕೆ
ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳ ಜೊತೆ ಜೊತೆಗೆ ಮೈಸೂರು ವಿಮಾನ ನಿಲ್ದಾಣಕ್ಕೆ ಮೈಸೂರು ಹುಲಿ ಟಿಪ್ಪು ಸುಲ್ತಾನ ಅವರ ಹೆಸರಿಡಬೇಕೆಂದು ಕಾಂಗ್ರೆಸ್ನ ಕೆಲ ಶಾಸಕರು ಆಗ್ರಹಿಸಿದ್ದಾರೆ. ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರು ಇಡುವ ವಿಚಾರವಾಗಿ ರಾಜ್ಯದಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಬೆನ್ನಲ್ಲೇ ರಾಜ್ಯ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದೆ.
ಇದನ್ನೂ ಓದಿ: ಸಂಸತ್ತಿನಲ್ಲಿ ಭದ್ರತಾ ಲೋಪ ಪ್ರಕರಣ – ಸಂಸತ್ತಿನೆದುರು ಬೆಂಕಿ ಹಚ್ಚಿಕೊಳ್ಳಲು ಪ್ಲ್ಯಾನ್ ಮಾಡಿದ್ದ ಆರೋಪಿ ಸಾಗರ್!
ಕಾಂಗ್ರೆಸ್ ಕೆಲ ಶಾಸಕರು ಟಿಪ್ಪು ಜಪ ಮಾಡುತ್ತಿರುವ ಹಿನ್ನೆಲೆಯಲ್ಲಿ ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ ಸರ್ಕಾರಕ್ಕೆ ಟಾಂಗ್ ನೀಡಿದೆ. ತುಷ್ಟೀಕರಣದ ಉತ್ತುಂಗಕ್ಕೆ ತಲುಪಿರುವ ಸಿದ್ದರಾಮಯ್ಯ ಸಾಹೇಬರು ನಾಳೆ ಯತೀಂದ್ರ ಅವರಿಗೆ ಟಿಪ್ಪು ಎಂದು ನಾಮಕರಣ ಮಾಡಿದರೂ ಅಚ್ಚರಿ ಇಲ್ಲ ಎಂದು ಟೀಕಿಸಿದೆ.
ಪೋಸ್ಟ್ನಲ್ಲಿ ಏನಿದೆ?
ಲೋಕಸಭಾ ಚುನಾವಣೆಗಾಗಿ ಅಲ್ಪಸಂಖ್ಯಾತರ ಓಲೈಕೆಗೆ 10 ಸಾವಿರ ಕೋಟಿ ರೂ. ಕೊಡುತ್ತಿರುವ ಸಿದ್ದರಾಮಯ್ಯನವರು ಇನ್ನೂ ಮೆಚ್ಚಿಸಲು ಮಾಡಬಹುದಾದ ಘನಂದಾರಿ ಕೆಲಸಗಳು – ಮೈಸೂರಿನಲ್ಲಿ ಟಿಪ್ಪು ವಿಮಾನ ನಿಲ್ದಾಣ, ವಿಧಾನಸೌಧಕ್ಕೆ ಟಿಪ್ಪು ಸೌಧವೆಂದು ಮರು ನಾಮಕರಣ, ಮೈಸೂರು ವಿವಿಗೆ ಟಿಪ್ಪು ಹೆಸರು, ಟಿಪ್ಪುವಿನ 108 ಅಡಿ ಪ್ರತಿಮೆ, ಟಿಪ್ಪು ಮದ್ಯದ ಬಾಟಲಿ, ಬಿಎಂಟಿಸಿ/ಕೆಎಸ್ಆರ್ಟಿಸಿಗೆ ಟಿಪ್ಪು ಸಾರಿಗೆ ಎಂಬ ಹೆಸರು.