ಶಾಲೆಗೆ ಹೊರಟ ಬಾಲಕಿ ವಾಪಸ್ ಬರಲೇ ಇಲ್ಲ! – ಹೃದಯಾಘಾತದಿಂದ 7 ನೇ ತರಗತಿ ವಿದ್ಯಾರ್ಥಿನಿ ಸಾವು
ಆ ಪುಟ್ಟ ಬಾಲಕಿ ಎಂದಿನಂತೆ ಬುಧವಾರ ಕೂಡ ಶಾಲೆಗೆ ಹೊರಟಿದ್ಲು.. ಅದ್ಯಾರ ಕಣ್ಣು ಬಿತ್ತೋ ಗೊತ್ತಿಲ್ಲ. ಶಾಲೆಗೆ ಹೋಗುತ್ತಿದ್ದ ವೇಳೆ ಮಾರ್ಗ ಮಧ್ಯೆದಲ್ಲಿ ಜವರಾಯ ಕಾದು ಕುಳಿತಿದ್ದ. ಬಾಲಕಿ ಶಾಲೆಗೆ ಹೋಗುತ್ತಿದ್ದಾಗಲೇ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾಳೆ.
ಇದನ್ನೂ ಓದಿ: ಟೀ ಮಾಡಿಕೊಡುವ ವಿಚಾರಕ್ಕೆ ದಂಪತಿ ಮಧ್ಯೆ ಕಲಹ – ಸಿಟ್ಟಿನಿಂದ ಹೆಂಡತಿಯನ್ನು ಕೊಂದೇ ಬಿಟ್ಟ ಪಾಪಿ ಪತಿ!
ಈ ಹೃದಯ ವಿದ್ರಾವಕ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜೋಗಣ್ಣನಕೆರೆ ಗ್ರಾಮದಲ್ಲಿ ನಡೆದಿದೆ. ಶಾಲೆಗೆ ತೆರಳುತ್ತಿದ್ದ ವೇಳೆ ಹೃದಯಾಘಾತವಾಗಿ 7ನೇ ತರಗತಿ ವಿದ್ಯಾರ್ಥಿನಿ ಸೃಷ್ಟಿ (13).ಸಾವನ್ನಪ್ಪಿದ್ದಾಳೆ.
ಮೃತ ವಿದ್ಯಾರ್ಥಿನಿ ಪ್ರಸ್ತುತ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಬುಧವಾರ ಬೆಳಗ್ಗೆ ಶಾಲೆಗೆ ತೆರಳುತ್ತಿದ್ದ ಸಂದರ್ಭ ಹೃದಯಾಘಾತವಾಗಿ ಕುಸಿದುಬಿದ್ದಿದ್ದಾಳೆ. ಆಸ್ಪತ್ರೆಗೆ ಸಾಗಿಸುವ ವೇಳೆ ಬಾಲಕಿ ಸಾವನ್ನಪ್ಪಿದ್ದಾಳೆ. ಮೂಡಿಗೆರೆ ಎಂಜಿಎಂ ಸರ್ಕಾರಿ ಆಸ್ಪತ್ರೆ ವೈದ್ಯರು ಹೃದಯಾಘಾತ ಎಂದು ದೃಢಪಡಿಸಿದ್ದು, ಮಗಳ ಸಾವಿನಿಂದ ಕುಟುಂಬಸ್ಥರು ಆಘಾತಗೊಂಡಿದ್ದಾರೆ.