ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿದ ಸಲಾರ್ – ಮೂರೇ ದಿನಕ್ಕೆ 400 ಕೋಟಿ ರೂಪಾಯಿ ಬಾಚಿದ ಸಿನಿಮಾ!

ಬಹುನೀರಿಕ್ಷಿತ ಸಲಾರ್ ಸಿನಿಮಾ ವಿಶ್ವದಾದ್ಯಂತ ರಿಲೀಸ್ ಆಗಿದೆ. ಥಿಯೇಟರ್ಗಳಲ್ಲಿ ಸಲಾರ್ ಅಬ್ಬರ ಜೋರಾಗಿದ್ದು, ಬಾಕ್ಸ್ಆಫೀಸ್ನಲ್ಲಿ ಕಮಾಲ್ ಮಾಡಿದೆ. ಸಿನಿಮಾ ರಿಲೀಸ್ ಆದ ಮೂರೇ ದಿನದಲ್ಲೇ ಸಲಾರ್ ಭಾರತ ಹಾಗೂ ವಿಶ್ವ ಬಾಕ್ಸ್ ಆಫೀಸ್ನಲ್ಲಿ ಹೊಸ ದಾಖಲೆಗಳನ್ನು ಬರೆದು ಮುನ್ನುಗ್ಗುತ್ತಿದೆ. ಭಾರತದ ಬಾಕ್ಸ್ ಆಫೀಸ್ನಲ್ಲಿ ಈ ಸಿನಿಮಾ ಮೂರೇ ದಿನಕ್ಕೆ 200 ಕೋಟಿ ರೂಪಾಯಿ ಗಳಿಕೆ ಮಾಡಿದೆ. ವಿಶ್ವ ಬಾಕ್ಸ್ ಆಫೀಸ್ನಲ್ಲಿ 400 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಮೂಲಕ ಸಿನಿಮಾ ಭರ್ಜರಿ ಹಿಟ್ ಆಗಿದೆ.
ಇದನ್ನೂ ಓದಿ: ʼಸಲಾರ್ʼ ಬಿಗ್ ರೆಕಾರ್ಡ್ – ಮೊದಲ ದಿನವೇ ಬಾಕ್ಸ್ಆಫೀಸ್ನಲ್ಲಿ ಭರ್ಜರಿ ಕಲೆಕ್ಷನ್!
ಹೌದು, ಪ್ರಶಾಂತ್ ನೀಲ್ ನಿರ್ದೇಶನದ, ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸುತ್ತಿದೆ. ಭಾರತ ಹಾಗೂ ವಿಶ್ವ ಬಾಕ್ಸ್ ಆಫೀಸ್ನಲ್ಲಿ ಹೊಸ ದಾಖಲೆಗಳನ್ನು ಬರೆದಿದೆ. ಭಾರತದ ಬಾಕ್ಸ್ ಆಫೀಸ್ನಲ್ಲಿ ಈ ಸಿನಿಮಾ ಮೂರೇ ದಿನಕ್ಕೆ 200 ಕೋಟಿ ರೂಪಾಯಿ ಗಳಿಕೆ ಮಾಡಿದೆ. ವಿಶ್ವ ಬಾಕ್ಸ್ ಆಫೀಸ್ನಲ್ಲಿ 400 ಕೋಟಿ ರೂಪಾಯಿ ಬಾಚಿಕೊಂಡಿದ್ದು, ಈ ಸಿನಿಮಾದಿಂದ ನಿರ್ದೇಶಕ ಪ್ರಶಾಂತ್ ನೀಲ್ ಅವರ ಬೇಡಿಕೆ ಹೆಚ್ಚಾಗಿದೆ.
‘ಸಲಾರ್’ ಸಿನಿಮಾ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆ ನಿರೀಕ್ಷೆಯನ್ನು ಸಿನಿಮಾ ನಿಜ ಮಾಡಿದೆ. ಈ ಸಿನಿಮಾ ಅನೇಕ ಕಡೆಗಳಲ್ಲಿ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ. ಇದು ಚಿತ್ರ ತಂಡಕ್ಕೆ ಸಹಕಾರಿ ಆಗಿದೆ. ತೆಲುಗು ಭಾಷಿಕ ರಾಜ್ಯಗಳಲ್ಲಿ ಸಿನಿಮಾ ಉತ್ತಮ ಗಳಿಕೆ ಮಾಡುತ್ತಿದೆ. ಭಾನುವಾರ (ಡಿಸೆಂಬರ್ 24) ಈ ಚಿತ್ರ ಭಾರತದಲ್ಲಿ 60 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನಲಾಗಿದೆ.
ಇನ್ನು ‘ಸಲಾರ್’ ಸಿನಿಮಾ ಡಿಸೆಂಬರ್ 22ರಂದು ರಿಲೀಸ್ ಆಯಿತು. ಮೊದಲ ದಿನ ಭಾರತದಲ್ಲಿ ಚಿತ್ರ ಗಳಿಕೆ ಮಾಡಿದ್ದು 90 ಕೋಟಿ ರೂಪಾಯಿ. ಎರಡನೇ ದಿನ (ಡಿಸೆಂಬರ್ 23) ಈ ಸಿನಿಮಾ ಬಾಚಿಕೊಂಡಿದ್ದು 56 ಕೋಟಿ ರೂಪಾಯಿ. ಮೂರನೇ ದಿನ ಸಿನಿಮಾ ಬಾಚಿಕೊಂಡಿದ್ದು 62 ಕೋಟಿ ರೂಪಾಯಿ. ಈ ಮೂಲಕ ಸಿನಿಮಾದ ಒಟ್ಟಾರೆ ಗಳಿಕೆ 209 ಕೋಟಿ ರೂಪಾಯಿ ಆಗಿದೆ.
‘ಸಲಾರ್’ ಸಿನಿಮಾ ಮೊದಲ ದಿನವೇ ದಾಖಲೆ ಬರೆದಿತ್ತು. ಈ ಸಿನಿಮಾ ಮೊದಲ ದಿನ ಬಾಕ್ಸ್ ಆಫೀಸ್ನಲ್ಲಿ 178 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಈ ಚಿತ್ರದ ವಿಶ್ವ ಬಾಕ್ಸ್ ಆಫೀಸ್ ಗಳಿಕೆ 400 ಕೋಟಿ ರೂಪಾಯಿ ಮೇಲಾಗಿದೆ ಅನ್ನೋದು ವಿಶೇಷ.