ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ಗುಡುಗಿದ ಯತ್ನಾಳ್ – 40 ಸಾವಿರ ಕೋಟಿ ರೂಪಾಯಿ ಭ್ರಷ್ಟಾಚಾರದ ಸ್ಫೋಟಕ ಹೇಳಿಕೆ

ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ಗುಡುಗಿದ ಯತ್ನಾಳ್ – 40 ಸಾವಿರ ಕೋಟಿ ರೂಪಾಯಿ ಭ್ರಷ್ಟಾಚಾರದ ಸ್ಫೋಟಕ ಹೇಳಿಕೆ

ಬಿಜೆಪಿ ಪಾಲಿಗೆ ಬಿಸಿತುಪ್ಪವಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಹುದೊಡ್ಡ ಬಾಂಬ್ ಸಿಡಿಸಿದ್ದಾರೆ. ಅದ್ರಲ್ಲೂ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹಾಗೂ ಅವರ ಕುಟುಂಬಸ್ಥರ ವಿರುದ್ಧ ಸದಾ ಬುಸುಗುಡುವ ಯತ್ನಾಳ್ ಈ ಬಾರಿ 40 ಸಾವಿರ ಕೋಟಿಯ ಭ್ರಷ್ಟಾಚಾರದ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಹಳೇ ದ್ವೇಷದಿಂದ ಮೌಲ್ವಿಗೆ ಐಸಿಸ್ ನಂಟು ಕಟ್ಟಿದ್ರಾ ಯತ್ನಾಳ್? – ಪಾಕಿಸ್ತಾನಕ್ಕೆ ಹೋಗ್ತಾರಾ ಹಿಂದೂ ಹುಲಿ?

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊರೊನಾ ಸಂದರ್ಭದಲ್ಲಿ 40 ಸಾವಿರ ಕೋಟಿ ರೂಪಾಯಿಯ ಅವ್ಯವಹಾರ ನಡೆದಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ. ಡಿ.ಕೆ ಶಿವಕುಮಾರ್ ಕೇಸ್ ಬಳಿಕ ಅಪ್ಪಾಜಿ ವಿರುದ್ಧ ತನಿಖೆ ಮಾಡಿಸುವೆ ಎಂದು ಪರೋಕ್ಷವಾಗಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಗುಡುಗಿದ್ದಾರೆ. 45 ರೂಪಾಯಿ ಮಾಸ್ಕ್ ಗೆ 485 ರೂಪಾಯಿ ಬಿಲ್ ಹಾಕಿದ್ದಾರೆ. 10 ಸಾವಿರ ಬೆಡ್‌ಗಳ ಒಂದು ದಿನದ ಬಾಡಿಗೆ ಬಿಲ್ ನಲ್ಲಿ ಖರೀದಿ ಮಾಡಿದ್ರೆ ಹೊಸ ಎರಡು ಬೆಡ್ ಬರ್ತಿದ್ದವು. ಮಾಸ್ಕ್, ಬೆಡ್‌ಗಳಲ್ಲೂ ಭ್ರಷ್ಟಾಚಾರ ನಡೆದಿದೆ. ನಮ್ಮ ಸರ್ಕಾರ ಇದ್ರೆ ಏನಾಯ್ತು? ಕಳ್ಳರು ಕಳ್ಳರೇ ಅಲ್ವಾ? ನನಗೆ ಆಸ್ಪತ್ರೆಯಲ್ಲಿ 5 ಲಕ್ಷ ಬಿಲ್ ಹಾಕಿದರು. ಇನ್ನು ಬಡವರು ಏನು ಮಾಡಬೇಕು. ಕೊರೊನಾ ವೇಳೆ ಕೋಟಿ ಕೋಟಿ ಲೂಟಿ ಆಗಿದೆ ಎಂದು ಬಿಎಸ್​ವೈ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಹಾಗೇ ನನ್ನನ್ನೇನಾದ್ರೂ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ರೆ ಮರುದಿನವೇ ಈ ಬಗೆಗಿನ ಎಲ್ಲಾ ದಾಖಲೆಗಳನ್ನೂ ರಿಲೀಸ್ ಮಾಡ್ತೀನಿ. ಉಚ್ಛಾಟನೆ ಮಾಡಲು ನೋಟೀಸ್ ನೀಡಲಿ ಅವರ ಬಗ್ಗೆ ಎಲ್ಲವನ್ನೂ ಹೇಳುತ್ತೇನೆ ಎಂದಿದ್ದಾರೆ. ಇದೇ ವೇಳೆ ಮಾಜಿ ಕೃಷಿ ಸಚಿವ ಬಿ.ಸಿ ಪಾಟೀಲ್ ವಿರುದ್ಧವೂ ಕಿಡಿ ಕಾರಿದ್ದಾರೆ. ಕೃಷಿ ಇಲಾಖೆಯಲ್ಲಿ ಏನೆಲ್ಲಾ ಆಗಿತ್ತು ಅನ್ನೋದನ್ನ ಅವ್ರನ್ನೇ ಕೇಳಿ ಎಂದು ತಿರುಗೇಟು ಕೊಟ್ಟಿದ್ದಾರೆ.

Sulekha