5 ಅಸ್ಥಿಪಂಜರ ಪತ್ತೆ ಕೇಸ್‌ – ತಮ್ಮ ಮನೆಗಳಿಗೆ ಬೀಗ ಹಾಕಿ ತೆರಳಿದ ಸ್ಥಳೀಯ ನಿವಾಸಿಗಳು!

5 ಅಸ್ಥಿಪಂಜರ ಪತ್ತೆ ಕೇಸ್‌ – ತಮ್ಮ ಮನೆಗಳಿಗೆ ಬೀಗ ಹಾಕಿ ತೆರಳಿದ ಸ್ಥಳೀಯ ನಿವಾಸಿಗಳು!

ಚಿತ್ರದುರ್ಗದ ಚಳ್ಳಕೆರೆ ಗೇಟ್ ಸಮೀಪವಿರುವ ಜೈಲ್ ರಸ್ತೆಯಲ್ಲಿರುವ ಪಾಳುಬಿದ್ದ ಮನೆಯಲ್ಲಿ ಐದು ಅಸ್ಥಿಪಂಜರಗಳು ಪತ್ತೆ ಆಗಿವೆ. ಸತತ 4 ವರ್ಷಗಳಿಂದ ಬಾಗಿಲು ಮುಚ್ಚಿದ್ದ ಮನೆಯಲ್ಲಿ ಐದು ಅಸ್ಥಿಪಂಜರ ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಅಲ್ಲಿನ ಅಕ್ಕಪಕ್ಕದ ನಿವಾಸಿಗಳು ತಮ್ಮ ಮನೆಗಳಿಗೆ ಬೀಗ ಹಾಕಿ ತೆರಳಿದ್ದಾರೆ. ಸದಾ ಜನನಿಬಿಡ‌ಪ್ರದೇಶವಾಗಿದ್ದ‌ ಜಿಲ್ಲಾ ಕಾರಾಗೃಹ ರಸ್ತೆ ಇದೀಗ ಬಿಕೋ ಎನ್ನುತ್ತಿದೆ.

ಇದನ್ನೂ ಓದಿ: ಯತ್ನಾಳ್ ಅಡ್ಡಕ್ಕೆ ವಿಜಯೇಂದ್ರ! – ರೆಬೆಲ್ ನಾಯಕನ ಉಚ್ಚಾಟನೆ ಫಿಕ್ಸ್? 

ಹೌದು, ಐದು ಅಸ್ಥಿಪಂಜರ ಪತ್ತೆಯಾದ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಅಲ್ಲಿನ ಜನರು ಭಯಗೊಂಡಿದ್ದಾರೆ.  ಅಕ್ಕಪಕ್ಕದ ನಿವಾಸಿಗಳು ತಮ್ಮ ತಮ್ಮ ಮನೆಗಳಿಗೆ ಬೀಗ ಹಾಕಿ ತೆರಳಿದ್ದಾರೆ. ಅಲ್ಲಿನ ನಿವಾಸಿಗಳು ಆತಂಕಗೊಂಡು ತಮ್ಮ ತಮ್ಮ ಮನೆಗಳಿಗೆ ಬೀಗ ಹಾಕಿ ನೆಂಟರ ಊರುಗಳಿಗೆ ತೆರಳಿದ್ದಾರೆ. ಇತ್ತ ಅಸ್ಥಿಪಂಜರ ಪತ್ತೆಯಾದ ಹಿನ್ನೆಲೆಯಲ್ಲಿ ಭಯಗೊಂಡಿರುವ ವಾಯುವಿಹಾರಿಗಳು ಕೂಡ ಶನಿವಾರ ರಸ್ತೆಯತ್ತ ಮುಖಮಾಡಿಲ್ಲ. ಪ್ರತಿ ದಿನ ನಾಗರಿಕರು ಬೆಳಗ್ಗೆ ಮತ್ತು ಸಂಜೆ ಈ ರಸ್ತೆಯಲ್ಲಿ ವಾಕಿಂಗ್‌ ಬರುತ್ತಿದ್ದರು. ಆದರೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಅವರು ಕೂಡ ಭಯಗೊಂಡಿದ್ದಾರೆ. ಇದೇ ರಸ್ತೆಯ ಕೊನೆಯಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ಗಳು ಇದ್ದು, ಅಲ್ಲಿಗೂ ಗ್ರಾಹಕರು ಬರುತ್ತಿಲ್ಲ ಎನ್ನಲಾಗಿದೆ. ಒಟ್ಟಿನಲ್ಲಿ ವಾಹನ ಸಂಚಾರ, ಜನದಟ್ಟಣೆ ಇಲ್ಲದೇ ಜೈಲು ರಸ್ತೆ‌ ಬಿಕೋ ಎನ್ನುತ್ತಿದೆ.

ಏನಿದು ಘಟನೆ..?

ಚಿತ್ರದುರ್ಗದ ನಗರದ ಪಾಳು ಬಿದ್ದ ಮನೆಯೊಂದರಲ್ಲಿ 5 ಅಸ್ಥಿಪಂಜರ  ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಸತತ 4 ವರ್ಷಗಳಿಂದ ಬಾಗಿಲು ಮುಚ್ಚಿದ್ದ ಮನೆಯಲ್ಲಿ ಐದು ಅಸ್ಥಿಪಂಜರ ಪತ್ತೆಯಾಗಿವೆ ಎಂದು ದೂರು ದಾಖಲಾಗಿತ್ತು. ಈ ಸಂಬಂಧ ಪವನ್ ಕುಮಾರ್ ಎಂಬವರು ಬಡಾವಣೆ ಠಾಣೆಗೆ ದೂರು ನೀಡಿದ್ದರು. ಸಂಬಂಧಿ ಜಗನ್ನಾಥ ರೆಡ್ಡಿ ಮತ್ತು ಕುಟುಂಬ ವಾಸವಾಗಿತ್ತು. ಸುಮಾರು ವರ್ಷಗಳಿಂದ ಜಗನ್ನಾಥ ರೆಡ್ಡಿ ಕುಟುಂಬ ನಮ್ಮ ಸಂಪರ್ಕದಲ್ಲಿರಲಿಲ್ಲ. ನಮ್ಮ ಮನೆಗೆ ಅವರು ಬರುತ್ತಿರಲಿಲ್ಲ. ಅವರ ಮನೆಗೆ ನಾವು ಹೋಗುತ್ತಿರಲಿಲ್ಲ. ಕೆಲ ವರ್ಷಗಳಿಂದ ಜಗನ್ನಾಥ ರೆಡ್ಡಿ ಮತ್ತು ಕುಟುಂಬದವರು ಕಂಡಿಲ್ಲ. ಜಗನ್ನಾಥ ರೆಡ್ಡಿ ಮನೆಯಲ್ಲಿ ಪತ್ತೆ ಆಗಿರುವುದು ಅವರ ಅಸ್ಥಿಪಂಜರ ಆಗಿರಬಹುದೆಂಬ ಶಂಕೆ ಇದೆ. 3 ವರ್ಷದ ಹಿಂದೆಯೇ ಮನೆಯಲ್ಲಿ ಮೃತಪಟ್ಟಿರಬಹುದು ಎಂದು ಮೃತರ ಸಾವಿನ ಬಗ್ಗೆ ಅನುಮಾನ ಇದೆ ಎಂದು ದೂರಿನಲ್ಲಿ ತಿಳಿಸಿದ್ದರು.

ಈ ಸಂಬಂಧ ಎಸ್‌ಪಿ ಧರ್ಮೇಂದರ್ ಕುಮಾರ್, ಡಿವೈಎಸ್ಪಿ ಅನಿಲ್‌ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ 4 ವರ್ಷದ ಹಿಂದಿನ ಡೆತ್‍ನೋಟ್ ಈ ಐವರ ಸಾವಿನ ಸುಳಿವನ್ನು ಕೊಟ್ಟಿತ್ತು. ಸಾವಿಗೂ ಮುನ್ನ ಈ ಐವರು ಡೆತ್‍ನೋಡ್ ಬರೆದಿಟ್ಟಿದ್ದು, ಅದರಲ್ಲಿ ಕಾರಣವನ್ನು ತಿಳಿಸಿದ್ದಾರೆ. ಜೈಲು ಪಾಲಾಗಿದ್ದಕ್ಕೆ ಮನನೊಂದು ಐವರು ಸಾವಿಗೆ ಶರಣಾಗಿರುವುದು ಬಯಲಾಗಿತ್ತು.

ಮೃತ ಜಗನ್ನಾಥರೆಡ್ಡಿ ಪುತ್ರ ನರೇಂದ್ರರೆಡ್ಡಿ ವಿರುದ್ಧ ದರೋಡೆ ಪ್ರಕರಣ ದಾಖಲಾಗಿತ್ತು. 2013ರಲ್ಲಿ ಖಾಸಗಿ ಕಂಪನಿಯೊಂದರಲ್ಲಿ ನರೇಂದ್ರ ರೆಡ್ಡಿ ಎಂಜಿನಿಯರ್ ಆಗಿದ್ದರು. ಇದೇ ವರ್ಷ ಬಿಡದಿ ಬಳಿ ಅವರ ವಾಹನವನ್ನು ತಡೆದು ದರೋಡೆ ಕೇಸ್ ದಾಖಲು ಮಾಡಲಾಗಿತ್ತು. ನರೇಂದ್ರ ಅವರು ತಮ್ಮ ಗೆಳೆಯರ ಜೊತೆ ತೆರಳಿ ದರೋಡೆ ಕೇಸಲ್ಲಿ ಭಾಗಿ ಆಗಿದ್ದರು. ಹೀಗಾಗಿ ದರೋಡೆ ಕೇಸಲ್ಲಿ ಕೆಲದಿನ ಜೈಲುವಾಸವನ್ನೂ ಅನುಭವಿಸಿದ್ದರು. ನರೇಂದ್ರರೆಡ್ಡಿ ವಿರುದ್ಧದ ಕೇಸಿನಿಂದ ಮನನೊಂದಿದ್ದ ಕುಟುಂಬ 2019ರಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಶರಣಾಗಿದೆ ಎಂಬ ಶಂಕೆ ವ್ಯಕ್ತವಾಗಿತ್ತು. ಸದ್ಯ ಪ್ರಕರಣದ ತನಿಖೆ ಚುರುಕುಗೊಂಡಿದೆ.

Shwetha M