ಅವಳಿ ಬಾಂಬ್ ಸ್ಫೋಟ – 100ಕ್ಕೂ ಅಧಿಕ ಮಂದಿ ಸಾವು, 150ಕ್ಕೂ ಹೆಚ್ಚು ಮಂದಿಗೆ ಗಾಯ

ಇರಾನ್ನಲ್ಲಿ ಅವಳಿ ಬಾಂಬ್ ಸ್ಪೋಟಗೊಂಡಿದೆ. ಇರಾನ್ ಸೇನಾಧಿಕಾರಿಯಾಗಿದ್ದ ಖಾಸಿಂ ಸುಲೇಮಾನಿ ಅವರ ಎರಡನೇ ವರ್ಷದ ಪುಣ್ಯ ಸ್ಮರಣೆ ವೇಳೆ ಸ್ಪೋಟಗೊಂಡಿದ್ದು. 103 ಮಂದಿ ಧಾರುಣವಾಗಿ ಸಾವನ್ನಪ್ಪಿದ್ದಾರೆ. 150ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಇರಾನ್ನ ದಕ್ಷಿಣ ನಗರಿ ಕೆರ್ಮಾನ್ನಲ್ಲಿ ಬುಧವಾರ ಕಾರ್ಯಕ್ರಮವೊಂದನ್ನು ಆಯೋಜನೆ ಮಾಡಲಾಗಿತ್ತು. ಈ ವೇಳೆ ಅವಳಿ ಬಾಂಬ್ ಸ್ಫೋಟಗೊಂಡಿದೆ. 2020ರಲ್ಲಿ ಅಮೆರಿಕಾವು ಬಾಗ್ದಾದ್ದ ವಿಮಾನ ನಿಲ್ದಾಣದ ಮೇಲೆ ಡ್ರೋಣ್ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಕಮಾಂಡರ್ ಕಾಸ್ಸೇಮ್ ಸೋಲೈಮನಿ ಹತರಾಗಿದ್ದರು. ಇವರ ಸ್ಮರಣಾರ್ಥ ಕಾರ್ಯಕ್ರಮವನ್ನು ಪ್ರತಿ ವರ್ಷ ಇರಾನ್ನಲ್ಲಿ ಆಯೋಜಿಸಲಾಗುತ್ತಿದೆ. ಕೆರ್ಮಾನ್ನಲ್ಲಿರುವ ಕಾಸ್ಸೇಮ್ ಸೋಲೈಮನಿ ಅವರ ಸ್ಮಾರಕದ ಬಳಿಯೇ ಈ ಕಾರ್ಯಕ್ರಮವನ್ನು ನಡೆಸಿಕೊಂಡು ಬರಲಾಗುತ್ತಿದೆ. ಈ ವರ್ಷದ ಕಾರ್ಯಕ್ರಮವನ್ನು ಬುಧವಾರ ಆಯೋಜನೆ ಮಾಡಲಾಗಿದ್ದು, ಇದೇ ಸಂದರ್ಭ ಅವಳಿ ಬಾಂಬ್ ಸ್ಫೋಟ ನಡೆದಿದೆ.
ಇದನ್ನೂ ಓದಿ: 20 ವರ್ಷದ ವಿದ್ಯಾರ್ಥಿಯನ್ನು ಪ್ರೀತಿಸಿ ಮದುವೆಯಾದ 40 ವರ್ಷದ ಶಿಕ್ಷಕಿ!
ಘಟನೆಯ ಸಂದರ್ಭದಲ್ಲಿ ಅಪಾರ ಸಂಖ್ಯೆಯಲ್ಲಿ ಸ್ಥಳೀಯರು ಸ್ಥಳದಲ್ಲಿ ಜಮಾಯಿಸಿದ್ದರು. ಈ ವೇಳೆ ಮೊದಲು ಅನಿಲ ತುಂಬಿದ ಡಬ್ಬಿಯನ್ನು ಎಸೆಯಲಾಯಿತು. ಇದು ಸಿಡಿಯುತಲೇ ಇನ್ನಷ್ಟು ಡಬ್ಬಗಳನ್ನು ನಿರಂತರವಾಗಿ ಎಸೆಯಲಾಯಿತು. ಆಗ ಭಯಾನಕ ಸ್ಪೋಟಗಳು ಸಂಭವಿಸಿದವು ಎಂದು ಇರಾನ್ನ ಮಾಧ್ಯಮಗಳು ವರದಿ ಮಾಡಿವೆ.
ಈ ದಾಳಿಯಿಂದ ಮೊದಲು 20ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು. ಸಂಜೆಯ ವೇಳೆಗೆ ಸಾವಿನ ಸಂಖ್ಯೆ ಹೆಚ್ಚಾಗಿದ್ದು, 103 ದಾಟಿತ್ತು. 150ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಇನ್ನು ಬಾಂಬ್ ಸ್ಟೋಟಗಳಿಂದ ಗಾಯಗೊಂಡ ಹಲವರ ಆಕ್ರಂದನ, ಅಲ್ಲಿನ ರಕ್ತಸಿಕ್ತ ಪರಿಸ್ಥಿತಿಯನ್ನು ಕಂಡು ಹಲವರು ನಿಂತಲ್ಲೇ ಕುಸಿದು ಬಿದ್ದ ಪ್ರಸಂಗವೂ ನಡೆದಿದೆ.
ಘಟನೆ ನಡೆಯುತ್ತಿದ್ದಂತೆಯೇ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ರವಾನಿಸಿದರು. ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆಯಿದೆ. ಸದ್ಯ ರಕ್ಷಣಾ ಕಾರ್ಯ ಮುಂದುವರಿದಿದೆ ಎಂದು ಕೆರ್ಮಾನ್ ಪ್ರದೇಶದ ರೆಡ್ ಕ್ಸೆಸೆಂಟ್ನ ಮುಖ್ಯಸ್ಥ ರೇಝಾ ಫಲ್ಹಾಹ್ ತಿಳಿಸಿದ್ದಾರೆ.