ಡ್ರೋನ್ ಪ್ರತಾಪ್ ಅಸ್ಪಸ್ಥ- ಬಿಗ್‌ಬಾಸ್ ಮನೆಯಿಂದ ತಕ್ಷಣವೇ ಆಸ್ಪತ್ರೆಗೆ ಶಿಫ್ಟ್

ಡ್ರೋನ್ ಪ್ರತಾಪ್ ಅಸ್ಪಸ್ಥ- ಬಿಗ್‌ಬಾಸ್ ಮನೆಯಿಂದ ತಕ್ಷಣವೇ ಆಸ್ಪತ್ರೆಗೆ ಶಿಫ್ಟ್

ಬಿಗ್ ಬಾಸ್ ಮನೆಯಲ್ಲಿ ಮತ್ತೊಂದು ಎಡವಟ್ಟಾಗಿದೆ. ಡ್ರೋನ್ ಪ್ರತಾಪ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಡ್ರೋನ್ ಪ್ರತಾಪ್ ಗೆ ಫುಡ್ ಪಾಯ್ಸನ್ ಆಗಿದೆ ಎನ್ನಲಾಗಿದೆ. ಅವರನ್ನು ರಾಜರಾಜೇಶ್ವರಿ ನಗರದ ಎಸ್ಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಿಗ್ ಬಾಸ್ ಮನೆಯಲ್ಲಿ ಅನಾರೋಗ್ಯಕ್ಕೀಡಾದ ಪ್ರತಾಪ್ ಅವರನ್ನು ತಕ್ಷಣವೇ ಎಸ್ಎಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು ಅಲ್ಲಿಯೇ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: 3 ವರ್ಷಗಳ ನಂತರ ಅಪ್ಪ ಅಮ್ಮನ ಸಮಾಗಮ – ಹೆತ್ತವರ ನೋಡಿ ಗಳಗಳನೆ ಕಣ್ಣೀರು ಸುರಿಸಿದ ಡ್ರೋನ್ ಪ್ರತಾಪ್

ಬಿಗ್ ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ಕಾಣಿಸಿಕೊಂಡಿಲ್ಲ. ಹಾಗಾಗಿ ಸಹಜವಾಗಿಯೇ ಅವರ ಅಭಿಮಾನಿಗಳಲ್ಲಿ ಆತಂಕ ಹೆಚ್ಚಾಗಿದೆ. ಕಳೆದ ಬಾರಿ ಕಣ್ಣಿಗೆ ಸೋಪಿನ ನೀರು ಹಾಕಿಸಿಕೊಂಡು ಆಸ್ಪತ್ರೆ  ಸೇರಿದ್ದರು. ಆದರೆ, ಈ ಬಾರಿ ಅವರಿಗೆ ಆಹಾರದಲ್ಲಿ ವ್ಯತ್ಯಾಸವಾಗಿ ಆಸ್ಪತ್ರೆ ಸೇರಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ಇನ್ನೂ ಕೆಲವರು ಬಿಗ್ ಬಾಸ್ ಮನೆಗೆ ವಾಪಸ್ಸು ಆಗದೇ ಇರುವಂತಹ ಘಟನೆ ನಡೆದಿದೆ ಎಂದೂ ಬರೆದುಕೊಂಡಿದ್ದಾರೆ. ಫುಡ್ ಪಾಯಿಸನ್ ಆಗಿದೆ ಎಂದು ಕೆಲವು ಮೂಲಗಳು ಮಾಹಿತಿ ನೀಡಿದರೆ, ಇನ್ನೂ ಕೆಲವರು ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂದು ಹೇಳುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಕೋವಿಡ್ ಸೋಂಕು ಏನಾದರೂ ತಗಲಿರಬಹುದಾ ಎನ್ನುವ ಪ್ರಶ್ನೆಯನ್ನೂ ಮಾಡಿದ್ದಾರೆ. ಹಾಗಾಗಿ ಸಹಜವಾಗಿಯೇ ಡ್ರೋನ್ ಪ್ರತಾಪ್ ಅವರ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದೆ. ಪ್ರತಾಪ್ ಅವರಿಗೆ ಏನಾಗಿದೆ ಎಂದು ತಿಳಿಸಿ ಎಂದು ವಾಹಿನಿಗೆ ಸೋಷಿಯಲ್ ಮೀಡಿಯಾ ಮೂಲಕ ಕೇಳುತ್ತಿದ್ದಾರೆ.

ಡ್ರೋನ್ ಪ್ರತಾಪ್ ಅವರ ಟೀಮ್ ಹ್ಯಾಂಡಲ್ ಮಾಡುವಂತಹ ಸೋಷಿಯಲ್ ಮೀಡಿಯಾದಲ್ಲಿ ಊಟದಲ್ಲಿ ಸ್ವಲ್ಪ ವ್ಯತ್ಯಾಸ ಉಂಟಾಗಿ ಹುಷಾರು ತಪ್ಪಿದ್ದಾರೆ. ಇನ್ನ ಸ್ವಲ್ಪ ಸಮಯದ ಒಳಗೆ ಬಿಗ್ ಬಾಸ್ ಮನೆಗೆ ನಿಮ್ಮ ಡ್ರೋನ್ ಪ್ರತಾಪ್ ಅವರು ತೆರಳಿದ್ದಾರೆ. ಅವರಿಗೆ ವೋಟ್ ಮಾಡಿ’ ಎಂದು ಪೋಸ್ಟ್ ಮಾಡಿದ್ದಾರೆ.

ಕೆಲವು ಮೂಲಗಳ ಪ್ರಕಾರ ಅವರಿಗೆ ಫುಡ್‌ ಪಾಯ್ಸನ್‌ ಆಗಿದೆ ಎನ್ನಲಾಗಿದೆ. ಎಸ್ಎಸ್‌ ಆಸ್ಪತ್ರೆಯಲ್ಲಿ ಡ್ರೋನ್ ಪ್ರತಾಪ್ ಚೇತರಿಸಿಕೊಳ್ಳುತ್ತಿದ್ದಾರೆ. ಬಿಗ್​ಬಾಸ್​ ಮನೆಯಲ್ಲಿ ತಮ್ಮನ್ನು ಕಡೆಗೆಣಿಸಿದ್ದಕ್ಕೆ ಪ್ರತಾಪ್​ ಅಸಾಮಾಧಾನಗೊಂಡಿದ್ದಾರೆ. ಟಾಸ್ಕ್ ವಿಚಾರದಲ್ಲಿ ಕಡೆಗಣಿಸಿದ್ದಕ್ಕೆ ಪ್ರತಾಪ್​ ಬೇಸರಗೊಂಡಿದ್ದರು. ಈ ವಿಚಾರವಾಗಿ ಬಿಗ್​ಬಾಸ್​​ ಮನೆಯಲ್ಲಿ ಡ್ರೋಣ್ ಪ್ರತಾಪ್​ ಕಣ್ಣೀರಿಟ್ಟಿದ್ದರು. ಇತ್ತೀಚೆಗೆ ಬಿಗ್‌ ಬಾಸ್‌ ಮನೆಗೆ ಆಗಮಿಸಿದ್ದ ಸ್ವಾಮೀಜಿಯೊಬ್ಬರು ಮಾತನಾಡುವ ವೇಳೆ, ಪ್ರತಾಪ್‌ ಅವರು ಕುಟುಂಬದಿಂದ ದೂರವೇ ಇದ್ದರೆ ಒಳಿತಾಗುತ್ತದೆ ಎಂದು ಹೇಳಿದ್ದರು. ಅಂದಿನಿಂದ ಪ್ರತಾಪ್‌ ಅವರು ಮಾನಸಿಕವಾಗಿ ಕುಗ್ಗಿ ಹೋಗಿದ್ದರು. ಅದರ ನಡುವೆ, ಮನೆಯಲ್ಲಿದ್ದ ಇತರ ಸ್ಪರ್ಧಿಗಳ ಹೀಯಾಳಿಕೆಯ ಮಾತಿನಿಂದ ಅವರು ಬೇಸರಗೊಂಡಿದ್ದರು ಎನ್ನಲಾಗಿದೆ.

Sulekha