ಶ್ರೀರಾಮನಿಗೆ ಅಪಮಾನ ಆರೋಪ – ಲೇಡಿ ಸೂಪರ್‌ ಸ್ಟಾರ್‌ ನಯನತಾರಾ ವಿರುದ್ಧ ಪ್ರಕರಣ ದಾಖಲು

ಶ್ರೀರಾಮನಿಗೆ ಅಪಮಾನ ಆರೋಪ – ಲೇಡಿ ಸೂಪರ್‌ ಸ್ಟಾರ್‌ ನಯನತಾರಾ ವಿರುದ್ಧ ಪ್ರಕರಣ ದಾಖಲು

ಲೇಡಿ ಸೂಪರ್‌ ಸ್ಟಾರ್‌ ನಯನತಾರಾಗೆ ಕಾನೂನು ಸಂಕಷ್ಟ ಶುರುವಾಗಿದೆ. ನಯನತಾರಾ ನಟನೆಯ ಅನ್ನಪೂರ್ಣಿ ಸಿನಿಮಾದಲ್ಲಿ ಶ್ರೀರಾಮನಿಗೆ ಹಾಗೂ ಹಿಂದೂ ಧರ್ಮೀಯರ ಭಾವನೆಗೆ ಧಕ್ಕೆಯಾಗುವ ಸನ್ನಿವೇಶ ಇವೆ ಅನ್ನೋ ಕಾರಣಕ್ಕೆ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಚಿತ್ರದ ನಿರ್ದೇಶಕ, ನಿರ್ಮಾಪಕ ಹಾಗೂ ನಟಿ ನಯನತಾರಾ ಅವರ ಮೇಲೂ ಕೇಸ್‌ ದಾಖಲಾಗಿದೆ.

ಇದನ್ನೂ ಓದಿ: ಗುಂಟೂರು ಖಾರಂ ಸಿನಿಮಾ ನೋಡಿದರೆ ನಿದ್ದೆ ಬರುತ್ತದೆ – ಟಾಲಿವುಡ್ ಪ್ರಿನ್ಸ್ ಫ್ಯಾನ್ಸ್‌ಗೆ ಸಿಕ್ಕಾಪಟ್ಟೆ ನಿರಾಶೆ

ನಯನತಾರಾ ನಟನೆಯ ಅನ್ನಪೂರ್ಣಿ ಸಿನಿಮಾದಲ್ಲಿ ಶ್ರೀರಾಮನಿಗೆ ಹಾಗೂ ಹಿಂದೂ ಧರ್ಮಕ್ಕೆ ಧಕ್ಕೆ ಆಗುವಂತಹ ಸನ್ನಿವೇಶಗಳ ಇವೆ. ಈ ಚಿತ್ರದಲ್ಲಿ ಶ್ರೀರಾಮನನ್ನು ಮಾಂಸಾಹಾರಿಯಾಗಿ ತೋರಿಸಲಾಗಿದೆ ಎನ್ನುವ ಕಾರಣಕ್ಕಾಗಿ ಹಲವಾರು ಜನರು ಆಕ್ರೋಶ ವ್ಯಕ್ತ ಪಡಿಸಿದ್ದರು. ವಿವಾದ ಭುಗಿಲೇಳುತ್ತಿದ್ದಂತೆಯೇ ‘ಅನ್ನಪೂರ್ಣಿ’ಸಿನಿಮಾವನ್ನು ನೆಟ್ ಫಿಕ್ಸ್ ಕೂಡ ತೆಗೆದು ಹಾಕಿದೆ. ಈ ಸಿನಿಮಾ ಬಗ್ಗೆ ಸಾಕಷ್ಟು ಟೀಕೆಗಳು ಕೇಳಿ ಬಂದಿದ್ದವು. ಅಲ್ಲದೇ, ಸಿನಿಮಾ ಬಗ್ಗೆ ದೂರು ಕೂಡ ದಾಖಲಾಗಿತ್ತು. ಹಿಂದೂ ಭಾವನೆಗಳಿಗೆ ಧಕ್ಕೆ ಮಾಡಲಾಗಿದೆ ಎನ್ನುವ ಕಾರಣಕ್ಕಾಗಿ ಚಿತ್ರದ ವಿರುದ್ಧ ಪ್ರತಿಭಟನೆ ಕೂಡ ಮಾಡಲಾಗಿತ್ತು. ಇದೀಗ ನಿರ್ದೇಶಕ, ನಿರ್ಮಾಪಕ ಹಾಗೂ ನಟಿ ನಯನತಾರಾ ಮೇಲೆ ಮಧ್ಯ ಪ್ರದೇಶದ ಜಬಲ್ ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಲೇಡಿ ಸೂಪರ್ ಸ್ಟಾರ್ ನಯನತಾರಾಗೆ ಇದು 75ನೇ ಸಿನಿಮಾ. ಈ ಸಿನಿಮಾದಲ್ಲಿ ನಯನತಾರಾ ಹೊಸ ಬಗೆಯ ಪಾತ್ರ ಮಾಡಿದ್ದಾರೆ. ಅವರ ಗೆಟಪ್ ಕಂಡು ಅಭಿಮಾನಿಗಳು ಸಂಭ್ರಮಿಸಿದ್ದರು. ಪಕ್ಕಾ ಸಂಪ್ರದಾಯಸ್ಥ ಕುಟುಂಬದ ಹುಡುಗಿಯಾಗಿ ನಯನತಾರಾ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

ಡಿಸೆಂಬರ್‌ನಲ್ಲಿ ‘ಅನ್ನಪೂರ್ಣಿ’ ಎಂಬ ಸಿನಿಮಾ ರಿಲೀಸ್ ಆಗಿತ್ತು. ಒಟಿಟಿಯಲ್ಲಿ ರಿಲೀಸ್ ಆಗಿ ಪ್ರೇಕ್ಷಕರ ಮೆಚ್ಚುಗೆ ಪಡೆದಿತ್ತು. ಚಿತ್ರದಲ್ಲಿ ನಯನತಾರಾ ತಂದೆ ಪಾತ್ರದಲ್ಲಿ ಕನ್ನಡದ ನಟ ಅಚ್ಯುತ್ ಕುಮಾರ್ ನಟಿಸಿದ್ದರು. ಅವರ ಮನೋಜ್ಞ ನಟನೆಗೆ ನಯನತಾರಾ ಮೆಚ್ಚುಗೆ ಸೂಚಿಸಿದ್ದರು. ಆದ್ರೆ ಈಗ ಈ ಚಿತ್ರ ವಿವಾದಕ್ಕೆ ಕಾರಣವಾಗಿದೆ. ವಿವಾದಿತ ದೃಶ್ಯಗಳನ್ನು ತೆಗೆದು ಹಾಕುವವರೆಗೂ ಅನ್ನಪೂರ್ಣಿ ಒಟಿಟಿಯಲ್ಲಿ ಸಿಗಲಾರದು.

Shwetha M